ಈ ಇಂಟರ್‌ಸಿಟಿ ಎಕ್ಸ್‌ಪ್ರೆಸ್ ರೈಲಿಗೆ ಚಿಕ್ಕಬಾಣಾವರ ರೈಲ್ವೆ ನಿಲ್ದಾಣದಲ್ಲಿ ತಾತ್ಕಾಲಿಕ ನಿಲುಗಡೆಗೆ ಅವಕಾಶ
ಬೆಂಗಳೂರು, ಡಿಸೆಂಬರ್, 12: ಸಾರಿಗೆ ವಿಭಾಗಗಳಲ್ಲಿ ಅತೀ ದೊಡ್ಡ ಸಾರಿಗೆಯೆಂದರೆ ಅದು ರೈಲು ಆಗಿದೆ. ಇನ್ನೂ ಈ ಭಾರತೀಯ ರೈಲ್ವೆಯು ಪ್ರಯಾಣಿಕರಿಗೆ ಅನುಕೂಲವಾಗುವಂತೆ ಆಗಾಗ ಶುಭ ಸುದ್ದಿಯನ್ನು ನೀಡುತ್ತಲಿರುತ್ತದೆ. ಇದೀಗ ಈ ಪ್ರಮುಖ ಎರಡು ನಗರಗಳ ನಡುವೆ ನಿತ್ಯ ಸಂಚರಿಸುವ ಇಂಟರ್‌ಸಿಟಿ ರೈಲುಗಳಿಗೆ ಚಿಕ್ಕಬಾಣಾವರ ನಿಲ್ದಾಣದಲ್ಲಿ ತಾತ್ಕಾಲಿಕ ನಿಲುಗಡೆಗೆ ಒದಗಿಸಲು ನೈರುತ್ಯ ರೈಲ್ವೆ ಮುಂದಾಗಿದೆ.
ಯಶವಂತಪುರ-ಶಿವಮೊಗ್ಗ ನಗರ ನಿಲ್ದಾಣಗಳ ನಡುವೆ ಪ್ರತಿನಿತ್ಯ ಸಂಚಾರ ಮಾಡುವ ಇಂಟರ್‌ಸಿಟಿ ಎಕ್ಸ್‌ಪ್ರೆಸ್ ರೈಲುಗಳಿಗೆ ಚಿಕ್ಕಬಾಣಾವರ ನಿಲ್ದಾಣದಲ್ಲಿ ತಾತ್ಕಾಲಿಕ ನಿಲುಗಡೆ ಒದಗಿಸಲು ನೈರುತ್ಯ ರೈಲ್ವೆ ನಿರ್ಧರಸಿದೆ. ಡಿಸೆಂಬರ್ 16ರಿಂದ ಮಾರ್ಚ್ 15ರ ವರೆಗೆ ಮೂರು ತಿಂಗಳುಗಳ ಕಾಲ ಪ್ರಾಯೋಗಿಕ ಆಧಾರದ ಮೇಲೆ ಈ ನಿಲುಗಡೆಗೆ ಅವಕಾಶ ಕಲ್ಪಿಸಲಾಗಿದೆ.

ಬೆಂಗಳೂರು ಉತ್ತರ ಭಾಗದ ಬಡಾವಣೆಗಳ ಪ್ರಯಾಣಿಕರು ಯಶವಂತಪುರಕ್ಕೆ ತೆರಳುವ ಬದಲು ಚಿಕ್ಕಬಾಣಾವರ ನಿಲ್ದಾಣ ಮೂಲಕ ರೈಲಿನಲ್ಲಿ ಪ್ರಯಾಣ ಮಾಡಬಹುದಾಗಿದೆ. ಪ್ರಯಾಣಿಕರಿಂದ ಉತ್ತಮ ಪ್ರತಿಕ್ರಿಯೆ ಬಂದರೆ 3 ತಿಂಗಳ ಬಳಿಕವೂ ನಿಲುಗಡೆ ಮುಂದುವರೆಸಲಾಗುತ್ತದೆ ಎಂದು ರೈಲ್ವೆ ಅಧಿಕಾರಿಗಳಿಂದ ಮಾಹಿತಿ ಲಭ್ಯವಾಗಿದೆ.
ಯಶವಂತಪುರ-ಶಿವಮೊಗ್ಗ ನಗರ ಡೈಲಿ ಇಂಟರ್‌ಸಿಟಿ ಎಕ್ಸ್‌ಪ್ರೆಸ್ ರೈಲು (ರೈಲು ಸಂಖ್ಯೆ 16579) ಚಿಕ್ಕಬಾಣಾವರ ನಿಲ್ದಾಣಕ್ಕೆ ಬೆಳಗ್ಗೆ 9:25ಕ್ಕೆ ಆಗಮಿಸಿ 9:26ಕ್ಕೆ ನಿರ್ಗಮಿಸಲಿದೆ. ಶಿವಮೊಗ್ಗ ನಗರ-ಯಶವಂತಪುರ ನಡುವೆ ಪ್ರತಿನಿತ್ಯಾ ಸಂಚರಿಸುವ ಇಂಟರ್‌ಸಿಟಿ ಎಕ್ಸ್‌ಪ್ರೆಸ್ ರೈಲು (ರೈಲು ಸಂಖ್ಯೆ 16579) ಚಿಕ್ಕಬಾಣಾವರ ನಿಲ್ದಾಣಕ್ಕೆ ಬೆಳಿಗ್ಗೆ 7:34ಕ್ಕೆ ಆಗಮಿಸಿ 7:35 ಕ್ಕೆ ನಿರ್ಗಮಿಸಲಿದೆ.
ಹುಬ್ಬಳ್ಳಿ-ಅಂಕೋಲಾ ರೈಲ್ವೆ ಮಾರ್ಗದ ಕಾಮಗಾರಿ: ರಾಜ್ಯದ ಹಲವೆಡೆ ರೈಲ್ವೆ ಕಾಮಗಾರಿಗಳು ನಡೆಯುತ್ತಲೇ ಇವೆ. ಇದರ ನಡುವೆಯೇ ಹುಬ್ಬಳ್ಳಿ-ಅಂಕೋಲಾ ರೈಲ್ವೆ ಮಾರ್ಗದ ಕಾಮಗಾರಿ ಯಾವಾಗ ಪೂರ್ಣಗೊಳ್ಳಲಿದೆ ಎನ್ನುವ ಅಪ್ಡೇಟ್ ಮಾಹಿತಿಯನ್ನು ರಾಜ್ಯ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ ಅವರು ಕೊಟ್ಟಿದ್ದಾರೆ. ಇಲ್ಲಿದೆ ನೋಡಿ ವಿವರ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಸಚಿವ ವಿ.ಸೋಮಣ್ಣ ಅವರು, ಹುಬ್ಬಳ್ಳಿ-ಅಂಕೋಲಾ ರೈಲ್ವೆ ಮಾರ್ಗದ ಕಾಮಗಾರಿಯನ್ನು 2027ರ ಒಳಗೆ ಪೂರ್ಣಗೊಳಿಸುತ್ತೇವೆ ಎಂದು ಭರವಸೆ ನೀಡಿದ್ದಾರೆ.
ನಗರದ ಗದಗ ರಸ್ತೆಯಲ್ಲಿರುವ ನೈಋತ್ಯ ರೈಲ್ವೆ ಕೇಂದ್ರ ಕಚೇರಿಯಲ್ಲಿ ರೈಲ್ವೆ ಪ್ರಗತಿ ಪರಿಶೀಲನಾ ಸಭೆಯ ಬಳಿಕ ಮಾತನಾಡಿದ ಅವರು, ಹೊಸಪೇಟೆ-ಹುಬ್ಬಳ್ಳಿ-ಲೋಂಡಾ-ವಾಸ್ಕೋಡ ಗಾಮ ಜೋಡಿ ಮಾರ್ಗದ ಪೂರ್ಣಗೊಳಿಸಲಾಗುತ್ತಿದೆ. ಹುಬ್ಬಳ್ಳಿ - ಅಂಕೋಲಾ ರೈಲ್ವೆ ಮಾರ್ಗದ ಬಗ್ಗೆ ವಿವರವಾದ ಯೋಜನಾ ವರದಿ ಸಿದ್ಧವಾಗಿದೆ ಎಂದು ಹೇಳಿದರು.
ಪ್ರಗತಿ ಪರಿಶೀಲನೆ ಸಭೆಯಲ್ಲಿ ಗಿಣಿಗೇರಾ-ರಾಯಚೂರು ಹೊಸ ಮಾರ್ಗ, ಕಡೂರು-ಚಿಕ್ಕಮಗಳೂರು ಹೊಸ ಮಾರ್ಗ, ಬಾಗಲಕೋಟೆ-ಕುಡಚಿ ಹೊಸ ಮಾರ್ಗ, ಧಾರವಾಡ-ಬೆಳಗಾವಿ ಹೊಸ ಮಾರ್ಗ, ಹುಬ್ಬಳ್ಳಿ-ಅಂಕೋಲಾ ಹೊಸ ಮಾರ್ಗ, ರಾಯದುರ್ಗ-ತುಮಕೂರು ಹೊಸ ಮಾರ್ಗ, ಗದಗ-ವಾಡಿ ಹೊಸ ಮಾರ್ಗ, ತುಮಕೂರು-ಚಿತ್ರದುರ್ಗ-ದಾವಣಗೆರೆ ಹೊಸ ಮಾರ್ಗ, ಬಾಗಲಕೋಟೆ-ಕುಡಚಿ ಹೊಸ ಮಾರ್ಗ, ಹಾಸನ-ಬೇಲೂರು ಹೊಸ ಮಾರ್ಗ, ಶಿವಮೊಗ್ಗ-ಶಿಕಾರಿಪುರ - ರಾಣೆಬೆನ್ನೂರ, ಹೊಟಗಿ-ಕುಡ್ಗಿ-ಗದಗ ದ್ವಿಪಥ, ಭೂಸ್ವಾಧೀನ, ಡಿಪಿಆರ್, ಟೆಂಡರ್ ಪ್ರಗತಿ ಇತ್ಯಾದಿಗಳಿಗೆ ಸಂಬಂಧಿಸಿದಂತೆ ಎಲ್ಲಾ ಯೋಜನೆಗಳನ್ನು ಅವುಗಳ ಪೂರ್ವನಿರ್ಧರಿತ ಸ್ಥಿತಿಯೊಂದಿಗೆ ವಿವರವಾಗಿ ಚರ್ಚಿಸಲಾಯಿತು.
ಅಲ್ಲದೆ, ಆದ್ಯತೆಯ ಆಧಾರದ ಮೇಲೆ ಜೂನ್ 2027ರೊಳಗೆ ಯೋಜನೆಗಳನ್ನು ಪೂರ್ಣಗೊಳಿಸಲು ಎಲ್ಲಾ ರೈಲ್ವೆ ಅಧಿಕಾರಿಗಳಿಗೆ ಸಲಹೆ ನೀಡಿದರು. ಹಾಗೆಯೇ ಯೋಜನೆಗಳ ಅನುಷ್ಠಾನದ ಸಮಯದಲ್ಲಿ ಕುಂದು ಕೊರತೆಗಳನ್ನು ತೆರವುಗೊಳಿಸುವಂತೆ ಅವರು ರೈಲ್ವೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
This is an AI generated aticle image through WISE












Click it and Unblock the Notifications