ಕಾಫಿನಾಡಿನಲ್ಲಿ ಪ್ರವಾಸಿ ಜೀಪ್‌ಗಳ ಸ್ಥಿತಿ ಪರಿಶೀಲನೆಗೆ ತಂಡ ರಚನೆ: RTO ಅಧಿಕಾರಿ

ಚಿಕ್ಕಮಗಳೂರು, ಅಕ್ಟೋಬರ್‌, 13: ಚಿಕ್ಕಮಗಳೂರು ಜಿಲ್ಲೆಯ ಬಹಳಷ್ಟು ಪ್ರವಾಸಿತಾಣಗಳಲ್ಲಿ ಪ್ರವಾಸಿಗರನ್ನು ಕರೆದೊಯ್ಯುವ ಜೀಪ್‌ಗಳ ಸ್ಥಿತಿಯನ್ನು ತಿಳಿಯುವ ಉದ್ದೇಶದಿಂದ ತಂಡಗಳನ್ನು ರಚನೆ ಮಾಡಿ ಪರಿಶೀಲನೆ ಮಾಡಲಾಗುವುದು ಎಂದು ಚಿಕ್ಕಮಗಳೂರು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಪ್ರಾದೇಶಿಕ ಸಾರಿಗೆ (RTO) ಅಧಿಕಾರಿ ಆರ್.ರಾಕೇಶ್ ಕುಮಾರ್ ತಿಳಿಸಿದ್ದಾರೆ.

ಚಿಕ್ಕಮಗಳೂರಿನಲ್ಲಿ ಮಾತಾನಾಡಿದ ಅವರು, ಪ್ರಾದೇಶಿಕ ಸಾರಿಗೆ ಕಚೇರಿಗೆ ಸಂಬಂಧಿಸಿದಂತೆ ಏನೇ ಸಮಸ್ಯೆಗಳಿದ್ದರೂ ಮುಕ್ತವಾಗಿ ನನ್ನನ್ನು ಕಾಣಬಹುದು. ಹಿಂದೆ ಜಿಲ್ಲಾ ಪ್ರಾದೇಶಿಕ ಸಾರಿಗೆ ಇಲಾಖೆಯಲ್ಲಿ ಇದ್ದಂತಹ ಸಮಸ್ಯೆಗಳು ಮುಂದೆ ಮರುಕಳಿಸದಂತೆ ನೋಡಿಕೊಳ್ಳುತ್ತೇವೆ. ಸಾರ್ವಜನಿಕರು ಏನೇ ಸಮಸ್ಯೆ ಇದ್ದರೂ ನೇರವಾಗಿ ಸಂಪರ್ಕಿಸಿ ಬಗೆಹರಿಸಿಕೊಳ್ಳಬೇಕು. ಸಾರ್ವಜನಿಕರ ಸಮಸ್ಯೆಯನ್ನು ಕೇಳಲೆಂದೇ ಕಚೇರಿಯಲ್ಲಿ ಹೆಲ್ಪ್ ಡೆಸ್ಕ್ ಕೂಡ ಇದೆ ಎಂದರು.

Team Formation to check the condition of tourist jeeps in Chikkamagaluru

ಹಳೆ ಜೀಪ್‌ಗಳನ್ನೂ ಸ್ಕ್ರ್ಯಾಪ್ ಮಾಡಬೇಕು ಎಂದು ಸರ್ಕಾರದಿಂದ ಯಾವುದೇ ಆದೇಶ ಬಂದಿಲ್ಲ. ಈ ಹಿಂದೆ ಬಂದಿರುವ ಆದೇಶದಂತೆ ಸ್ಕೂಲ್ ಬಸ್, ಸಾರಿಗೆ ಬಸ್‌ಗಳನ್ನೂ ಮಾಡಲು ಮಾತ್ರ ಅವಕಾಶವಿದೆ. ಆದರೂ ಕೂಡ ಜಿಲ್ಲೆಯ ಬಹಳಷ್ಟು ಪ್ರವಾಸಿತಾಣಗಳಲ್ಲಿ ಪ್ರವಾಸಿಗರನ್ನು ಕರೆದೊಯ್ಯುವ ಜೀಪ್‌ಗಳ ಸ್ಥಿತಿಯನ್ನು ಪರಿಶೀಲನೆ ಮಾಡಲಾಗುವುದು. ಈ ಕುರಿತಾಗಿ ಜಿಲ್ಲೆಯ ಪ್ರತಿಯೊಂದು ತಾಲೂಕಿಗೆ ಭೇಟಿ ನೀಡಿ ಪರಿಶೀಲನೆ ಮಾಡುತ್ತೇವೆ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+