Shivamogga Airport: ಅಕ್ಟೋಬರ್ 10ರಿಂದ 2 ಹೊಸ ಮಾರ್ಗದಲ್ಲಿ ವಿಮಾನ ಸಂಚಾರ

ಶಿವಮೊಗ್ಗ, ಸೆಪ್ಟೆಂಬರ್ 22: ಶಿವಮೊಗ್ಗದ ಜನರಿಗೆ ಮತ್ತೊಂದು ಸಿಹಿಸುದ್ದಿ ಇದೆ. ಶಿವಮೊಗ್ಗ ವಿಮಾನ ನಿಲ್ದಾಣದಿಂದ ಎರಡು ಹೊಸ ವಿಮಾನ ಸೇವೆ ಆರಂಭಿಸುವುದಾಗಿ ಸ್ಪೈಸ್ ಜೆಟ್ ವಿಮಾನಯಾನ ಸಂಸ್ಥೆ ಘೋಷಣೆ ಮಾಡಿದೆ. ಅಲ್ಲದೇ ತನ್ನ ವೆಬ್‌ಸೈಟ್‌ನಲ್ಲಿ ಬುಕ್ಕಿಂಗ್ ಆರಂಭಿಸಿದೆ. ಈಗಾಗಲೇ ಬೆಂಗಳೂರು, ಹೈದರಾಬಾದ್, ಗೋವಾಕ್ಕೆ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದಿಂದ ವಿಮಾನ ಸೇವೆ ಇದೆ.

ಸ್ಪೈಸ್‌ ಜೆಟ್ ಶಿವಮೊಗ್ಗ ನಗರಕ್ಕೆ ಪಾದಾರ್ಪಣೆ ಮಾಡಿದೆ. ಅಕ್ಟೋಬರ್ 10 ರಿಂದ ಎರಡು ಮಾರ್ಗದಲ್ಲಿ ವಿಮಾನ ಸೇವೆಯನ್ನು ಆರಂಭಿಸಲಾಗುತ್ತದೆ ಎಂದು ಸಂಸ್ಥೆ ಹೇಳಿದೆ. ಶಿವಮೊಗ್ಗ-ಹೈದರಾಬಾದ್ ಮತ್ತು ಶಿವಮೊಗ್ಗ-ಚೆನ್ನೈ ಮಾರ್ಗದಲ್ಲಿ ವಿಮಾನ ಸೇವೆ ಆರಂಭವಾಗಲಿದ್ದು, ಬುಕ್ಕಿಂಗ್ ಆರಂಭವಾಗಿದೆ.

SpiceJet Introduces Shivamogga To Hyderabad And Chenni Flights From October 10

ಶಿವಮೊಗ್ಗ ವಿಮಾನ ನಿಲ್ದಾಣದಿಂದ ಪ್ರಸ್ತುತ ಸ್ಟಾರ್ ಏರ್ ಮತ್ತು ಇಂಡಿಗೋ ಮಾತ್ರ ವಿಮಾನ ಸೇವೆ ನೀಡುತ್ತಿವೆ. ಈಗ ಸ್ಪೈಸ್‌ ಜೆಟ್ ಸಹ ವಿಮಾನ ಸೇವೆ ಆರಂಭಿಸುವ ಮೂಲಕ ಶಿವಮೊಗ್ಗ ನಗರಕ್ಕೆ ಮತ್ತೊಂದು ವಿಮಾನ ಸೇವೆ ಆರಂಭವಾಗುತ್ತಿದೆ. ಮಲೆನಾಡು ಭಾಗದಿಂದ ಹೈದರಾಬಾದ್ ಮತ್ತು ಚೆನ್ನೈಗೆ ಪ್ರಯಾಣಿಸುವ ಜನರಿಗೆ ಅನುಕೂಲವಾಗಲಿದೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಶಿವಮೊಗ್ಗ ತಾಲೂಕಿನ ಸೋಗಾನೆ ಗ್ರಾಮದಲ್ಲಿರುವ ವಿಮಾನ ನಿಲ್ದಾಣವನ್ನು 27.02.2023ರಂದು ಲೋಕಾರ್ಪಣೆ ಮಾಡಿದ್ದರು. ಸದ್ಯ ಶಿವಮೊಗ್ಗದಿಂದ ಬೆಂಗಳೂರು, ಹೈದರಾಬಾದ್, ತಿರುಪತಿ, ಗೋವಾಕ್ಕೆ ವಿಮಾನ ಸೇವೆ ಇದೆ. ಈಗ ಇನ್ನೂ ಎರಡು ಮಾರ್ಗದಲ್ಲಿ ವಿಮಾನ ಸೇವೆ ಆರಂಭವಾಗಿದ್ದು, ಜನರು ವಿಮಾನ ಸೇವೆ ಉಪಯೋಗ ಪಡೆದುಕೊಳ್ಳಬೇಕು ಎಂದು ಕರೆ ನೀಡಲಾಗಿದೆ.

ದೊಡ್ಡ ರನ್‌ವೇ ಇದೆ: ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ನಿರ್ಮಾಣವಾಗಬೇಕು ಎಂಬುದು ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಕನಸು. ಅವರು ಮುಖ್ಯಮಂತ್ರಿಯಾಗಿದ್ದಾಗ ಯೋಜನೆಗೆ ಇದ್ದ ಅಡೆತಡೆ ನಿವಾರಣೆ ಮಾಡಿ ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆ ಮಾಡಿದ್ದರು. ಶಿವಮೊಗ್ಗ ತಾಲೂಕಿನ ಸೋಗಾನೆ ಗ್ರಾಮದಲ್ಲಿರುವ ವಿಮಾನ ನಿಲ್ದಾಣ ರಾಜ್ಯದ 3ನೇ ಉದ್ದದ ರನ್‌ವೇಯನ್ನು ಹೊಂದಿದೆ.

ಬಿ. ಎಸ್. ಯಡಿಯೂರಪ್ಪ ಹುಟ್ಟುಹಬ್ಬದಂದೇ ವಿಮಾನ ನಿಲ್ದಾಣವನ್ನು ಉದ್ಘಾಟನೆ ಮಾಡಲಾಯಿತು. ಇಂಡಿಗೋ ಏರ್‌ಲೈನ್ಸ್ 31.08.2023ರಿಂದ ಬೆಂಗಳೂರು-ಶಿವಮೊಗ್ಗ ಮಾರ್ಗದಲ್ಲಿ ಮೊದಲು ವಿಮಾನ ಸೇವೆಯನ್ನು ಆರಂಭಿಸಿತು. ಶಿವಮೊಗ್ಗ ನಗರದಿಂದ ದೇಶದ ಪ್ರಮುಖ ಮೆಟ್ರೋ ನಗರಗಳಿಗೆ ವಿಮಾನ ಸಂಪರ್ಕ ಕಲ್ಪಿಸಲು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

ಸುಮಾರು 662.38 ಎಕರೆ ಪ್ರದೇಶದಲ್ಲಿ ಸುಸಜ್ಜಿತ ವಿಮಾನ ನಿಲ್ದಾಣ ನಿರ್ಮಾಣವಾಗಿದೆ. ಹವಾಮಾನ ವೈಪರೀತ್ಯ ಮತ್ತು ರಾತ್ರಿ ವೇಳೆಯೂ ವಿಮಾನವನ್ನು ಲ್ಯಾಂಡ್ ಮಾಡಲು ಸಾಧ್ಯವಾಗುವಂತೆ ವಿಮಾನ ನಿಲ್ದಾಣದಲ್ಲಿ ಕಾಮಗಾರಿಯನ್ನು ಕೈಗೊಳ್ಳಲಾಗಿದೆ. ಇದು ಪೂರ್ಣಗೊಂಡರೆ ರಾತ್ರಿ ವೇಳೆಯೂ ನಗರಕ್ಕೆ ವಿಮಾನ ಸಂಪರ್ಕ ಸಾಧ್ಯವಾಗುತ್ತದೆ. ಉಡಾನ್ ಯೋಜನೆಯಿಂದಾಗಿ ವಿವಿಧ ನಗರಗಳಿಗೆ ಸಂಪರ್ಕ ಕಲ್ಪಿಸಲಾಗುತ್ತದೆ.

ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮ ಶಿವಮೊಗ್ಗ ವಿಮಾನ ನಿಲ್ದಾಣದ ಕಾರ್ಯಾಚರಣೆ ಮತ್ತು ನಿರ್ವಹಣೆಯನ್ನು ನೋಡಿಕೊಳ್ಳುತ್ತಿದೆ. ಕರ್ನಾಟಕದಲ್ಲಿ ರಾಜ್ಯ ಸರ್ಕಾರದಿಂದ ನಿರ್ವಹಿಸಲ್ಪಡುವ ಮೊದಲ ವಿಮಾನ ನಿಲ್ದಾಣವಿದು. ನಿಗಮವು ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಅಗತ್ಯವಿರುವ ಮಾನವ ಸಂಪನ್ಮೂಲವನ್ನು ನಿಯೋಜನೆ ಮಾಡಿದೆ.

ನಿಲ್ದಾಣದಲ್ಲಿ ಪ್ಯಾಸೆಂಜರ್ ಟರ್ಮಿನಲ್ ಬಿಲ್ಡಿಂಗ್ ಪೀಕ್ ಅವರ್‌ನಲ್ಲಿ ಸುಮಾರು 300 ಪ್ರಯಾಣಿಕರನ್ನು ನಿಭಾಯಿಸಲು ವಿನ್ಯಾಸಗೊಳಿಸಲಾಗಿದೆ. ರನ್‌ವೇ, ಏಪ್ರನ್, ಐಸೋಲೇಶನ್ ಬೇ, ಟ್ಯಾಕ್ಸಿವೇ ಮತ್ತು ಇತರ ಮೂಲಸೌಕರ್ಯ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಏರ್‌ಬಸ್-320 ಮಾದರಿಯ ವಿಮಾನ ಕಾರ್ಯಾಚರಣೆಗೆ ಅನುಕೂಲವಾಗುವಂತೆ ರನ್‌ ವೇ ವಿನ್ಯಾಸಗೊಳಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+