ಬೇಸಿಗೆ ರಜೆ ಪ್ರಯುಕ್ತ ವಿಶೇಷ ರೈಲುಗಳ ಸಂಚಾರ: ಇಲ್ಲಿದೆ ಸಂಪೂರ್ಣ ಮಾಹಿತಿ
ಹುಬ್ಬಳ್ಳಿ, ಏಪ್ರಿಲ್ 28: ಬೇಸಿಗೆ ರಜೆಯ ಪ್ರಯಾಣಿಕರ ದಟ್ಟಣೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ನೈಋತ್ಯ ರೈಲ್ವೆಯು ಈ ಕೆಳಗಿನ ವಿಶೇಷ ಎಕ್ಸ್ ಪ್ರೆಸ್ ರೈಲುಗಳನ್ನು ಓಡಿಸಲು ನಿರ್ಧರಿಸಿದೆ. ಅದರಂತೆ, ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್-ಬೆಳಗಾವಿ ನಡುವೆ ಎರಡು ಟ್ರಿಪ್‌ಗಳು, ಯಶವಂತಪುರ-ವಿಜಯಪುರ ಮತ್ತು ಎಸ್ಎಂವಿಟಿ ಬೆಂಗಳೂರು-ಮಧುರೈ ನಡುವೆ ತಲಾ ಒಂದು ಟ್ರಿಪ್ ಸೇರಿವೆ.
ಈ ವಿಶೇಷ ರೈಲುಗಳ ವಿವರ ಈ ಕೆಳಗಿನಂತಿದೆ:
1. ಎಸ್ಎಂವಿಟಿ ಬೆಂಗಳೂರು-ಬೆಳಗಾವಿ ನಡುವೆ ಎರಡು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ (06551/06552) ರೈಲು ಸಂಚಾರ
ರೈಲು ಸಂಖ್ಯೆ 06551 ಎಸ್ಎಂವಿಟಿ ಬೆಂಗಳೂರು-ಬೆಳಗಾವಿ ವಿಶೇಷ ವಿಶೇಷ ಎಕ್ಸ್ ಪ್ರೆಸ್ ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್‌ನಿಂದ ಏಪ್ರಿಲ್ 30 ಮತ್ತು ಮೇ 2, 2025 ರಂದು ಸಂಜೆ 7:00 ಗಂಟೆಗೆ ಹೊರಟು, ಮರುದಿನ ಬೆಳಿಗ್ಗೆ 07:30 ಗಂಟೆಗೆ ಬೆಳಗಾವಿಯನ್ನು ತಲುಪಲಿದೆ.

ಹಿಂತಿರುಗುವ ಮಾರ್ಗದಲ್ಲಿ, ರೈಲು ಸಂಖ್ಯೆ 06552 ಬೆಳಗಾವಿ- ಎಸ್ಎಂವಿಟಿ ಬೆಂಗಳೂರು ವಿಶೇಷ ಎಕ್ಸ್ ಪ್ರೆಸ್ ಬೆಳಗಾವಿಯಿಂದ ಮೇ 1 ಮತ್ತು 3, 2025 ರಂದು ಸಂಜೆ 05:30 ಗಂಟೆಗೆ ಹೊರಟು, ಮರುದಿನ ಬೆಳಗಿನ ಜಾವ 04:30 ಗಂಟೆಗೆ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರನ್ನು ತಲುಪಲಿದೆ.
ಈ ರೈಲುಗಳು ಎರಡೂ ಮಾರ್ಗಗಳಲ್ಲಿ ತುಮಕೂರು, ಅರಸಿಕೆರೆ, ಬೀರೂರು, ದಾವಣಗೆರೆ, ಹರಿಹರ, ಎಸ್ಎಂಎಂ. ಹಾವೇರಿ, ಎಸ್ಎಸ್ಎಸ್. ಹುಬ್ಬಳ್ಳಿ, ಧಾರವಾಡ, ಅಳ್ನಾವರ, ಲೋಂಡಾ ಮತ್ತು ಖಾನಾಪುರ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರಲಿವೆ.

ಈ ರೈಲಿನಲ್ಲಿ 1 ಎಸಿ-ಟು ಟೈರ್, 01 ಎಸಿ-ತ್ರಿ ಟೈರ್, 08 ಸ್ಲೀಪರ್ ಕ್ಲಾಸ್, 04 ಸಾಮಾನ್ಯ ದ್ವಿತೀಯ ದರ್ಜೆ ಮತ್ತು 02 ಎಸ್ಎಲ್ಆರ್/ಡಿ ಬೋಗಿಗಳು ಸೇರಿದಂತೆ ಒಟ್ಟು 16 ಬೋಗಿಗಳು ಇರಲಿವೆ.
2. ಯಶವಂತಪುರ-ವಿಜಯಪುರ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ (06561/06562) ರೈಲು ಸಂಚಾರ
ರೈಲು ಸಂಖ್ಯೆ 06561 ಯಶವಂತಪುರ - ವಿಜಯಪುರ ವಿಶೇಷ ಎಕ್ಸ್ ಪ್ರೆಸ್ ಯಶವಂತಪುರದಿಂದ ಏಪ್ರಿಲ್ 30, 2025 ರಂದು ರಾತ್ರಿ 10:00 ಗಂಟೆಗೆ ಹೊರಟು, ಮರುದಿನ ಮಧ್ಯಾಹ್ನ 02:05 ಗಂಟೆಗೆ ವಿಜಯಪುರವನ್ನು ತಲುಪಲಿದೆ.
ಹಿಂತಿರುಗುವ ಮಾರ್ಗದಲ್ಲಿ, ರೈಲು ಸಂಖ್ಯೆ 06562 ವಿಜಯಪುರ-ಯಶವಂತಪುರ ವಿಶೇಷ ಎಕ್ಸ್ ಪ್ರೆಸ್ ವಿಜಯಪುರದಿಂದ ಮೇ 1, 2025 ರಂದು ಸಂಜೆ 7:00 ಗಂಟೆಗೆ ಹೊರಟು, ಮರುದಿನ ಬೆಳಿಗ್ಗೆ 11:15 ಗಂಟೆಗೆ ಯಶವಂತಪುರವನ್ನು ತಲುಪಲಿದೆ.
ಈ ರೈಲುಗಳು ಎರಡೂ ಮಾರ್ಗಗಳಲ್ಲಿ ತುಮಕೂರು, ಅರಸಿಕೆರೆ, ಬೀರೂರು, ಚಿಕ್ಕಜಾಜೂರು, ಚಿತ್ರದುರ್ಗ, ರಾಯದುರ್ಗ, ಬಳ್ಳಾರಿ ಕಂಟೋನ್ಮೆಂಟ್, ತೋರಣಗಲ್ಲು, ಹೊಸಪೇಟೆ, ಕೊಪ್ಪಳ, ಗದಗ, ಬದಾಮಿ, ಬಾಗಲಕೋಟೆ ಮತ್ತು ಆಲಮಟ್ಟಿ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರಲಿವೆ.
ಈ ರೈಲಿನಲ್ಲಿ 02 ಎಸಿ-ಟು ಟೈರ್, 06 ಎಸಿ-ತ್ರಿ ಟೈರ್, 07 ಸ್ಲೀಪರ್ ಕ್ಲಾಸ್, 04 ಸಾಮಾನ್ಯ ದ್ವಿತೀಯ ದರ್ಜೆ ಮತ್ತು 02 ಲಗೇಜ್/ಜನರೇಟರ್/ಬ್ರೇಕ್ ವ್ಯಾನ್ಗಳು ಸೇರಿದಂತೆ ಒಟ್ಟು 21 ಬೋಗಿಗಳು ಇರಲಿವೆ.
3. ಎಸ್ಎಂವಿಟಿ ಬೆಂಗಳೂರು-ಮಧುರೈ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ (06521/06522) ರೈಲು ಸಂಚಾರ
ರೈಲು ಸಂಖ್ಯೆ 06521 ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು - ಮಧುರೈ ವಿಶೇಷ ಎಕ್ಸ್ ಪ್ರೆಸ್ ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್‌ನಿಂದ ಏಪ್ರಿಲ್ 30, 2025 ರಂದು ಸಂಜೆ 07:00 ಗಂಟೆಗೆ ಹೊರಟು, ಮರುದಿನ ಬೆಳಿಗ್ಗೆ 06:15 ಗಂಟೆಗೆ ಮಧುರೈಯನ್ನು ತಲುಪಲಿದೆ.
ಹಿಂತಿರುಗುವ ಮಾರ್ಗದಲ್ಲಿ, ರೈಲು ಸಂಖ್ಯೆ 06522 ಮಧುರೈ - ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ವಿಶೇಷ ಎಕ್ಸ್ ಪ್ರೆಸ್ ಮಧುರೈಯಿಂದ ಮೇ 1, 2025 ರಂದು ಬೆಳಿಗ್ಗೆ 09:10 ಗಂಟೆಗೆ ಹೊರಟು, ಅದೇ ದಿನ ಸಂಜೆ 07:50 ಗಂಟೆಗೆ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರನ್ನು ತಲುಪಲಿದೆ.
ಈ ರೈಲುಗಳು ಎರಡೂ ಮಾರ್ಗಗಳಲ್ಲಿ ಕೃಷ್ಣರಾಜಪುರಂ, ಬಂಗಾರಪೇಟೆ, ಸೇಲಂ, ನಾಮಕ್ಕಲ್, ಕರೂರು, ದಿಂಡಿಗುಲ್ ಮತ್ತು ಕೊಡೈಕೆನಾಲ್ ರೋಡ್ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರಲಿವೆ.
ಈ ರೈಲಿನಲ್ಲಿ 2 ಎಸಿ-ಟು ಟೈರ್, 16 ಎಸಿ-ತ್ರಿ ಟೈರ್ ಮತ್ತು 2 ಲಗೇಜ್/ಜನರೇಟರ್/ಬ್ರೇಕ್ ವ್ಯಾನ್ಗಳು ಸೇರಿದಂತೆ ಒಟ್ಟು 20 ಬೋಗಿಗಳು ಇರಲಿವೆ.
ಈ ರೈಲುಗಳ ಪ್ರತಿ ನಿಲ್ದಾಣದ ಆಗಮನ ಮತ್ತು ನಿರ್ಗಮನದ ವೇಳಾಪಟ್ಟಿಯನ್ನು ತಿಳಿಯಲು ಭಾರತೀಯ ರೈಲ್ವೆಯ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಬಹುದು ಅಥವಾ ನಿಮ್ಮ ಹತ್ತಿರದ ರೈಲ್ವೆ ಬುಕಿಂಗ್ ಕೌಂಟರ್‌ಗಳನ್ನು ಸಂಪರ್ಕಿಸಬಹುದು.
ಮುಂಗಾರು ವೇಳಾಪಟ್ಟಿ ಜಾರಿ: ಆಯ್ದ ರೈಲುಗಳ ಸಂಚಾರ ಸಮಯ ಬದಲಾವಣೆ
ಹುಬ್ಬಳ್ಳಿ: ಮುಂಗಾರು ಮಳೆಯನ್ನು ಗಮನದಲ್ಲಿಟ್ಟುಕೊಂಡು ಪ್ರಯಾಣಿಕರ ಸುರಕ್ಷತೆ ಮತ್ತು ರೈಲುಗಳ ಸುಗಮ ಸಂಚಾರಕ್ಕಾಗಿ ನೈರುತ್ಯ ರೈಲ್ವೆಯ ವ್ಯಾಪ್ತಿಯಲ್ಲಿ ಸಂಚರಿಸುವ ಕೆಲವು ರೈಲುಗಳ ವೇಳಾಪಟ್ಟಿಯನ್ನು ಬದಲಾಯಿಸಲಾಗಿದೆ ಎಂದು ಕೊಂಕಣ ರೈಲ್ವೆ ನಿಗಮ ನಿಯಮಿತ ತಿಳಿಸಿದೆ. ಈ ಪರಿಷ್ಕೃತ ವೇಳಾಪಟ್ಟಿ 2025ರ ಜೂನ್ ಹದಿನೈದರಿಂದ ಅಕ್ಟೋಬರ್ ಇಪ್ಪತ್ತರವರೆಗೆ ಜಾರಿಯಲ್ಲಿರುತ್ತದೆ.
ಪರಿಷ್ಕೃತ ಸಮಯವು 2025ರ ಜೂನ್ ಹದಿನೈದರಂದು ಅಥವಾ ನಂತರ ತಮ್ಮ ಮೂಲ ನಿಲ್ದಾಣಗಳಿಂದ ಹೊರಡುವ ರೈಲುಗಳಿಗೆ ಅನ್ವಯಿಸುತ್ತದೆ.
ಮುಂಗಾರು ವೇಳಾಪಟ್ಟಿ ಅನ್ವಯವಾಗುವ ರೈಲುಗಳ ವಿವರ
1. ರೈಲು ಸಂಖ್ಯೆ 16595/16596 ಕೆಎಸ್ಆರ್ ಬೆಂಗಳೂರು-ಕಾರವಾರ-ಕೆಎಸ್ಆರ್ ಬೆಂಗಳೂರು ಡೈಲಿ ಎಕ್ಸ್‌ಪ್ರೆಸ್.
2. ರೈಲು ಸಂಖ್ಯೆ 16585/16586 ಎಸ್ಎಮ್ವಿಟಿ ಬೆಂಗಳೂರು-ಮುರ್ಡೇಶ್ವರ-ಎಸ್ಎಮ್ವಿಟಿ ಬೆಂಗಳೂರು ಡೈಲಿ ಎಕ್ಸ್‌ಪ್ರೆಸ್.
3. ರೈಲು ಸಂಖ್ಯೆ 16515/16516 ಯಶವಂತಪುರ-ಕಾರವಾರ-ಯಶವಂತಪುರ ಟ್ರೈ-ವೀಕ್ಲಿ ಎಕ್ಸ್‌ಪ್ರೆಸ್.
4. ರೈಲು ಸಂಖ್ಯೆ 12741/12742 ವಾಸ್ಕೋ-ಡ-ಗಾಮಾ - ಪಾಟ್ನಾ - ವಾಸ್ಕೋ-ಡ-ಗಾಮಾ ಸಾಪ್ತಾಹಿಕ ಸೂಪರ್ಫಾಸ್ಟ್ ಎಕ್ಸ್‌ಪ್ರೆಸ್.
5. ರೈಲು ಸಂಖ್ಯೆ 11097/11098 ಪುಣೆ-ಎರ್ನಾಕುಲಂ-ಪುಣೆ ಸಾಪ್ತಾಹಿಕ ಎಕ್ಸ್‌ಪ್ರೆಸ್.
ಈ ರೈಲುಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರು ತಮ್ಮ ಪ್ರಯಾಣದ ದಿನಾಂಕದ ಮುಂಚಿತವಾಗಿ ಪರಿಷ್ಕೃತ ವೇಳಾಪಟ್ಟಿಯನ್ನು ಖಚಿತಪಡಿಸಿಕೊಳ್ಳಲು ಸೂಚಿಸಲಾಗಿದೆ. ನವೀಕರಿಸಲಾದ ವೇಳಾಪಟ್ಟಿಯ ಕುರಿತಾದ ಮಾಹಿತಿಯು ಭಾರತೀಯ ರೈಲ್ವೆಯ ಅಧಿಕೃತ ಜಾಲತಾಣಗಳಲ್ಲಿ ಹಾಗೂ ರೈಲು ನಿಲ್ದಾಣಗಳಲ್ಲಿ ಲಭ್ಯವಿರುತ್ತದೆ.
-
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ












Click it and Unblock the Notifications