ನೈಋತ್ಯ ರೈಲ್ವೆಯಿಂದ ಕೆಲವು ರೈಲು ಸೇವೆಯಲ್ಲಿ ಬದಲಾವಣೆ; ರೈಲುಗಳ ಪಟ್ಟಿ
ಬೆಂಗಳೂರು, ಸೆಪ್ಟೆಂಬರ್ 01; ನೈಋತ್ಯ ರೈಲ್ವೆ ಪ್ರಯಾಣಿಕರ ವಿಶೇಷ ಗಮನಕ್ಕೆ ಎಂದು ಪತ್ರಿಕಾ ಪ್ರಕಟಣೆಯೊಂದನ್ನು ಹೊರಡಿಸಿದೆ. ಕೆಲವು ರೈಲುಗಳನ್ನು ರದ್ದು/ ಭಾಗಶಃ ರದ್ದು/ ತಡವಾಗಿ ಪ್ರಾರಂಭ ಮತ್ತು ಮಾರ್ಗ ಮಧ್ಯ ನಿಯಂತ್ರಿಸಲಾಗುತ್ತಿದೆ ಎಂದು ವಿವರಗಳನ್ನು ನೀಡಿದೆ.
ಉಗಾರ ಖುರ್ದ್-ಕುಡಚಿ ಭಾಗದ ನಡುವಿನ ಜೋಡಿ ಮಾರ್ಗದ ಇಂಜಿನಿಯರಿಂಗ್ ಕಾಮಗಾರಿ ಸಲುವಾಗಿ ಕೆಲವು ರೈಲುಗಳ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ. ಸೆಪ್ಟೆಂಬರ್ ತಿಂಗಳ ಮೊದಲ ವಾರ ರೈಲು ಪ್ರಯಾಣ ಮಾಡುವವರು ಈ ಮಾಹಿತಿ ತಿಳಿದಿರುವುದು ಉತ್ತಮ.

ಯಾವ ರೈಲುಗಳನ್ನು ರದ್ದು ಮಾಡಲಾಗಿದೆ, ಭಾಗಶಃ ರದ್ದುಗೊಳಿಸಲಾಗಿದೆ. ಯಾವ-ಯಾವ ರೈಲುಗಳು ತಡವಾಗಿ ಪ್ರಾರಂಭವಾಗಲಿದೆ ಎಂದು ಪ್ರಕಟಣೆಯಲ್ಲಿ ವಿವರಣೆ ನೀಡಲಾಗಿದೆ. ರೈಲುಗಳ ಮಾಹಿತಿ ಇಲ್ಲಿದೆ.
ರೈಲುಗಳು ರದ್ದು
* ರೈಲು ಸಂಖ್ಯೆ 17332 ಎಸ್.ಎಸ್.ಎಸ್ ಹುಬ್ಬಳ್ಳಿ-ಮಿರಜ್ ಡೈಲಿ ಎಕ್ಸ್‌ಪ್ರೆಸ್ ರೈಲನ್ನು ಸೆಪ್ಟೆಂಬರ್ 4 ರಿಂದ 8 ರವರೆಗೆ ರದ್ದುಗೊಳಿಸಲಾಗುತ್ತಿದೆ.
* ರೈಲು ಸಂಖ್ಯೆ 17333 ಮೀರಜ್-ಕ್ಯಾಸಲ್ ರಾಕ್ ಡೈಲಿ ಎಕ್ಸ್‌ಪ್ರೆಸ್ ರೈಲನ್ನು ಸೆಪ್ಟೆಂಬರ್ 4 ರಿಂದ 8 ರವರೆಗೆ ರದ್ದುಗೊಳಿಸಲಾಗುತ್ತಿದೆ.
* ರೈಲು ಸಂಖ್ಯೆ 17334 ಕ್ಯಾಸಲ್ ರಾಕ್-ಮಿರಾಜ್ ಡೈಲಿ ಎಕ್ಸ್‌ಪ್ರೆಸ್ ರೈಲನ್ನು ಸೆಪ್ಟೆಂಬರ್ 4ರಿಂದ 8 ರವರೆಗೆ ರದ್ದುಗೊಳಿಸಲಾಗುತ್ತಿದೆ.
* ರೈಲು ಸಂಖ್ಯೆ 17331 ಮೀರಜ್-ಎಸ್.ಎಸ್.ಎಸ್ ಹುಬ್ಬಳ್ಳಿ ಡೈಲಿ ಎಕ್ಸ್‌ಪ್ರೆಸ್ ರೈಲನ್ನು ಸೆಪ್ಟೆಂಬರ್ 5 ರಿಂದ 9 ರವರೆಗೆ ರದ್ದುಗೊಳಿಸಲಾಗುತ್ತಿದೆ.
ರೈಲುಗಳು ಭಾಗಶಃ ರದ್ದು
* ಸೆಪ್ಟೆಂಬರ್ 3 ರಿಂದ 7 ರವರೆಗೆ ತಿರುಪತಿಯಿಂದ ಪ್ರಾರಂಭವಾಗುವ ರೈಲು ಸಂಖ್ಯೆ 17415 ತಿರುಪತಿ- ಕೊಲ್ಲಾಪುರ ಹರಿಪ್ರಿಯಾ ಡೈಲಿ ಎಕ್ಸ್‌ಪ್ರೆಸ್ ರೈಲನ್ನು ಬೆಳಗಾವಿ-ಕೊಲ್ಲಾಪುರ ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳಿಸಲಾಗುತ್ತಿದೆ. ಈ ರೈಲು ಸೇವೆ ಬೆಳಗಾವಿಯಲ್ಲಿ ಕೊನೆ.
* ರೈಲು ಸಂಖ್ಯೆ 17416 ಕೊಲ್ಲಾಪುರ-ತಿರುಪತಿ ಹರಿಪ್ರಿಯಾ ಡೈಲಿ ಎಕ್ಸ್‌ಪ್ರೆಸ್ ರೈಲನ್ನು ಕೊಲ್ಲಾಪುರ-ಬೆಳಗಾವಿ ನಿಲ್ದಾಣಗಳ ನಡುವೆ ಸೆಪ್ಟೆಂಬರ್ 4 ರಿಂದ 8 ರವರೆಗೆ ಭಾಗಶಃ ರದ್ದುಗೊಳಿಸಲಾಗುತ್ತಿದೆ. ಈ ರೈಲು ತನ್ನ ನಿಗದಿತ ಸಮಯದಲ್ಲಿ ಕೊಲ್ಲಾಪುರ ನಿಲ್ದಾಣದ ಬದಲು ಬೆಳಗಾವಿ ನಿಲ್ದಾಣದಿಂದ ಪ್ರಾರಂಭ.
ರೈಲುಗಳು ತಡವಾಗಿ ಪ್ರಾರಂಭ
* ರೈಲು ಸಂಖ್ಯೆ 16590 ಮೀರಜ್-ಕೆ.ಎಸ್.ಆರ್ ಬೆಂಗಳೂರು ರಾಣಿ ಚೆನ್ನಮ್ಮ ಎಕ್ಸ್‌ಪ್ರೆಸ್ ರೈಲನ್ನು ಸೆಪ್ಟೆಂಬರ್ 3, 4, 5 ರಂದು 40 ನಿಮಿಷ ಹಾಗೂ ಸೆಪ್ಟೆಂಬರ್ 8 ರಂದು 60 ನಿಮಿಷಗಳ ಕಾಲ ಮಿರಜ್ ನಿಲ್ದಾಣದಿಂದ ತಡವಾಗಿ ಪ್ರಾರಂಭವಾಗಲಿದೆ.
* ರೈಲು ಸಂಖ್ಯೆ 16542 ಪಂಢರಪುರ-ಯಶವಂತಪುರ ಸಾಪ್ತಾಹಿಕ ಎಕ್ಸ್‌ಪ್ರೆಸ್ ರೈಲು ಸೆಪ್ಟೆಂಬರ್ 8 ರಂದು ಪಂಢರಪುರ ನಿಲ್ದಾಣದಿಂದ 60 ನಿಮಿಷ ಕಾಲ ತಡವಾಗಿ ಪ್ರಾರಂಭವಾಗಲಿದೆ.
ಮಾರ್ಗ ಮಧ್ಯ ನಿಯಂತ್ರಣ
* ಸೆಪ್ಟೆಂಬರ್ 4 ರಂದು ಎರ್ನಾಕುಲಂ ನಿಲ್ದಾಣದಿಂದ ಹೊರಡುವ ರೈಲು ಸಂಖ್ಯೆ 11098 ಎರ್ನಾಕುಲಂ-ಪುಣೆ ಎಕ್ಸ್‌ಪ್ರೆಸ್ ರೈಲನ್ನು ಮಾರ್ಗ ಮಧ್ಯ 30 ನಿಮಿಷ ಕಾಲ ನಿಯಂತ್ರಿಸಲಾಗುತ್ತಿದೆ.
* ಸೆಪ್ಟೆಂಬರ್ 4 ರಂದು ಹಜರತ್ ನಿಜಾಮುದ್ದೀನ್ ನಿಲ್ದಾಣದಿಂದ ಹೊರಡುವ ರೈಲು ಸಂಖ್ಯೆ 12782 ಹಜರತ್ ನಿಜಾಮುದ್ದೀನ್-ಮೈಸೂರು ಸೂಪರ್‌ಫಾಸ್ಟ್, ಎಕ್ಸ್‌ಪ್ರೆಸ್ ರೈಲನ್ನು ಮಾರ್ಗ ಮಧ್ಯ 30 ನಿಮಿಷ ಕಾಲ ನಿಯಂತ್ರಿಸಲಾಗುತ್ತದೆ.












Click it and Unblock the Notifications