ತಾಳಗುಪ್ಪ-ಮೈಸೂರು ರೈಲು ಪ್ರಯಾಣಿಕರಿಗೆ ಸಿಹಿಸುದ್ದಿ

ಬೆಂಗಳೂರು, ಆಗಸ್ಟ್ 03: ಮೈಸೂರು-ಬೆಂಗಳೂರು-ಶಿವಮೊಗ್ಗ-ತಾಳಗುಪ್ಪ ನಡುವೆ ಸಂಚಾರ ನಡೆಸುವ ರೈಲು ಪ್ರಯಾಣಿಕರಿಗೆ ಸಿಹಿಸುದ್ದಿಯೊಂದಿದೆ. ಪ್ರಾಯೋಗಿಕವಾಗಿ ಒಂದು ಕಡೆ ರೈಲು ನಿಲುಗಡೆ ಮಾಡಲು ಒಪ್ಪಿಗೆ ನೀಡಲಾಗಿದೆ.

ಈ ಕುರಿತು ರೈಲ್ವೆ ಖಾತೆ ರಾಜ್ಯ ಸಚಿವ, ತುಮಕೂರು ಸಂಸದ ವಿ. ಸೋಮಣ್ಣ ಮಾಹಿತಿ ನೀಡಿದ್ದಾರೆ. ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಮನವಿ ಹಿನ್ನಲೆಯಲ್ಲಿ ನಿಲುಗಡೆ ನೀಡಲಾಗಿದೆ.

Talguppa Mysuru Express Now Get Stop At Malleswaram

ಎಲ್ಲಿ ರೈಲು ನಿಲುಗಡೆ?: ಸಚಿವ ವಿ. ಸೋಮಣ್ಣ, ರೈಲು ಸಂಖ್ಯೆ 16228 ತಾಳಗುಪ್ಪ-ಮೈಸೂರು ಎಕ್ಸ್‌ಪ್ರೆಸ್‌ಗೆ ಇದುವರೆಗೂ ಬೆಂಗಳೂರಿನ ಮಲ್ಲೇಶ್ವರಂನಲ್ಲಿ ನಿಲುಗಡೆ ಇರಲಿಲ್ಲ ಎಂದು ಹೇಳಿದ್ದಾರೆ.

ಇದರಿಂದಾಗಿ ಸಾಕಷ್ಟು ಪ್ರಯಾಣಿಕರಿಗೆ ತೊಂದರೆಯುಂಟಾದ ಬಗ್ಗೆ ಸಂಸದರಾದ ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿಯವರು ನನ್ನ ಗಮನಕ್ಕೆ ತಂದು, ನಿಲುಗಡೆ ನೀಡುವಂತೆ ಕೋರಿದ್ದ ಹಿನ್ನೆಲೆಯಲ್ಲಿ, ಇದೀಗ ಮಲ್ಲೇಶ್ವರಂನಲ್ಲಿ ರೈಲು ನಿಲುಗಡೆಗೆ ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

22/10/24 ರಿಂದ 3 ತಿಂಗಳವರೆಗೆ ಪ್ರಾಯೋಗಿಕವಾಗಿ ರೈಲು ನಿಲುಗಡೆ ಇರಲಿದೆ. ಎಲ್ಲಾ ಪ್ರಯಾಣಿಕರು ಈ ಸೌಲಭ್ಯವನ್ನು ಪಡೆದುಕೊಳ್ಳಬೇಕಾಗಿ ವಿನಂತಿಸಿಕೊಳ್ಳುತ್ತೇನೆ ಎಂದು ಸಚಿವರು ಮನವಿ ಮಾಡಿದ್ದಾರೆ.

ಶಿವಮೊಗ್ಗಕ್ಕೆ ತೆರಳುವ ರೈಲು ಅಲ್ಲಿಂದ ಸಾಗರ ಮೂಲಕ ತಾಳಗುಪ್ಪಗೆ ತಲುಪಲಿದೆ. ಇದರಿಂದಾಗಿ ಉತ್ತರ ಕನ್ನಡ ಭಾಗದ ಜನರಿಗೆ ಊರು ತಲುಪಲು ಅನುಕೂಲವಾಗಲಿದೆ. ಆದ್ದರಿಂದ ಬೆಂಗಳೂರಿನಲ್ಲಿ ಮತ್ತೊಂದು ನಿಲುಗಡೆ ನೀಡಲು ಸಂಸದರು ಮನವಿ ಸಲ್ಲಿಕೆ ಮಾಡಿದ್ದರು. ಅದಕ್ಕೆ ಈಗ ಪ್ರಾಯೋಗಿಕ ಆಧಾರದ ಮೇಲೆ ಒಪ್ಪಿಗೆ ಸಿಕ್ಕಿದೆ.

ವೇಳಾಪಟ್ಟಿ ಬದಲಾವಣೆ: ಸಚಿವ ವಿ. ಸೋಮಣ್ಣ ಮತ್ತೊಂದು ಫೇಸ್‌ಬುಕ್ ಪೋಸ್ಟ್‌ನಲ್ಲಿ ಮಂಗಳೂರು ಜಂಕ್ಷನ್-ಯಶವಂತಪುರ (ರೈಲು ಸಂಖ್ಯೆ 16576) ವಾರಕ್ಕೆ 3 ಬಾರಿ ಸಂಚಾರ ನಡೆಸುವ ರೈಲಿನ ಸಮಯ ಬದಲಾಯಿಸುವ ಕುರಿತು ಮಾಹಿತಿ ನೀಡಿದ್ದಾರೆ.

ವೇಳಾಪಟ್ಟಿ ಬದಲಾವಣೆ ಮಾಡುವಂತೆ ಬಹುದಿನಗಳಿಂದಲೂ ಸಾರ್ವಜನಿಕರಿಂದ ಮನವಿಯಿತ್ತು. ಇದೀಗ, ಸಾರ್ವಜನಿಕರ ಕೋರಿಕೆಯನ್ನು ಈಡೇರಿಸಲಾಗಿದೆ ಎಂದು ಹೇಳಿದ್ದಾರೆ. ಹೊಸ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.

ನೈಋತ್ಯ ರೈಲ್ವೆ ಮಾಹಿತಿಯಂತೆ ವಾರಕ್ಕೆ 3 ಬಾರಿ ಮಂಗಳೂರು ಜಂಕ್ಷನ್‌ನಿಂದ ಬೆಂಗಳೂರಿನ ಯಶವಂತಪುರದವರೆಗೆ ಸಂಚರಿಸುವ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16576) ರೈಲಿನ ವೇಳಾಪಟ್ಟಿಯನ್ನು ನವೆಂಬರ್ 1 ರಿಂದ ಜಾರಿಗೆ ಬರುವಂತೆ ಪರಿಷ್ಕರಿಸಲಾಗಿದೆ ಎಂದು ಹೇಳಿದೆ.

ಪರಿಷ್ಕೃತ ಸಮಯ ಪ್ರಕಾರ ಈ ರೈಲು (16576) ಮಂಗಳೂರು ಜಂಕ್ಷನ್‌ನಿಂದ ಬೆಳಗ್ಗೆ 11:30ರ ಬದಲು ಬೆಳಗ್ಗೆ 7 ಗಂಟೆಗೆ ಹೊರಟು, ಅದೇ ದಿನ ರಾತ್ರಿ 8.45ರ ಬದಲು ಸಂಜೆ 4.30ಕ್ಕೆ ಯಶವಂತಪುರ ನಿಲ್ದಾಣವನ್ನು ತಲುಪಲಿದೆ.

ರೈಲು ವೇಳಾಪಟ್ಟಿ ಪರಿಷ್ಕರಣೆ: ರೈಲು ಸಂಖ್ಯೆ 01782 ಬಂಗಾರಪೇಟೆ-ಮಾರಿಕುಪ್ಪಂ ಮೆಮು ಸ್ಪೆಷಲ್, ರೈಲು ಸಂಖ್ಯೆ 01772 ಮಾರಿಕುಪ್ಪಂ-ಕೆಎಸ್‌ಆರ್ ಬೆಂಗಳೂರು ಮೆಮು ಸ್ಪೆಷಲ್ & ರೈಲು ಸಂಖ್ಯೆ 06396 ಕೆಎಸ್‌ಆರ್ ಬೆಂಗಳೂರು-ಮಾರಿಕುಪ್ಪಂ ಮೆಮು ಸ್ಪೆಷಲ್ ರೈಲುಗಳ ವೇಳಾಪಟ್ಟಿಯನ್ನು ಆಗಸ್ಟ್ 8, 2024 ರಿಂದ ಜಾರಿಗೆ ಬರುವಂತೆ ಪರಿಷ್ಕರಣೆ ಮಾಡಲಾಗುತ್ತಿದೆ ಎಂದು ರೈಲ್ವೆ ಇಲಾಖೆ ಹೇಳಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+