ಪ್ರವಾಸ ಕೈಗೊಳ್ಳುವ ಮುನ್ನ ನೆನಪಿರಲಿ: ಚಿಕ್ಕಮಗಳೂರಿನ ಈ ಪ್ರವಾಸಿ ತಾಣಗಳಿಗೆ ಮೂರು ದಿನ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ
ಚಿಕ್ಕಮಗಳೂರು, ಮಾರ್ಚ್, 15: ಕಾಫಿನಾಡು ಅಂತಲೇ ಹೆಸರುವಾಸಿಯಾಗಿರುವ ಚಿಕ್ಕಮಗಳೂರು ಜಿಲ್ಲೆ ತನ್ನ ಒಡಲಲ್ಲಿ ಸ್ವರ್ಗಕ್ಕೆ ಸಮನಾಂದತಹ ಪ್ರವಾಸಿ ತಾಣಗಳನ್ನು ಹೊತ್ತೊಕೊಂಡಿದೆ. ಇಲ್ಲಿಗೆ ಪ್ರತಿದಿನ ಪ್ರವಾಸಿಗರ ದಂಡೇ ಹರಿದುಬರುತ್ತದೆ. ಇದೀಗ ಇಲ್ಲಿನ ಕೆಲ ತಾಣಗಳಿಗೆ ಮೂರು ದಿನ ಪ್ರವೇಶ ನಿರ್ಬಂಧ ಹೇರಿಗೆ. ಹಾಗಾದ್ರೆ ಕಾರಣ ಹಾಗೂ ಎಲ್ಲೆಲ್ಲಿಗೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಚಿಕ್ಕಮಗಳೂರು ಜಿಲ್ಲೆಗೆ ಬರುವ ಪ್ರವಾಸಿಗರ ಪೈಕಿ ಬಹುತೇಕ ಮಂದಿ ಗಿರಿಪ್ರದೇಶಕ್ಕೆ ಭೇಟಿ ನೀಡಲು ಬಯಸುತ್ತಾರೆ. ಆದರೆ, ಕೆಲ ತಾಣಗಳಿಗೆ ಪ್ರವಾಸಿಗರ ಪ್ರವೇಶಕ್ಕೆ ಜಿಲ್ಲಾಡಳಿತ 3 ದಿನಗಳ ಕಾಲ ನಿಷೇಧ ಹೇರಿದೆ. ಅಲ್ಲದೆ, ಕೆಲವು ವಾಹನಗಳ ಸಂಚಾರಕ್ಕೂ ನಿಷೇಧ ಹೇಲಾಗಿದೆ.

ಚಿಕ್ಕಮಗಳೂರು ತಾಲ್ಲೂಕು ಶ್ರೀ ಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ ಐ.ಡಿ. ಪೀಠದಲ್ಲಿ ಮಾರ್ಚ್ 15 ರಿಂದ 17ರವರೆಗೆ ವಾರ್ಷಿಕ ಉರುಸ್ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಸಾವಿಒರಾರು ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಳ್ಳಲಿದ್ದಾರೆ. ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ ಐ.ಡಿ. ಪೀಠಕ್ಕೆ ತೆರಳುವ ರಸ್ತೆಯು ಕಿರಿದಾಗಿದ್ದು, ಹೆಚ್ಚಿನ ಮಳೆ ಬಂದಿದ್ದರಿಂದ ಅಲ್ಲಲ್ಲಿ ರಸ್ತೆ ಕುಸಿದಿದೆ. ಈ ಹಿನ್ನೆಲೆ ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ.
ರಸ್ತೆಯು ಕಿರಿದಾಗಿದ್ದು ಮತ್ತು ಇಳಿಜಾರು ಹಿಮ್ಮುಖ ತಿರುವುಗಳಿಂದ ಕೂಡಿರುವ ಹಿನ್ನೆಲೆ ಮೂರು ದಿನಗಳ ಕೆಎಸ್ಆರ್‌ಟಿಸಿ ಮತ್ತು ಕೆಎಸ್‌ಆರ್‌ಪಿ ವಾಹನಗಳನ್ನು ಹೊರತುಪಡಿಸಿ ಇನ್ನುಳಿದ ಎಲ್ಲಾ ವಾಹನಗಳ ಪ್ರವೇಶಕ್ಕೆ ನಿಷೇಧ ಹೇರಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್. ಆದೇಶ ಹೊರಡಿಸಿದ್ದಾರೆ.

ಈ ನಿರ್ಬಂಧವು ಚಂದ್ರದ್ರೋಣ ಪರ್ವತ ಸರಣಿ ಪ್ರಸಿದ್ಧ ಪ್ರವಾಸಿ ತಾಣಗಳಾದ ದತ್ತಪೀಠ, ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಗಾಳಿಕೆರೆ, ಮಾಣಿಕ್ಯಧಾರಾ ಮತ್ತು ಝರಿಫಾಲ್ಸ್‌ಗೆ ಅನ್ವಹಿಸಲಿದೆ ಎಂದು ತಿಳಿಸಿದ್ದಾರೆ.
ಪ್ರವಾಸಿಗರಿಗೆ ನಿರ್ಬಂಧ: ಬೆಂಗಳೂರಿನ ಸಮೀಪವಿರುವ ಪ್ರಸಿದ್ಧ ಪ್ರವಾಸಿ ತಾಣ ನಂದಿ ಬೆಟ್ಟಕ್ಕೆ ಪ್ರತಿನಿತ್ಯ ಸಾವಿರಾರು ಮಂದಿ ಭೇಟಿ ನೀಡುತ್ತಲೇ ಇರುತ್ತಾರೆ. ಅದರಲ್ಲೂ ಹೊಸ ವರ್ಷ ಬಂತೆಂದರೆ ಸಾಕು ಈ ತಾಣಕ್ಕೆ ಪ್ರವಾಸಿಗರ ದಂಡೇ ಹರಿದುಬರುತ್ತದೆ. ಆದರೆ ಇದೀಗ ಚಿಕ್ಕಬಳ್ಳಾಪುರ ಜಿಲ್ಲಾಡಳಿತವು ಈ ಬಾರಿ ನಂದಿ ಬೆಟ್ಟಕ್ಕೆ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ಹೇರಿತ್ತು.
ಸಾಮಾನ್ಯವಾಗಿ ಹೊಸ ವರ್ಷದ ಸಂದರ್ಭದಲ್ಲಿ ಪ್ರವಾಸಿ ತಾಣಗಳಿಗೆ ಹೆಚ್ಚಿನ ಪ್ರವಾಸಿಗರು ಭೇಟಿ ನೀಡುತ್ತಿರುತ್ತಾರೆ. ಅದರಲ್ಲೂ ಬೆಂಗಳೂರಿಗರು ನಗರದ ಸಮೀಪವೇ ಇರುವ ನಂದಿ ಬೆಟ್ಟಕ್ಕೆ ಹೋಗಲು ಪ್ಲಾನ್ ಮಾಡಿಕೊಂಡಿರುತ್ತಾರೆ. ಇಂತಹವರಿಗೆ ಇದೀಗ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಶಾಕ್ ನೀಡಿತ್ತು.
ನಂದಿ ಗಿರಿಧಾಮದಲ್ಲಿ 2025ರ ಹೊಸ ವರ್ಷಾ ಸಂಭ್ರಮಾಚರಣೆಗೆ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಸಂಪೂರ್ಣವಾಗಿ ನಿಷೇಧಿಸಿತ್ತು. ಡಿಸೆಂಬರ್ 31ರ ಸಂಜೆ 6 ಗಂಟೆಯಿಂದ ಜನವರಿ 1ರ ರಾತ್ರಿ 11 ಗಂಟೆಯವರೆಗೆ ನಂದಿ ಬೆಟ್ಟಕ್ಕೆ ಸಾರ್ವಜನಿಕ ಪ್ರವೇಶವನ್ನು ನಿಷೇಧಿಸಿತ್ತು. ಜೊತೆಗೆ ಅತಿಥಿ ಗೃಹಗಳಿಗೆ ಪ್ರವೇಶ ಕೂಡ ನಿರ್ಬಂಧಿಸಿತ್ತು. ಈ ಮೂಲಕ ನಂದಿ ಬೆಟ್ಟದಲ್ಲಿ ಹೊಸ ವರ್ಷ ಆಚರಣೆ ಮಾಡಲು ಯೋಜನೆಯಲ್ಲಿದ್ದವರಿಗೆ ಶಾಕ್ ನೀಡಿತ್ತು. ಇದರಿಂದ ಪ್ರವಾಸೋದ್ಯಮ ಇಲಾಖೆಯ ಮೇಲೂ ಪರಿಣಾಮ ಬೀರಿತ್ತು.
ನಂದಿ ಬೆಟ್ಟಕ್ಕೆ ಸಾಮಾನ್ಯ ದಿನಗಳಲ್ಲಿಯೇ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡುತ್ತಾರೆ. ಅದರಲ್ಲೂ ಹೆಚ್ಚಿನ ಪ್ರವಾಸಿಗರು ಬರುವುದೇ ಹೊಸ ವರ್ಷದ ಸಮಯದಲ್ಲಿ. ಈ ವೇಳೆಯೇ ಪ್ರವಾಸಿಗರಿಗೆ ನಿರ್ಬಂಧ ಹೇರಿರುವುದರಿಂದ ಪ್ರವಾಸೋದ್ಯಮದ ಆರ್ಥಿಕತೆ ಮೇಲೆಯೂ ಸ್ವಲ್ಪ ಮಟ್ಟಿಗೆ ಪರಿಣಾಮ ಬೀರಿದ ಘಟನೆ ನಡೆದಿತ್ತು.
ಕಳೆದ ಬಾರಿಯ ಅಂದರೆ 2024ರ ಹೊಸ ವರ್ಷದ ವೇಳೆ ಇದೇ ರೀತಿಯಲ್ಲಿ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿತ್ತು. ಹಾಗೆಯೇ 2025ರ ಹೊಸ ವರ್ಷಾಚರಣೆಗೂ ನಿರ್ಬಂಧ ಹೇರಲಾಗಿದೆ. ಈಗಾಗಲೇ ಬೆಂಗಳೂರು ಸೇರಿದಂತೆ ಇಲ್ಲಿನ ಸುತ್ತಮುತ್ತಲಿನ ಬಹುತೇಕ ಮಂದಿ ನಂದಿ ಬೆಟ್ಟದಲ್ಲಿ ಹೊಸ ವರ್ಷಾಚರಣೆ ಮಾಡಲು ತುಗಾಲಲ್ಲಿ ಕಾಯುತ್ತಿದ್ದರು. ಆದರೆ ಪ್ರವೇಶದ ನಿರ್ಬಂಧದಿಂದ ನಿರಾಸೆ ಆದಂತಾಗಿದೆ.












Click it and Unblock the Notifications