ಉತ್ತರ ಕನ್ನಡ ಜಿಲ್ಲೆಯ ಈ ಪ್ರಸಿದ್ಧ ಪ್ರವಾಸಿ ತಾಣಕ್ಕೆ ಪ್ರವಾಸಿಗರಿಗೆ ನಿಷೇಧ, ಕಾರಣ ಏನು?-ಇಲ್ಲಿದೆ ಮಾಹಿತಿ

ಕಾರವಾರ, ಏಪ್ರಿಲ್‌, 15: ಸಾಮಾನ್ಯವಾಗಿ ಮಳೆಗಾಲದಂತಹ ಸಂದರ್ಭದಲ್ಲಿ, ಏನಾದರೂ ಅನಾಹುತಗಳಾಗುವ ಮುನ್ಸೂಚನೆ ಇದ್ದರೆ, ಮುಂಜಾಗ್ರತೆ ದೃಷ್ಟಿಯಿಂದ ಪ್ರವಾಸಿಗರನ್ನು ಅಪಾಯದಿಂದ ತಪ್ಪಿಸಲು ಕೆಲವು ಪ್ರವಾಸಿ ತಾಣಗಳಿಗೆ ನಿರ್ಬಂಧ ಹೇರಲಾಗುತ್ತದೆ. ಹಾಗೆಯೇ ಇದೀಗ ಉತ್ತರ ಕನ್ನಡ ಜಿಲ್ಲೆಯ ಈ ಪ್ರಸಿದ್ದ ಪ್ರವಾಸಿ ತಾಣಕ್ಕೆ ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ. ಹಾಗಾದರೆ ಆ ತಾಣ ಯಾವುದು ಹಾಗೂ ಈ ನಿರ್ಧಾರ ಏಕೆ ಎನ್ನವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ಜಲಪಾತ ವೀಕ್ಷಣೆಗೆಂದು ಹೋಗುವ ಪ್ರವಾಸಿಗರ ಮೇಲೆ ನಿರಂತರ ಜೇನು ದಾಳಿ ಹಿನ್ನೆಲೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಪ್ರಸಿದ್ಧ ಸಾತೊಡ್ಡಿ ಜಲಪಾತಕ್ಕೆ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

Tourists Entry Banned to this amazing tourist spot of uttara kannada district What is reason

ಈಗಾಗಲೇ ಕಳೆದ ಎರಡು ದಿನಗಳಲ್ಲಿ ಹಲವು ಪ್ರವಾಸಿಗರ ಮೇಲೆ ಜೇನು ದಾಳಿ ಮಾಡಿದ್ದು, ಇದರಿಂದ ಪ್ರವಾಸಿಗರು ಆತಂಕಕ್ಕೆ ಒಳಗಾಗಿದ್ದಾರೆ. ಮತ್ತೊಂದೆಡೆಚ ಇದೀಗ ಮತ್ತೆ ಜೇನು ಕಡಿತದಿಂದ ಗಂಭೀರ ಗಾಯಗೊಂಡಿದ್ದ ನಾಲ್ವರು ಪ್ರವಾಸಿಗರನ್ನು ಹುಬ್ಬಳ್ಳಿ ಆಸ್ಪತ್ರೆಗೆ ರವಾನಿಸಲಾಗಿದೆ. ಬೇಸಿಗೆ ರಜೆ ಹಿನ್ನೆಲೆ ನೀಡಿನಲ್ಲಿ ಆಟ ಆಡಲು ಸಾತೊಡ್ಡಿ ಫಾಲ್ಸ್‌ಗೆ ಪ್ರತಿನಿತ್ಯವೂ ಪ್ರವಾಸಿಗರ ದಂಡೇ ಹರಿದು ಬರುತ್ತಿದ್ದು, ಜಲಪಾತದ ಬಳಿಯೇ ಪ್ರವಾಸಿಗರ ಮೇಲೆ ಜೇನುಹುಳಗಳು ನಿರಂತರ ದಾಳಿ ಮಾಡುತ್ತಿವೆ.

ಈ ಹಿನ್ನೆಲೆ ಜಲಪಾತ ವೀಕ್ಷಣೆಗೆ ಅರಣ್ಯ ಇಲಾಖೆ ನಿರ್ಬಂಧ ಹೇರಿ ಬಿಸಗೋಡ ಕ್ರಾಸ್‌ನಲ್ಲಿ ಬ್ಯಾನರ್ ಅಳವಡಿಸಿ ಪ್ರವಾಸಿಗರಿಗೆ ಸೂಚನೆಯನ್ನು ನೀಡಲಾಗಿದೆ. ಇನ್ನು ಜಲಪಾತಕ್ಕೆ ಪ್ರಿನಿತ್ಯವೂ ಸಾವಿರಾರು ಪ್ರವಾಸಿಗರು ಭೇಟಿ ನೀಡುತ್ತಲೇ ಇರುತ್ತಾರೆ. ಇದೀಗ ಜೇನು ನೋಣಗಳ ದಾಳಿ ಹಿನ್ನೆಲೆ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+