ಬೆಂಗಳೂರು, ಚೆನ್ನೈ, ಮೈಸೂರು ಪ್ರಯಾಣಿಕರ ಗಮನಕ್ಕೆ
ಬೆಂಗಳೂರು, ಸೆಪ್ಟೆಂಬರ್ 07; ದಕ್ಷಿಣ ರೈಲ್ವೆ ವಲಯದ ಸೂಚನೆ ಹಿನ್ನಲೆಯಲ್ಲಿ ನೈಋತ್ಯ ರೈಲ್ವೆ ಕೆಲವು ರೈಲುಗಳ ಸಂಚಾರ ಭಾಗಶಃ ರದ್ದುಗೊಳಿಸಿದೆ. ಮಾರ್ಗ ಮಧ್ಯ ಕೆಲವು ರೈಲು ನಿಯಂತ್ರಣಗೊಳಿಸಿದೆ, ಕೆಲವು ರೈಲು ಮಾರ್ಗ ಬದಲಾವಣೆ ಮಾಡಿ ಆದೇಶ ಹೊರಡಿಸಿದೆ.
ಚೆನ್ನೈ ವಿಭಾಗದಲ್ಲಿ ಸೆಪ್ಟೆಂಬರ್ 2023 ತಿಂಗಳ ನಿರ್ವಹಣಾ ಕೆಲಸದ ಕಾರಣದಿಂದ ಕೆಲವು ರೈಲುಗಳ ಸೇವೆಯಲ್ಲಿ ಬದಲಾವಣೆ ಮಾಡಲು ದಕ್ಷಿಣ ರೈಲ್ವೆ ವಲಯವು ಸೂಚನೆ ನೀಡಿದೆ. ಈ ಹಿನ್ನಲೆಯಲ್ಲಿ ಈ ಕುರಿತು ಪ್ರಕಟಣೆ ಮೂಲಕ ಮಾಹಿತಿ ನೀಡಲಾಗಿದೆ.

ವಾರಾಂತ್ಯದಲ್ಲಿ ಬೆಂಗಳೂರು-ಚೆನ್ನೈ ಸೇರಿದಂತೆ ಚೆನ್ನೈ ವಿಭಾಗದ ವ್ಯಾಪ್ತಿಯಲ್ಲಿ ಸಂಚಾರ ನಡೆಸುವ ಪ್ರಯಾಣಿಕರ ಈ ಕುರಿತು ಮಾಹಿತಿ ತಿಳಿದಿರುವುದು ಉತ್ತಮ. ಯಾವ-ಯಾವ ರೈಲುಗಳ ಸೇವೆಯಲ್ಲಿ ಬದಲಾವಣೆಯಾಗಿದೆ? ಎಂಬ ಮಾಹಿತಿ ಇಲ್ಲಿದೆ.
ರೈಲು ಭಾಗಶಃ ರದ್ದು
* ರೈಲು ಸಂಖ್ಯೆ 12608 ಕೆ.ಎಸ್.ಆರ್ ಬೆಂಗಳೂರು-ಎಂ.ಜಿ.ಆರ್ ಚೆನ್ನೈ ಸೆಂಟ್ರಲ್ ಲಾಲ್‌ಬಾಗ್ ಡೈಲಿ ಎಕ್ಸ್‌ಪ್ರೆಸ್ ರೈಲನ್ನು 6/9/23, 13/9/23, 20/9/23, 27/9/23 ಮತ್ತು 4/10/23ರಂದು ಎಂ.ಜಿ.ಆರ್ ಚೆನ್ನೈ ಸೆಂಟ್ರಲ್ ಮತ್ತು ಕಟಪಾಡಿ ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳಿಸಲಾಗುತ್ತಿದೆ.
* ರೈಲು ಸಂಖ್ಯೆ 12609 ಎಂ.ಜಿ.ಆರ್ ಚೆನ್ನೈ ಸೆಂಟ್ರಲ್ -ಮೈಸೂರು ಡೈಲಿ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲನ್ನು 6/9/23, 13/9/23, 20/9/23, 27/9/23 ಮತ್ತು 4/10/23ರಂದು ಎಂ.ಜಿ.ಆರ್ ಚೆನ್ನೈ ಸೆಂಟ್ರಲ್ ಮತ್ತು ಕಟಪಾಡಿ ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳಿಸಲಾಗುತ್ತಿದೆ ಎಂದು ಪ್ರಕಟಣೆ ಹೇಳಿದೆ.
ಮಾರ್ಗ ಮಧ್ಯ ನಿಯಂತ್ರಣ: ದಾನಾಪುರ ನಿಲ್ದಾಣದಿಂದ ಹೊರಡುವ ರೈಲು ಸಂಖ್ಯೆ 12296 ದಾನಾಪುರ-ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಎಕ್ಸ್‌ಪ್ರೆಸ್ ರೈಲನ್ನು 6/9/23, 13/9/23, 20/9/23, 27/9/23 ಮತ್ತು 4/10/23ರಂದು ಮಾರ್ಗ ಮಧ್ಯ 180 ನಿಮಿಷಗಳವರೆಗೆ ನಿಯಂತ್ರಿಸಲಾಗುತ್ತಿದೆ.
ಮೈಸೂರು ನಿಲ್ದಾಣದಿಂದ ಹೊರಡುವ ರೈಲು ಸಂಖ್ಯೆ 12610 ಮೈಸೂರು-ಎಂ.ಜಿ.ಆರ್ ಚೆನ್ನೈ ಸೆಂಟ್ರಲ್ ಎಕ್ಸ್‌ಪ್ರೆಸ್ ರೈಲನ್ನು 6/9/23, 13/9/23, 20/9/23, 27/9/23 ಮತ್ತು 4/10/23ರಂದು ಮಾರ್ಗ ಮಧ್ಯ 25 ನಿಮಿಷಗಳ ಕಾಲ ನಿಯಂತ್ರಿಸಲಾಗುತ್ತಿದೆ.
ಹೌರಾ ನಿಲ್ದಾಣದಿಂದ ಹೊರಡುವ ರೈಲು ಸಂಖ್ಯೆ 12245 ಹೌರಾ-ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಎಕ್ಸ್‌ಪ್ರೆಸ್ ರೈಲನ್ನು 13/9/23, 20/9/23, 27/9/23 ಮತ್ತು 4/10/23 ರಂದು ಮಾರ್ಗ ಮಧ್ಯ 100 ನಿಮಿಷಗಳ ಕಾಲ ನಿಯಂತ್ರಿಸಲಾಗುತ್ತಿದೆ.
ಕಮಖ್ಯ ನಿಲ್ದಾಣದಿಂದ ಹೊರಡುವ ರೈಲು ಸಂಖ್ಯೆ 12552 ಕಮಖ್ಯ-ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಎಕ್ಸ್‌ಪ್ರೆಸ್ ರೈಲನ್ನು 15/9/23 ಮತ್ತು 29/9/23ರಂದು ಮಾರ್ಗ ಮಧ್ಯ 130 ನಿಮಿಷಗಳ ಕಾಲ ನಿಯಂತ್ರಿಸಲಾಗುತ್ತಿದೆ.
ದಾನಾಪುರ ನಿಲ್ದಾಣದಿಂದ ಹೊರಡುವ ರೈಲು ಸಂಖ್ಯೆ 06510 ದಾನಾಪುರ-ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಎಕ್ಸ್‌ಪ್ರೆಸ್ ರೈಲನ್ನು 15/9/23 ಮತ್ತು 29/9/23ರಂದು ಮಾರ್ಗ ಮಧ್ಯ 95 ನಿಮಿಷಗಳ ಕಾಲ ನಿಯಂತ್ರಿಸಲಾಗುತ್ತಿದೆ.
ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ನಿಲ್ದಾಣದಿಂದ ಹೊರಡುವ ರೈಲು ಸಂಖ್ಯೆ 12295 ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು-ದಾನಪುರ ಎಕ್ಸ್‌ಪ್ರೆಸ್ ರೈಲನ್ನು 15/9/23 ಮತ್ತು 29/9/23 ರಂದು ಮಾರ್ಗ ಮಧ್ಯ 30 ನಿಮಿಷ ಕಾಲ ನಿಯಂತ್ರಿಸಲಾಗುತ್ತಿದೆ.
ರೈಲು ಸಂಖ್ಯೆ 22601 ಎಂ.ಜಿ.ಆರ್. ಚೆನ್ನೈ ಸೆಂಟ್ರಲ್-ಸಾಯಿನಗರ ಶಿರಡಿ ಎಕ್ಸ್‌ಪ್ರೆಸ್ ರೈಲು 6/9/23, 13/9/23, 20/9/23 ಮತ್ತು 4/10/23ರಂದು ಎಂ.ಜಿ.ಆರ್ ಚೆನ್ನೈ ಸೆಂಟ್ರಲ್ ನಿಲ್ದಾಣದಿಂದ 120 ನಿಮಿಷ ತಡವಾಗಿ ಪ್ರಾರಂಭವಾಗಲಿದೆ.












Click it and Unblock the Notifications