Chikkamagaluru Rain: ಸೀತಾಳಯ್ಯನಗಿರಿ, ಮುಳ್ಳಯ್ಯನಗಿರಿಗೆ ವಾಹನ ಸಂಚಾರ ನಿಷೇಧ

ಬೆಂಗಳೂರು, ಜುಲೈ. 16: ಚಿಕ್ಕಮಗಳೂರು ತಾಲ್ಲೂಕಿನ ಸೀತಾಳಯ್ಯನಗಿರಿ, ಮುಳ್ಳಯ್ಯನಗಿರಿ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಅಲ್ಲಲ್ಲಿ ಗುಡ್ಡ ಕುಸಿದಿರುವುದು ಮತ್ತು ರಸ್ತೆಯ ಮೇಲ್ಮೈಗೆ ತೀವ್ರವಾದ ಹಾನಿಯಾಗಿರುವುದರಿಂದ ವಾಹನಗಳ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ಸೀತಾಳಯ್ಯನಗಿರಿ ಮತ್ತು ಮುಳ್ಳಯ್ಯನಗಿರಿಗೆ ಹೋಗುವೆ ರಸ್ತೆಯಲ್ಲಿ ಸ್ಥಳೀಯ ನಿವಾಸಿಗಳ ವಾಹನಗಳು, ಅಂಬುಲೆನ್ಸ್, ಅಗ್ನಿಶಾಮಕ ವಾಹನ, ಪೊಲೀಸ್ ವಾಹನಗಳು ಮತ್ತು ತುರ್ತು ಕಾರ್ಯ ನಿರ್ವಹಿಸುವ ಇತರೆ ಸರ್ಕಾರಿ ಇಲಾಖೆಗಳ ವಾಹನಗಳ ಸಂಚಾರಕ್ಕೆ ಮಾತ್ರ ಅನುಮತಿ ನೀಡಲಾಗಿದೆ.

Traffic restriction on the road leading to Chikkamagaluru taluk Sitalayyanagiri and Mullayanagiri

ಜುಲೈ 15 ರಿಂದ ಚಿಕ್ಕಮಗಳೂರು ತಾಲ್ಲೂಕಿನ ಸೀತಾಳಯ್ಯನಗಿರಿ-ಮುಳ್ಳಯ್ಯನಗಿರಿ ಪ್ರದೇಶದಲ್ಲಿ ಅತೀ ಹೆಚ್ಚು ಮಳೆ ಬೀಳುತ್ತಿದ್ದು, ಈ ರಸ್ತೆಯ ಮೇಲೆ ಅಲ್ಲಲ್ಲಿ ಗುಡ್ಡ ಕುಸಿದಿರುತ್ತದೆ. ಅತೀ ಮಳೆಯಿಂದಾಗಿ ರಸ್ತೆಯ ಮೇಲ್ಮಗೆ ತೀವ್ರವಾದ ಹಾನಿಯಾಗಿರುತ್ತದೆ. ಈ ರಸ್ತೆಯಲ್ಲಿ ವಾಹನಗಳ ಸಂಚಾರ ಅಪಾಯಕಾರಿಯಾಗಿರುತ್ತದೆ. ಹೀಗಾಗಿ ಸೀತಾಳಯ್ಯನಗಿರಿ ಹಾಗೂ ಮುಳ್ಳಯ್ಯನಗಿರಿಗೆ ಹೋಗುವ ರಸ್ತೆಯಲ್ಲಿ ಮಳೆಯ ತೀವ್ರತೆ ಕಡಿಮೆಯಾಗುವವರೆಗೆ ವಾಹನ ಸಂಚಾರವನ್ನು (ಅತೀ ಅವಶ್ಯಕ ವಾಹನಗಳನ್ನು ಹೊರತು ಪಡಿಸಿ) ಪ್ರಯಾಣಿಕರ ಸುರಕ್ಷತೆಯ ಹಿತದೃಷ್ಟಿಯಿಂದ ನಿರ್ಬಂಧಿಸಬೇಕೆಂದು ಲೋಕೋಪಯೋಗಿ ಇಲಾಖೆ ಮನವಿ ಮಾಡಿದೆ.

ಲೋಕೋಪಯೋಗಿ ಇಲಾಖೆಯ ಉಲ್ಲೇಖದಂತೆ ಸಲ್ಲಿಸಿರುವ ವರದಿಯನ್ನು ಪರಿಶೀಲಿಸಿದ ಬಳಿಕ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಸೀತಾಳಯ್ಯನಗಿರಿ ಹಾಗೂ ಮುಳ್ಳಯ್ಯನಗಿರಿಗೆ ಹೋಗುವ ರಸ್ತೆಯಲ್ಲಿ ಸಾರ್ವಜನಿಕರ ಹಾಗೂ ಪ್ರಯಾಣಿಕರ ಸುರಕ್ಷತೆಯ ಹಿತದೃಷ್ಠಿಯಿಂದ ಮುಂಜಾಗ್ರತಾ ಕ್ರಮವಾಗಿ ವಾಹನಗಳ ಸಂಚಾರವನ್ನು ನಿಷೇಧಿಸುವುದು ಸೂಕ್ತವೆಂದು ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ಆದೇಶಿಸಿದ್ದಾರೆ.

ಕೇಂದ್ರ ಮೋಟಾರು ವಾಹನಗಳ ಕಾಯ್ದೆ 1988ರ ಕಲಂ 115 ಮತ್ತು ಕರ್ನಾಟಕ ಮೋಟಾರು ವಾಹನಗಳ ನಿಯಮಾವಳಿಗಳು 1989ರ ನಿಯಮ 221(ಎ) (5) ರಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸೀತಾಳಯ್ಯನಗಿರಿ ಹಾಗೂ ಮುಳ್ಳಯ್ಯನಗಿರಿಗೆ ಹೋಗುವ ರಸ್ತೆಗಳಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಮಳೆಯ ತೀವ್ರತೆ ಕಡಿಮೆಯಾಗುವವರೆಗೆ ಅಂದರೆ ದಿನಾಂಕ: 22.07.2024ರವರೆಗೆ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ನಿಷೇಧಿಸಿ ಆದೇಶಿಸಲಾಗಿದೆ.

Traffic restriction on the road leading to Chikkamagaluru taluk Sitalayyanagiri and Mullayanagiri

ಸಾರ್ವಜನಿಕರಿಗೆ, ಪ್ರವಾಸಿಗರಿಗೆ ಸೂಚನೆ

2024ನೇ ಮುಂಗಾರು ಮಳೆ ಪ್ರಾರಂಭವಾಗಿದ್ದು, ಚಿಕ್ಕಮಗಳೂರು ಜಿಲ್ಲೆಯಾದ್ಯಂತ ವಿಪರೀತ ಮಳೆಯಾಗುತ್ತಿದ್ದು, ಬಹುತೇಕ ಹಳ್ಳ, ಕೆರೆ, ನದಿಗಳು ತುಂಬಿ ಅಪಾಯಕಾರಿ ಮಟ್ಟ ತಲುಪಿದ್ದು, ತುಂಗಾನದಿ, ಭದ್ರಾ ನದಿ, ಹೇಮಾವತಿ ನದಿ ಸೇರಿದಂತೆ ಚಿಕ್ಕಮಗಳೂರು ಜಿಲ್ಲೆಯಲ್ಲಿನ ನದಿಗಳು ಅಪಾಯಕಾರಿ ಮಟ್ಟ ಮೀರಿ ಹರಿಯುತ್ತಿದೆ.

ಹಲವೆಡೆ ಭೂಕುಸಿತ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಹಿಸ ಬೇಕಾಗಿರುವುದರಿಂದ ಸಾರ್ವಜನಿಕರಿಗೆ/ಪ್ರವಾಸಿಗರಿಗೆ ಮುಂದಿನ ಒಂದು ವಾರದವರೆಗೆ ಅಥವಾ ಮಳೆ ಕಡಿಮೆಯಾಗುವವರೆಗೆ ಈ ಕೆಳಕಂಡ ಸೂಚನೆಗಳನ್ನು ಪಾಲಿಸುವಂತೆ ಸೂಚಿಸಲಾಗಿದೆ.

• ಸಾರ್ವಜನಿಕರು/ಪ್ರವಾಸಿಗರು ನದಿಗಳಿಗೆ ಅಥವಾ ತಗ್ಗು ಪ್ರದೇಶಗಳಿಗೆ ಇಳಿಯದಂತೆ ಕಟ್ಟೆಚ್ಚರ ವಹಿಸುವುದು. ಅತಿಯಾದ ಮಳೆಯಿಂದ ಧರೆ, ಗುಡ್ಡ ಕುಸಿತ ಉಂಟಾಗುವ ಸಂಭವವಿರುವುದರಿಂದ ಚಾರಣಿಗರು ಟ್ರಕ್ಕಿಂಗ್ ಮಾಡುವುದನ್ನು ತಾತ್ಕಾಲಿಕೆವಾಗಿ ಮುಂದೂಡುವುದು. ಹೋಂ ಸ್ಟೇ, ರೆಸಾರ್ಟ್, ಅರಣ್ಯ ಇಲಾಖೆ ವತಿಯಿಂದ ಕೈಗೊಳ್ಳುವ ಟ್ರಕ್ಕಿಂಗ್ ಅನ್ನು ಸಧ್ಯಕ್ಕೆ ಸ್ಥಗಿತಗೊಳಿಸುವುದು.

• ರಾಜ್ಯದ ವಿವಿಧ ಸ್ಥಳಗಳಿಂದ ಚಿಕ್ಕಮಗಳೂರು ಜಿಲ್ಲೆಯಲ್ಲಿರುವ ಪ್ರವಾಸಿ ತಾಣಗಳಿಗೆ ಆಗಮಿಸುವ ಪ್ರವಾಸಿಗರು ಚಿಕ್ಕಮಗಳೂರು ಜಿಲ್ಲಾ ಪ್ರವಾಸವನ್ನು ತಾತ್ಕಾಲಿಕವಾಗಿ ಮುಂದೂಡುವುದು. ಈ ಸೂಚನೆಗಳನ್ನು ಪಾಲಿಸುವ ಮೂಲಕ ಸಾರ್ವಜನಿಕರು/ಪ್ರವಾಸಿಗರು ಯಾವುದೇ ಅಪಾಯಕಾರಿ ಘಟನೆಗಳಿಗೆ ಅವಕಾಶ ಕೊಡದೆ ಜಿಲ್ಲಾಡಳಿತಕ್ಕೆ ಸಹಕಾರ ನೀಡಲು ತಿಳಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+