ಆಗಸ್ಟ್‌ 15ರಿಂದ ಮತ್ತೊಂದು ನಗರಕ್ಕೆ ಶಿವಮೊಗ್ಗದಿಂದ ವಿಮಾನ ಸೇವೆ

ಶಿವಮೊಗ್ಗ, ಜುಲೈ 15: ಶಿವಮೊಗ್ಗ ವಿಮಾನ ನಿಲ್ದಾಣದಿಂದ ಮತ್ತೊಂದು ನಗರಕ್ಕೆ ವಿಮಾನ ಸೇವೆ ಆರಂಭವಾಗಲಿದೆ. 2023 ಫೆಬ್ರವರಿಯಲ್ಲಿ ವಿಮಾನ ನಿಲ್ದಾಣ ಉದ್ಘಾಟನೆಗೊಂಡಿದ್ದು, ಇದು ಮಲೆನಾಡು ಭಾಗದ ಮೊದಲ ವಿಮಾನ ನಿಲ್ದಾಣವಾಗಿದೆ.

ಶಿವಮೊಗ್ಗ ಸಂಸದ ಬಿ. ವೈ. ರಾಘವೇಂದ್ರ ಈ ಕುರಿತು ಮಾಹಿತಿ ನೀಡಿದ್ದಾರೆ. ಆಗಸ್ಟ್‌ 15ರಿಂದ ಶಿವಮೊಗ್ಗ-ಚೆನ್ನೈ ನಡುವೆ ಸ್ಪೈಸ್ ಜೆಟ್ ವಿಮಾನ ಸೇವೆಯನ್ನು ಆರಂಭಿಸಲಿದೆ ಎಂದು ಮಾಹಿತಿ ನೀಡಿದ್ದಾರೆ.

SpiceJet To Start Shivamogga Chennai Flight From August 15

ಈ ಕುರಿತು ಅವರು ಸಾಮಾಜಿಕ ಜಾಲತಾಣದಲ್ಲಿಯೂ ಮಾಹಿತಿ ನೀಡಿದ್ದಾರೆ. 'ಶಿವಮೊಗ್ಗದಿಂದ ಚೆನ್ನೈಗೆ ಆಗಸ್ಟ್ 15ರಿಂದ ವಿಮಾನಯಾನ ಸೇವೆ ಪ್ರಾರಂಭವಾಗಲಿದೆ. ಚೆನ್ನೈ ವಿಮಾನ ಹಾರಾಟದ ಜೊತೆಗೆ ವಾರದಲ್ಲಿ ಒಂದು ದಿನ ಹೈದರಾಬಾದ್ ಸೇರಿದಂತ ಪ್ರಮುಖ ನಗರಗಳಿಗೂ ಸ್ಟೈಸ್ ಜೆಟ್ ವಿಮಾನ ಹಾರಾಟ ನಡೆಸಲಿದೆ' ಎಂದು ಹೇಳಿದ್ದಾರೆ.

'ಮೋಡ ಮುಸುಕಿದ ವಾತಾವರಣ ಮತ್ತು ರಾತ್ರಿ ವೇಳೆಯಲ್ಲೂ ವಿಮಾನ ಲ್ಯಾಂಡಿಂಗ್ ಆಗುವಂತಹ ವ್ಯವಸ್ಥೆಯನ್ನು ತ್ವರಿತವಾಗಿ ಮಾಡುವಂತೆ ವಿಮಾನ ನಿಲ್ದಾಣದ ನಿರ್ವಹಣಾ ಸಂಸ್ಥೆಗೆ ಪತ್ರ ಬರೆಯಲಾಗಿದೆ. ಈ ಸಂಬಂಧ ಹೊಸದಿಲ್ಲಿಯಲ್ಲಿ ಬುಧವಾರ ಅಧಿಕಾರಿಗಳ ಸಭೆ ಕರೆಯಲಾಗಿದೆ. ಶೀಘ್ರದಲ್ಲೇ ಸಮಸ್ಯೆ ನಿವಾರಣೆಯಾಗಲಿದೆ. ಇದು ಮಲೆನಾಡಿನ ಉದ್ಯಮ, ಜೀವನಮಟ್ಟ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಮತ್ತಷ್ಟು ಬಲ ನೀಡುವ ನಿರೀಕ್ಷೆ ಮೂಡಿಸಿದೆ' ಎಂದು ರಾಘವೇಂದ್ರ ತಿಳಿಸಿದ್ದಾರೆ.

ಶಿವಮೊಗ್ಗದಿಂದ ಬೆಂಗಳೂರು, ಗೋವಾ ಸೇರಿದಂತೆ ವಿವಿಧ ನಗರಗಳಿಗೆ ವಿಮಾನ ಸಂಪರ್ಕವಿದೆ. ಉಡಾನ್ ಯೋಜನೆಯಡಿ ನಿಲ್ದಾಣ ಸೇರಿಸಿ ಇನ್ನೂ ಹಲವು ನಗರಗಳಿಗೆ ವಿಮಾನ ಸೇವೆ ಆರಂಭಿಸಬೇಕು ಎಂಬ ಬೇಡಿಕೆಯೂ ಇದೆ.

ಸದ್ಯ ಶಿವಮೊಗ್ಗ ಬೆಂಗಳೂರು, ಹೈದಬಾರಾದ್, ಗೋವಾ ಮತ್ತು ತಿರುಪತಿಗೆ ವಿಮಾನ ಸಂಪರ್ಕವನ್ನು ಹೊಂದಿದೆ. ಶಿವಮೊಗ್ಗ-ಮುಂಬೈ ಮಾರ್ಗಕ್ಕೆ ಬೇಡಿಕೆ ಇಡಲಾಗಿದೆ. ಒಟ್ಟು 12 ನಗರಗಳಿಗೆ ಸಂಪರ್ಕ ಕಲ್ಪಿಸಲು ವಿಮಾನಯಾನ ಸಚಿವಾಲಯಕ್ಕೆ ಮನವಿ ಸಲ್ಲಿಕೆ ಮಾಡಲಾಗಿದೆ.

ವಿಮಾನ ವಾಪಸ್ ಆಗಿತ್ತು: ಮೋಡ ಮುಸುಕಿದ ವಾತಾವರಣದ ಕಾರಣ ಶಿವಮೊಗ್ಗದಲ್ಲಿ ವಿಮಾನ ಲ್ಯಾಂಡ್ ಮಾಡಲು ಸಮಸ್ಯೆ ಆಗಿದೆ. ಕಳೆದ ವಾರ ಗೃಹ ಸಚಿವ ಡಾ. ಜಿ. ಪರಮೇಶ್ವರ ಇದ್ದ ವಿಮಾನ ಶಿವಮೊಗ್ಗದಲ್ಲಿ ಲ್ಯಾಂಡ್ ಮಾಡಲು ಸಾಧ್ಯವಾಗದೇ ವಾಪಸ್ ಆಗಿತ್ತು.

ಮೋಡ ಮುಸುಕಿದ ವಾತಾವರಣ ಮತ್ತು ರಾತ್ರಿ ವೇಳೆಯಲ್ಲೂ ವಿಮಾನ ಲ್ಯಾಂಡಿಂಗ್ ಆಗುವಂತಹ ವ್ಯವಸ್ಥೆಯನ್ನು ಮಾಡಲಾಗುತ್ತದೆ. ಇದನ್ನು ತ್ವರಿತವಾಗಿ ಮಾಡುವಂತೆ ವಿಮಾನ ನಿಲ್ದಾಣದ ನಿರ್ವಹಣಾ ಸಂಸ್ಥೆಗೆ ಪತ್ರ ಬರೆಯಲಾಗಿದೆ.

ಸದ್ಯ ಶಿವಮೊಗ್ಗ ಬೆಂಗಳೂರು, ಹೈದಬಾರಾದ್, ಗೋವಾ ಮತ್ತು ತಿರುಪತಿಗೆ ವಿಮಾನ ಸಂಪರ್ಕವನ್ನು ಹೊಂದಿದೆ. ಶಿವಮೊಗ್ಗ-ಮುಂಬೈ ಮಾರ್ಗಕ್ಕೆ ಬೇಡಿಕೆ ಇಡಲಾಗಿದೆ. ಒಟ್ಟು 12 ನಗರಗಳಿಗೆ ಸಂಪರ್ಕ ಕಲ್ಪಿಸಲು ವಿಮಾನಯಾನ ಸಚಿವಾಲಯಕ್ಕೆ ಮನವಿ ಸಲ್ಲಿಕೆ ಮಾಡಲಾಗಿದೆ.

ಶಿವಮೊಗ್ಗ ತಾಲೂಕಿನ ಸೋಗಾನೆ ಗ್ರಾಮದಲ್ಲಿ ಸುಮಾರು 662.38 ಎಕರೆ ಪ್ರದೇಶದಲ್ಲಿ ಸುಸಜ್ಜಿತ ವಿಮಾನ ನಿಲ್ದಾಣ ನಿರ್ಮಾಣ ಮಾಡಲಾಗಿದೆ. ಬೆಂಗಳೂರು ಹೊರತುಪಡಿಸಿದರೆ ರಾಜ್ಯದಲ್ಲಿ ಅತಿ ಉದ್ದದ ರನ್‌ ವೇ ಹೊಂದಿರುವ ವಿಮಾನ ನಿಲ್ದಾಣ ಇದಾಗಿದೆ.

ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ನಿರ್ಮಾಣವಾಗಬೇಕು ಎಂಬುದು ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಕನಸಾಗಿತ್ತು. 2023ರ ಫೆಬ್ರವರಿ 27ರಂದು ಯಡಿಯೂರಪ್ಪ ಜನ್ಮದಿನದಂದೇ ಪ್ರಧಾನಿ ನರೇಂದ್ರ ಮೋದಿ ಶಿವಮೊಗ್ಗ ವಿಮಾನ ನಿಲ್ದಾಣವನ್ನು ಲೋಕಾರ್ಪಣೆ ಮಾಡಿದ್ದರು.

ಮೊದಲು ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ 2050 ಮೀಟರ್ ರನ್ ವೇ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿತ್ತು. ಆದರೆ ಏರ್‌ಬಸ್ ಸೇರಿದಂತೆ ದೊಡ್ಡ ವಿಮಾನಗಳು ಇಳಿಯಲು ಅನುಕೂಲವಾಗುವಂತೆ ರನ್ ವೇ ಉದ್ದವನ್ನು 3200 ಮೀಟರ್‌ಗೆ ಹೆಚ್ಚಿಸಲು ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿತ್ತು. ಇದರಿಂದಾಗಿ ವಿಮಾನ ನಿಲ್ದಾಣದ ವೆಚ್ಚ ಹೆಚ್ಚುವರಿಯಾಗಿ 75 ಕೋಟಿ ರೂ.ಗಳಿಗೆ ಏರಿಕೆಯಾಗಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+