Free Travel: ಇಂತಹವರಿಗೆ ವಂದೇ ಭಾರತ್ ಸೇರಿ ಈ ಹೈಸ್ಪೀಡ್ ರೈಲುಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ
Free Travel: ಭಾರತೀಯ ರೈಲ್ವೆಯಲ್ಲಿ ಪ್ರಯಾಣಿಕರ ಅನುಕೂಲತೆಗೆ ತಕ್ಕೆಂತೆ ಆಗಾಗ ದೊಡ್ಡ ದೊಡ್ಡ ಬದಲಾವಣೆಗಳಾಗುತ್ತಲೇ ಆಗುತ್ತಲೇ ಇರುತ್ತವೆ. ಇದೀಗ ಎಲ್‌ಟಿಸಿ ಅಡಿಯಲ್ಲಿ ಕೇಂದ್ರ ಸರ್ಕಾರಿ ನೌಕರರು ಹೈಸ್ಪೀಡ್ ರೈಲುಗಳಾದ ತೇಜಸ್, ಹಮ್‌ಸಫರ್, ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಸರ್ಕಾರ ಅನುಮತಿ ನೀಡಿದೆ. ಮಾಹಿತಿ ಇಲ್ಲಿದೆ ಗಮನಿಸಿ.
ರಜೆ ಪ್ರಯಾಣ ರಿಯಾಯಿತಿಯಡಿ ವಿವಿಧ ಪ್ರಮುಖ ರೈಲುಗಳಲ್ಲಿ ಪ್ರಯಾಣದ ಬಗ್ಗೆ ಸಿಬ್ಬಂದಿ ಮತ್ತು ತರಬೇತಿ ಇಲಾಖೆ ವಿವಿಧ ಕಚೇರಿಗಳು, ಹಲವರಿಂದ ಮನವಿಗಳನ್ನು ಸ್ವೀಕರಿಸಿದ ಬಳಿಕ ಕೇಂದ್ರ ಸರ್ಕಾರ ಈ ಆದೇಶವನ್ನು ಹೊರಡಿಸಿದೆ.

ತೇಜಸ್ ಎಕ್ಸ್‌ಪ್ರೆಸ್, ವಂದೇ ಭಾರತ್ ಎಕ್ಸ್‌ಪ್ರೆಸ್ ಮತ್ತು ಹಮ್ಸಫರ್ ಎಕ್ಸ್‌ಪ್ರೆಸ್ ರೈಲುಗಳಲ್ಲಿ ರಜೆ ಪ್ರಯಾಣ ರಿಯಾಯಿತಿಯಡಿ ಸರ್ಕಾರಿ ನೌಕರರ ಪ್ರಯಾಣಕ್ಕೆ ಈಗ ಅನುಮತಿ ನೀಡಲಾಗಿದೆ ಎಂದು ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಆದೇಶದಲ್ಲಿ ತಿಳಿಸಿದೆ. ಅರ್ಹ ಕೇಂದ್ರ ಸರ್ಕಾರಿ ನೌಕರರು LTC+ ಪಡೆದಾಗ ರಜೆಯ ಜೊತೆಗೆ ಪ್ರಯಾಣಕ್ಕಾಗಿ ಖರೀದಿಸಿದ ಟಿಕೆಟ್ ಹಣವನ್ನು ಮತ್ತೆ ವಾಪಸ್ ಪಡೆಯಬಹುದಾಗಿದೆ.
ಕೇಂದ್ರ ಸರ್ಕಾರಿ ನೌಕರರಿಗೆ ಹಲವು ರಿಯಾಯಿತಿಗಳು ಇವೆ. ಬೋನಸ್, ಇನ್ಕ್ರಿಮೆಂಟ್, ಇತ್ಯಾದಿ ಸೌಲಭ್ಯಗಳನ್ನು ಕೊಡಲಾಗುತ್ತದೆ. ಇಂತಹ ಒಂದು ಸೌಲಭ್ಯ ಎಲ್‌ಟಿಸಿಯೂ ಒಂದು ಆಗಿದೆ. ಇದರ ಮೂಲಕ ಕೇಂದ್ರ ಸರ್ಕಾರಿ ನೌಕರರು ಪ್ರವಾಸ ಪ್ಯಾಕೇಜ್ ಪಡೆಯಬಹುದಾಗಿದ್ದು, 5 ದಿನಗಳ ಎಲ್‌ಟಿಸಿ ಯೋಜನೆಯಡಿ ನೌಕರರು ತಮ್ಮ ಕುಟುಂಬದೊಂದಿಗೆ ಭಾರತದಲ್ಲಿ ಎಲ್ಲಿಗೆ ಬೇಕಾದರೂ ಪ್ರಯಾಣ ಮಾಡಬಹುದಾಗಿದೆ.
ಕೇಂದ್ರ ಸರ್ಕಾರಿ ನೌಕರರು ಈ ಪ್ರಯಾಣ ರಿಯಾಯಿತಿ ಯೋಜನೆಯಡಿ ಇಲ್ಲಿಯವರೆಗೆ ರಾಜಧಾನಿ, ಶತಾಬ್ದಿ, ಮತ್ತು ದುರಂತೋ ರೈಲುಗಳಲ್ಲಿ ಉಚಿತವಾಗಿ ಪ್ರಯಾಣಿಸುತ್ತಿದ್ದರು. ಇದೀಗ ತೇಜಸ್ ಎಕ್ಸ್‌ಪ್ರೆಸ್, ವಂದೇ ಭಾರತ್ ಎಕ್ಸ್‌ಪ್ರೆಸ್, ಮತ್ತು ಹಂಸಫರ್ ಎಕ್ಸ್‌ಪ್ರೆಸ್ ರೈಲುಗಳಲ್ಲಿಯೂ ಉಚಿತವಾಗಿ ಪ್ರಯಾಣಿಸಬಹುದಾಗಿದೆ.
ರಜೆ ಪ್ರಯಾಣ ರಿಯಾಯಿತಿ ಎಂಬುದು ನೌಕರರಿಗೆ ನೀಡುವ ಪ್ರವಾಸೋದ್ಯಮ ರಿಯಾಯಿತಿ. ಇದನ್ನ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮಾತ್ರ ಅಲ್ಲದೆ, ಖಾಸಗಿ ಕಂಪನಿಗಳೂ ಅನುಷ್ಠಾನಗೊಳಿಸುತ್ತವೆ. ಆದರೆ, ಕಂಪನಿಗಳ ನಿಯಮಗಳಿಗೆ ಅನುಸಾತವಾಗಿ ರಿಯಾಯಿತಿಗಳು ಇರುತ್ತವೆ. ಕೇಂದ್ರ ಸರ್ಕಾರ ತನ್ನ ವ್ಯಾಪ್ತಿಯಲ್ಲಿ ಕೆಲಸ ಮಾಡುವ ನೌಕರರು 4 ವರ್ಷಗಳ ಅವಧಿಯಲ್ಲಿ ತಮ್ಮ ಊರಿಗೆ ಅಥವಾ ಭಾರತದ ಯಾವುದಾದರೂ ಸ್ಥಳಕ್ಕಾದರೂ ಕುಟುಂಬದೊಂದಿಗೆ ಪ್ರಯಾಣಿಸಲು ಎಲ್‌ಟಿಸಿ ಅನುಕೂಲ ಆಗಲಿದೆ.
ಈ ಯೋಜನೆಯಡಿತಲ್ಲಿ 4 ವರ್ಷಗಳಲ್ಲಿ ಎರಡು ಬಾರಿ ತಮ್ಮ ಊರಿಗೆ ಹೋಗಬಹುದು. ಅಥವಾ ಎರಡು ವರ್ಷಗಳಿಗೊಮ್ಮೆ ಸ್ವಂತ ಊರಿಗೆ ಹೋಗಿ, ಉಳಿದ ಎರಡು ವರ್ಷಗಳಲ್ಲಿ ಭಾರತದ ಇತರ ಪ್ರದೇಶಗಳಿಗೆ ಪ್ರವಾಸ ಕೈಗೊಳ್ಳಬಹುದಾಗಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications