ತಗ್ಗಿದ ಮಳೆ: ಇಂದಿನಿಂದ ಮುಳ್ಳಯ್ಯನಗಿರಿ, ದತ್ತಪೀಠ ಸೇರಿದಂತೆ ಗಿರಿ ಪ್ರದೇಶಗಳ ವೀಕ್ಷಣೆಗೆ ಅವಕಾಶ

ಚಿಕ್ಕಮಗಳೂರು, ಜುಲೈ, 31: ಜುಲೈ ಮಧ್ಯದಲ್ಲಿ ಭಾರೀ ಮಳೆಯಾದ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಹಲವು ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರಿಗೆ ತಾತ್ಕಲಿಕವಾಗಿ ನಿರ್ಬಂಧ ಹೇರಲಾಗಿತ್ತು. ಆದರೆ ಇದೀಗ ಮಳೆ ತಗ್ಗಿದ ಹಿನ್ನೆಲೆ ಮುಳ್ಳಯ್ಯನಗಿರಿ, ದತ್ತಪೀಠ ಸೀತಾಳಯ್ಯನಗಿರಿ, ಮಾಣಿಕ್ಯದಾರ, ಗಾಳಿಕೆರೆ ಸೇರಿದಂತೆ ಗಿರಿ ಪ್ರದೇಶದ ವೀಕ್ಷಣೆಗೆ ಪ್ರವಾಸಿಗರಿಗೆ ಅವಕಾಶ ಕಲ್ಪಿಸಲಾಗಿದೆ.

ಭಾರೀ ಮಳೆ ಹಿನ್ನೆಲೆ ಕಳೆದ ಮೂರು ದಿನಗಳಿಂದ ಚಿಕ್ಕಮಗಳೂರು ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರಿಗೆ ನಿರ್ಬಂಧ ಹೇರಿ ಜಿಲ್ಲಾಡಳಿ ಆದೇಶ ಹೊರಡಿಸಿತ್ತು. ಮುಳ್ಳಯ್ಯನ ಗಿರಿ ಸಾಲಿನಲ್ಲಿ ಧರೆ ಕುಸಿತದಿಂದ ಕೈಮರ ಚೆಕ್ ಪೋಸ್ಟ್‌ನಲ್ಲಿ ಪ್ರವಾಸಿಗರನ್ನು ತಡೆದು ವಾಪಾಸ್‌ ಕಳುಹಿಸಲಾಗುತ್ತಿತ್ತು. ಇದೀಗ ಮಳೆ ಕಡಿಮೆಯಾದ ಹಿನ್ನೆಲೆ ಇಂದು 11 ಗಂಟೆಯಿಂದ ಪ್ರವಾಸಿಗರ ಪ್ರವೇಶಕ್ಕೆ ಜಿಲ್ಲಾಡಳಿತ ಅನುಮತಿ ನೀಡಿದೆ.

tourists-allowed

ಚೆಕ್ ಪೋಸ್ಟ್‌ನಲ್ಲೇ ಪ್ರವಾಸಿಗರಿಗೆ ತಡೆ

ಭಾರೀ ಮಳೆ ಹಿನ್ನೆಲೆ ಹಲವು ಜಿಲ್ಲೆಗಳಲ್ಲಿ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿತ್ತು. ಅದರಲ್ಲೂ ಪಶ್ಚಿಮ ಘಟ್ಟಗಳಂತಹ ಪ್ರವಾಸಿ ತಾಣಗಳಲ್ಲಿ ಜಲಮೂಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದವು. ಆದ್ದರಿಂದ ಮುಂಜಾಗ್ರತಾ ಕ್ರಮವಾಗಿ ಚಿಕ್ಕಮಗಳೂರು ಸೇರಿದಂತೆ ಹಲವು ಜಿಲ್ಲೆಗಳ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿತ್ತು.

ಉಡುಪಿಯ ಜಲಪಾತದಲ್ಲಿ ಯುವಕನೊಬ್ಬ ಕೊಚ್ಚಿ ಹೋಗಿದ್ದ ಬೆನ್ನೆಲ್ಲೇ ಚಿಕ್ಕಮಗಳೂರು ಜಿಲ್ಲಾಡಳಿತ ಹೈ ಅಲರ್ಟ್ ಆಗಿತ್ತು. ಮುಂಜಾಗ್ರತಾ ಕ್ರಮವಾಗಿ ದತ್ತಪೀಠ, ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಹೊನ್ನಮ್ಮನಹಳ್ಳ‌ ಫಾಲ್ಸ್ ಸೇರಿದಂತೆ ಇನ್ನಿತರ ಜಿಲ್ಲೆಯ ಪ್ರವಾಸಿ ತಾಣಗಳಿಗೆ ತಾತ್ಕಾಲಿಕವಾಗಿ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿತ್ತು.

ಅದರಲ್ಲೂ ವೀಕೆಂಡ್‌ನಲ್ಲಿ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಭೇಟಿ ನೀಡುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಸಿಬ್ಬಂದಿ ಮುಂಜಾಗ್ರತಾ ಕ್ರಮವಹಿಸಿದ್ದು, ಕೈಮರ ಚೆಕ್ ಪೋಸ್ಟ್‌ನಲ್ಲೇ ಪ್ರವಾಸಿಗನ್ನು ತಡೆದು ವಾಪಾಸ್‌ ಕಳುಹಿಸಿದ್ದರು.

ಅಲ್ಲದೆ ಮಳೆ ನಿಲ್ಲುವವರೆಗೂ ಜಿಲ್ಲೆ ಪ್ರವಾಸ ಮುಂದೂಡುವಂತೆ ಜಿಲ್ಲಾಡಳಿತ ಪ್ರವಾಸಿಗರಲ್ಲಿ ಮನವಿ ಮಾಡಿತ್ತು. ಆದರೆ ಪ್ರವಾಸಿಗರು ಮನವಿಗೆ ಸ್ಪಂದಿಸದ ಹಿನ್ನೆಲೆ ಜಿಲ್ಲೆಯ ಗಿರಿ ಪ್ರದೇಶಗಳು ಸೇರಿದಂತೆ ಹಲವು ಪ್ರವಾಸಿ ತಾಣಗಳ ಪ್ರವೇಶಕ್ಕೆ ತಾತ್ಕಾಲಿಕ ನಿರ್ಬಂಧ ಹೇರಿ ಜಿಲ್ಲಾಡಳಿತ ಆದೇಶ ಹೊರಡಿಸಿತ್ತು.

ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರಿಗೆ ನಿರ್ಬಂಧ

ಮತ್ತೊಂದೆಡೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಆರ್ಭಟ ಕೊಂಚ ಕಡಿಮೆಯಾಗಿದೆ. ಜಲಪಾತಗಳು ಮೈದುಂಬಿ ಹರಿಯುತ್ತಿದ್ದು ಜಲಪಾತಗಳತ್ತ ಆಗಮಿಸುವ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದೆ. ಆದರೆ ಇತ್ತೀಚೆಗೆ ಉಡುಪಿಯ ಬೈಂದೂರಿನಲ್ಲಿ ಜಲಪಾತದಲ್ಲಿ ಪ್ರವಾಸಿಗರೊಬ್ಬರು ಜಾರಿ ಬಿದ್ದು ಮೃತಪಟ್ಟ ಬೆನ್ನಲ್ಲೇ ಉತ್ತರಕನ್ನಡ ಜಿಲ್ಲೆಯಲ್ಲಿಯೂ ಪ್ರವಾಸಿ ತಾಣಗಳಿಗೆ ಜಿಲ್ಲಾಡಳಿತ ನಿರ್ಬಂಧ ಹೇರಿತ್ತು.

ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಮಳೆ ನಿರಂತರವಾಗಿ ಸುರಿಯುತ್ತಿದ್ದ‌ ಮಳೆ ಕೊಂಚ ಕಡಿಮೆಯಾಗಿದೆ. ಇದರಿಂದ ಮೈದುಂಬಿ ಹರಿಯುತ್ತಿರುವ ಜಲಪಾತ, ಪ್ರವಾಸಿ ತಾಣಗಳಿಗೆ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆ ಹೆಚ್ಚುತ್ತಲೇ ಇದೆ.‌ ಆದರೆ ಹೀಗೆ ಬಂದ ಪ್ರವಾಸಿಗರು ಮೋಜು ಮಸ್ತಿಯಲ್ಲಿ ತೊಡಗುವ ಕಾರಣಕ್ಕೆ ಅಪಾಯಕ್ಕೆ ಸಿಲುಕುವ ಸಾಧ್ಯತೆಗಳು ಇರುವುದರಿಂದ ಉತ್ತರ ಕನ್ನಡ ಜಿಲ್ಲಾಡಳಿತ ಪ್ರಮುಖ ಕಡಲತೀರಗಳಿಗೆ ಸದ್ಯದ ಮಟ್ಟಿಗೆ ಪ್ರವಾಸಿಗರಿಗೆ ನಿರ್ಬಂಧ ಹೇರಿತ್ತು.

ಹೊನ್ನಾವರದ ಅಪ್ಸರಕೊಂಡ, ಗೋಕರ್ಣ ಸಮೀಪದ ವಿಭೂತಿ ಫಾಲ್ಸ್, ಮಾಗೋಡ್ ಫಾಲ್ಸ್, ಯಲ್ಲಾಪುರ ತಾಲೂಕು ವ್ಯಾಪ್ತಿಯ ಶಿರ್ಲೆ, ಕುಳಿಮಾಗೋಡು, ಕಾನೂರು ಸೇರಿದಂತೆ ಅನೇಕ ದಟ್ಟ‌ ಅರಣ್ಯ ಪ್ರದೇಶದೊಳಗಿನ ಜಲಪಾತಗಳ ಭೇಟಿ ನಿಷೇಧಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ರಾಜು ಮೊಗವೀರ ತಿಳಿಸಿದ್ದತು.

ಆದರೆ ಸ್ಥಳೀಯರ ಗಮನಕ್ಕೆ ಬಾರದಂತೆ ಕೆಲವು ಪ್ರದೇಶಗಳಿಗೆ ತೆರಳಿ ಪ್ರವಾಸಿಗರು ಸಿಕ್ಕಿ ಹಾಕಿಕೊಳ್ಳುತ್ತಿದ್ದು, ಮಳೆಯ ರಕ್ಷಣಾ ಕಾರ್ಯ ಕೂಡ ಸಾಹಸಮಯವಾಗಲಿದೆ. ಹೀಗಾಗಿ ಇಂಥವರಿಗೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದ್ದು, ಪ್ರವಾಸ ಮುಂದೂಡಲು ಸಲಹೆ ನೀಡಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+