ಪ್ರಯಾಣಿಕರೇ ಗಮನಿಸಿ: ತಿರುಪತಿ ಸೇರಿ ಹಲವು ರೈಲುಗಳ ಮಾರ್ಗ ಬದಲಾವಣೆ
ಬೆಂಗಳೂರು, ಏಪ್ರಿಲ್. 11: ನೈರುತ್ಯ ರೈಲ್ವೆ ಇಲಾಖೆಯು ಹಲವು ರೈಲುಗಳ ಮಾರ್ಗಗಳಲ್ಲಿ ಬದಲಾವಣೆ, ರೈಲುಗಳ ವಿಳಂಬ ಸೇರಿದಂತೆ ಕೆಲವು ವಿವರಗಳನ್ನು ಪ್ರಕಟಿಸಿದೆ. ತಿರುಪತಿ ನಿಲ್ದಾಣಕ್ಕೆ ತೆರಳುವ ರೈಲುಗಳ ಮಾರ್ಗ ಬದಲಾವಣೆಯಾಗಲಿದೆ. ಬಾಗಲಕೋಟೆ- ಮುಗಳೊಳ್ಳಿ ಮಾರ್ಗದಲ್ಲಿ ರೈಲು ವಿಳಂಬವಾಗಲಿದೆ.
ನೈರುತ್ಯ ರೈಲ್ವೆ: ತಡವಾಗಿ ಪ್ರಾರಂಭವಾಗುವ ರೈಲುಗಳು
ಬಾಗಲಕೋಟೆ-ಮುಗಳೊಳ್ಳಿ ಮತ್ತು ಆಲಮಟ್ಟಿ-ಜಡ್ರಾಮಕುಂಟಿ ನಿಲ್ದಾಣಗಳ ನಡುವೆ ಅಗತ್ಯ ಎಂಜಿನಿಯರಿಂಗ್ ಕಾಮಗಾರಿ ಇರುವುದರಿಂದ ಈ ಕೆಳಗಿನ ರೈಲುಗಳು ತಡವಾಗಿ ಪ್ರಾರಂಭವಾಗುತ್ತವೆ.

1. ಏಪ್ರಿಲ್ 12 ರಿಂದ 14 ರವರೆಗೆ ವಿಜಯಪುರದಿಂದ ಹೊರಡುವ ರೈಲು ಸಂಖ್ಯೆ 06920 ವಿಜಯಪುರ-ಎಸ್‌ಎಸ್‌ಎಸ್ ಹುಬ್ಬಳ್ಳಿ ಡೈಲಿ ಪ್ಯಾಸೆಂಜರ್ ಸ್ಪೆಷಲ್ ರೈಲು 45 ನಿಮಿಷ ತಡವಾಗಿ ಹೊರಡಲಿದೆ.
2. ಏಪ್ರಿಲ್ 12 ರಿಂದ 14 ರವರೆಗೆ ಹುಬ್ಬಳ್ಳಿಯಿಂದ ಹೊರಡುವ ರೈಲು ಸಂಖ್ಯೆ 17330 ಎಸ್‌ಎಸ್‌ಎಸ್ ಹುಬ್ಬಳ್ಳಿ-ವಿಜಯವಾಡ ಡೈಲಿ ಎಕ್ಸ್ ಪ್ರೆಸ್ ರೈಲು 60 ನಿಮಿಷ ತಡವಾಗಿ ಹೊರಡಲಿದೆ.
ಈ ರೈಲುಗಳ ಮಾರ್ಗ ಬದಲಾವಣೆ
ತಿರುಪತಿ ನಿಲ್ದಾಣದಲ್ಲಿ ಸುರಕ್ಷತೆಗೆ ಸಂಬಂಧಿಸಿದ ಕಾಮಗಾರಿ ಕೈಗೊಳ್ಳುವುದರಿಂದ ಈ ಕೆಳಗಿನ ರೈಲುಗಳು ಬದಲಾದ ಮಾರ್ಗದ ಮೂಲಕ ಸಂಚರಿಸಲಿದೆ ಎಂದು ದಕ್ಷಿಣ ಮಧ್ಯ ರೈಲ್ವೆಯು ಸೂಚಿಸಿದೆ.

1. ಏಪ್ರಿಲ್ 22 ರಂದು ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ನಿಲ್ದಾಣದಿಂದ ಹೊರಡುವ ರೈಲು ಸಂಖ್ಯೆ 12890 ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು-ಟಾಟಾನಗರ ಎಕ್ಸ್ ಪ್ರೆಸ್ ರೈಲು ಕಟಪಾಡಿ, ಅರಕ್ಕೋಣಂ ಮತ್ತು ರೇಣಿಗುಂಟ ನಿಲ್ದಾಣಗಳ ಮೂಲಕ ಸಂಚರಿಸಲಿದೆ. ಹೀಗಾಗಿ ತಿರುಪತಿ ನಿಲ್ದಾಣದಲ್ಲಿ ನಿಲುಗಡೆ ಇರುವುದಿಲ್ಲ.
2. ಏಪ್ರಿಲ್ 16, 18 ಮತ್ತು 23 ರಂದು ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ನಿಲ್ದಾಣದಿಂದ ಹೊರಡುವ ರೈಲು ಸಂಖ್ಯೆ 12836 ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು-ಹಟಿಯಾ ಎಕ್ಸ್ ಪ್ರೆಸ್ ರೈಲು ಕಟಪಾಡಿ, ಅರಕ್ಕೋಣಂ ಮತ್ತು ರೇಣಿಗುಂಟ ನಿಲ್ದಾಣಗಳ ಮೂಲಕ ಸಂಚರಿಸಲಿದೆ. ಹೀಗಾಗಿ ಚಿತ್ತೂರು ಮತ್ತು ತಿರುಪತಿ ನಿಲ್ದಾಣಗಳಲ್ಲಿ ನಿಲುಗಡೆ ಇರುವುದಿಲ್ಲ.
ಮಾರ್ಗ ಮಧ್ಯೆ ಈ ರೈಲುಗಳು ನಿಯಂತ್ರಣ
ಏಪ್ರಿಲ್ 10 ರಿಂದ 16 ರವರೆಗೆ ಜಲಗಾಂವ್-ಮನ್ಮಾಡ್ ಭಾಗದ ನಡುವಿನ 3 ನೇ ಮಾರ್ಗಕ್ಕೆ ಸಂಬಂಧಿಸಿದಂತೆ ಚಾಲಿಸಗಾಂವ್ ಯಾರ್ಡ್ ಕಾಮಗಾರಿ ಸಲುವಾಗಿ ಈ ಕೆಳಗಿನ ರೈಲುಗಳನ್ನು ಮಾರ್ಗ ಮಧ್ಯದಲ್ಲಿ ನಿಯಂತ್ರಿಸಲಾಗುತ್ತಿದೆ ಎಂದು ಮಧ್ಯ ರೈಲ್ವೆಯು ಸೂಚಿಸಿದೆ.
1. ಏಪ್ರಿಲ್ 15 ರಂದು ವಾಸ್ಕೋ ಡ ಗಾಮಾ ನಿಲ್ದಾಣದಿಂದ ಹೊರಡುವ ರೈಲು ಸಂಖ್ಯೆ 12779 ವಾಸ್ಕೋ ಡ ಗಾಮಾ-ಹಜರತ್ ನಿಜಾಮುದ್ದೀನ್ ಎಕ್ಸ್ ಪ್ರೆಸ್ ರೈಲು ಮಾರ್ಗ ಮಧ್ಯದಲ್ಲಿ 90 ನಿಮಿಷಗಳ ಕಾಲ ನಿಯಂತ್ರಿಸಲಾಗುತ್ತಿದೆ.
2. ಏಪ್ರಿಲ್ 15 ರಂದು ಹಜರತ್ ನಿಜಾಮುದ್ದೀನ್ ನಿಲ್ದಾಣದಿಂದ ಹೊರಡುವ ರೈಲು ಸಂಖ್ಯೆ 12780 ಹಜರತ್ ನಿಜಾಮುದ್ದೀನ್- ವಾಸ್ಕೋ ಡ ಗಾಮಾ ಎಕ್ಸ್ ಪ್ರೆಸ್ ರೈಲು ಮಾರ್ಗ ಮಧ್ಯದಲ್ಲಿ 145 ನಿಮಿಷಗಳ ಕಾಲ ನಿಯಂತ್ರಿಸಲಾಗುತ್ತಿದೆ.
-
Bengaluru Metro: ORR ರಸ್ತೆಯ ನೀಲಿ ಮಾರ್ಗದಲ್ಲಿ ಸಂಯೋಜಿತ ಗರ್ಡರ್ ಸ್ಥಾಪನೆ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ












Click it and Unblock the Notifications