Talakadu: ನಿಸರ್ಗ ಪ್ರೇಮಿಗಳಿಗೆ ತಲಕಾಡು ಇಷ್ಟವಾಗುವುದೇಕೆ?
ಮೈಸೂರು, ಜನವರಿ 18: ಪ್ರವಾಸಿಗರು ಮೈಸೂರು ಜಿಲ್ಲೆಯಲ್ಲಿರುವ ಪ್ರವಾಸಿ ತಾಣಗಳತ್ತ ಹೆಜ್ಜೆ ಹಾಕುತ್ತಿದ್ದು ಅವರಿಗೆ ಮರಳಿನಿಂದ ಕೂಡಿರುವ ಕಾವೇರಿ ನದಿ ತಟದ ತಲಕಾಡು ಇಷ್ಟವಾಗುತ್ತಿದೆ. ಹೀಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಕಾಣಸಿಗುತ್ತಿದ್ದಾರೆ. ಸಾಮಾನ್ಯವಾಗಿ ತಲಕಾಡು ಎಂದಾಕ್ಷಣ ನಾವೆಲ್ಲರೂ ಇತಿಹಾಸದ ದಿನಗಳಿಗೆ ಹೋಗುತ್ತೇವೆ. ಇವತ್ತಿನ ತಲಕಾಡು ಅವತ್ತಿನ ರಾಜಮಹಾರಾಜರ ಕಾಲದಲ್ಲಿ ವೈಭವದಿಂದ ಮೆರೆದ ನಾಡಾಗಿತ್ತು ಎನ್ನುವುದು ಅಷ್ಟೇ ಸತ್ಯ.
ಮೈಸೂರಿನಿಂದ ಸುಮಾರು ಅರುವತ್ತು ಕಿ.ಮೀ. ದೂರದಲ್ಲಿರುವ ತಲಕಾಡು ತಿ.ನರಸೀಪುರ ತಾಲೂಕಿಗೆ ಸೇರಿದೆ. ಭಕ್ತರಿಗೆ ಪವಿತ್ರ ತಾಣವಾಗಿ ಪ್ರವಾಸಿಗರಿಗೆ ಚೆಲುವಿನ ತಾಣವಾಗಿ ಗಮನಸೆಳೆಯುತ್ತದೆ. ಸೋಮದತ್ತ ಋಷಿ ಮತ್ತು ಶಿಷ್ಯರು ಇಲ್ಲಿ ಮೋಕ್ಷ ಪಡೆದಿದ್ದರಿಂದ ಗಜಾರಣ್ಯ ಕ್ಷೇತ್ರ, ಸಿದ್ಧಾರಣ್ಯ ಕ್ಷೇತ್ರವೆಂದೂ, ಗಂಗರ ರಾಜಧಾನಿಯಾಗಿ ಬಳಿಕ ಚೋಳರ ಅಧೀನಕ್ಕೆ ಬಂದಾಗ ರಾಜರಾಜಪುರ ಎಂದೂ, ಇದಾದ ನಂತರ ತಲ ಮತ್ತು ಕಾಡ ಎಂಬ ಬೇಡರು ಇಲ್ಲಿರುವ ವೈದ್ಯನಾಥೇಶ್ವರನನ್ನು ಆರಾಧಿಸಿ ಮೋಕ್ಷ ಪಡೆದಿದ್ದರಿಂದ ತಲಕಾಡು ಎಂಬ ಹೆಸರು ಬಂತೆಂದು ಹೇಳಲಾಗುತ್ತಿದೆ.

ಇನ್ನು ಇತಿಹಾಸದ ಪುಟಗಳನ್ನು ತಿರುವಿದರೆ ಪಶ್ಚಿಮ ಗಂಗರು ಕ್ರಿ.ಶ. ಸುಮಾರು ಆರನೇ ಶತಮಾನದಿಂದ ಹತ್ತನೇ ಶತಮಾನದ ಕೊನೆವರೆಗೂ ತಲಕಾಡನ್ನು ರಾಜಧಾನಿಯನ್ನಾಗಿಸಿಕೊಂಡು ರಾಜ್ಯಭಾರ ನಡೆಸಿ ತಲಕಾಡು ಗಂಗರೆಂದೇ ಹೆಸರುವಾಸಿಯಾದರು. ಆದರೆ ಹತ್ತನೇ ಶತಮಾನದ ಕೊನೆಯ ಭಾಗದಲ್ಲಿ ತಲಕಾಡು ಹಾಗೂ ಸುತ್ತಮುತ್ತಲ ಪ್ರಾಂತ್ಯಗಳನ್ನು ಚೋಳ ಚಕ್ರವರ್ತಿ ರಾಜರಾಜ ಚೋಳನು ತನ್ನ ವಶಕ್ಕೆ ತೆಗೆದುಕೊಂಡನು ಎಂದು ಹೇಳಲಾಗುತ್ತಿದೆ.
ಆ ನಂತರ ಸುಮಾರು 130 ವರ್ಷಗಳ ಕಾಲಚೋಳರು ಆಳ್ವಿಕೆ ನಡೆಸಿದರೆಂದೂ 1117ರಲ್ಲಿ ಹೊಯ್ಸಳ ವಿಷ್ಣುವರ್ಧನ ಚೋಳರನ್ನು ಯುದ್ಧದಲ್ಲಿ ಸೋಲಿಸಿ ಅಧಿಪತ್ಯ ಸ್ಥಾಪಿಸಿದ್ದರಿಂದ ತಲಕಾಡುಗೊಂಡ ಎಂಬ ಬಿರುದು ಪಡೆದನೆಂದೂ ಆ ನಂತರ ಮೈಸೂರು ಒಡೆಯರ್ ಆಳ್ವಿಕೆ ನಡೆಸಿದರೆಂಬುದು ಇತಿಹಾಸದಿಂದ ತಿಳಿದು ಬರುತ್ತದೆ.

ಮರಳಿನಲ್ಲಿ ಹುದುಗಿ ಹೋಗುವ ದೇಗುಲಗಳು
ಸಾಮಾನ್ಯವಾಗಿ ತಲಕಾಡಿಗೆ ಭೇಟಿ ನೀಡುವ ಪ್ರವಾಸಿಗರಿಗೆ ಇಲ್ಲಿನ ಮರಳು ರಾಶಿಗಳು ವಿಸ್ಮಯ ಮೂಡಿಸುತ್ತವೆ. ಇದು ಈ ಕ್ಷೇತ್ರದ ಆಕರ್ಷಣೆಯೂ ಹೌದು. ಇಲ್ಲಿ ಹರಿದು ಹೋಗುವ ಕಾವೇರಿ ನದಿ ದಂಡೆಯಿಂದ ಸುಮಾರು ಮೂರು ಕಿ.ಮೀ. ಒಳಭಾಗದವರೆಗೆ ನಿರ್ಮಾಣವಾಗಿರುವ ನಲವತ್ತು ಅಡಿಗಿಂತಲೂ ಎತ್ತರವಾಗಿರುವ ಮರಳಿನ ದಿಬ್ಬಗಳು ಈ ಕ್ಷೇತ್ರದ ವಿಶೇಷತೆಯನ್ನು ಸಾರುತ್ತಾ ದೂರದಿಂದ ಬರುವ ಪ್ರವಾಸಿಗರನ್ನು ಆಶ್ಚರ್ಯ ಚಕಿತರನ್ನಾಗಿಸುತ್ತದೆ. ಮೇಲ್ನೋಟಕ್ಕೆ ಮರಳ ರಾಶಿಗಳು ಪ್ರಕೃತಿಯ ಸೋಜಿಗವಾಗಿ ಕಂಡು ಬಂದರೂ ಇದು ತಲಕಾಡಿಗೆ ತಟ್ಟಿದ ಶಾಪ ಎಂದರೆ ಆಶ್ಚರ್ಯವಾಗಬಹುದು.
ಇನ್ನು ಇಲ್ಲಿರುವ ವೈದ್ಯನಾಥೇಶ್ವರ, ಅರ್ಕೇಶ್ವರ, ಪಾತಾಳೇಶ್ವರ ಮತ್ತು ಮರಳೇಶ್ವರ ಎಂಬ ನಾಲ್ಕು ಶಿವದೇವಾಲಯಗಳನ್ನು ಸುತ್ತಲಿನಿಂದಲೂ ಮರಳು ಆವರಿಸಿಕೊಳ್ಳುತ್ತದೆ. ಹೀಗಾಗಿ ಈ ದೇವಾಲಯಗಳು ಮರಳಿನಲ್ಲಿ ಹುದುಗಿ ಹೋಗುತ್ತವೆ. ಪಂಚಲಿಂಗದರ್ಶನ ಸಂದರ್ಭ ಮರಳು ತೆಗೆದು ದೇವಾಲಯಗಳಲ್ಲಿ ಪೂಜಾಕಾರ್ಯ ನಡೆಸಿ ಭಕ್ತರಿಗೆ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ. ಇಲ್ಲಿನ ನಾಲ್ಕು ದೇವಾಲಯಗಳಲ್ಲದೆ ಮುಡುಕುತೊರೆಯ ಮಲ್ಲಿಕಾರ್ಜುನ ದೇವಾಲಯದ ಮಲ್ಲಿಕಾರ್ಜುನೇಶ್ವರ ಲಿಂಗವೂ ಸೇರಿಕೊಂಡಿದೆ.

ಒಟ್ಟಾರೆಯಾಗಿ ಹೇಳಬೇಕೆಂದರೆ ತಲಕಾಡು ಪೌರಾಣಿಕ ಮತ್ತು ಐತಿಹಾಸಿಕವಾಗಿ ತನ್ನದೇ ಆದ ವಿಶೇಷತೆಗಳನ್ನು ಹೊಂದಿದೆ. ಚಾರಿತ್ರಿಕ ಹಿನ್ನಲೆ ಏನೇ ಇರಲಿ ನಿಸರ್ಗದ ಸೌಂದರ್ಯವೂ ಈ ತಾಣಕ್ಕೆ ಮೆರಗು ತಂದಿಗೆ ಕಾವೇರಿ ನದಿ ಹರಿದು ಕ್ಷೇತ್ರವನ್ನು ಪವಿತ್ರಗೊಳಿಸಿದ್ದು ಮಾತ್ರವಲ್ಲದೆ ಪ್ರಕೃತಿ ಚೆಲುವಿನಿಂದ ಕಂಗೊಳಿಸುವಂತೆ ಮಾಡಿರುವುದು ನಿಜಕ್ಕೂ ಖುಷಿಪಡುವ ವಿಚಾರವೇ. ಹೀಗಾಗಿಯೇ ನಿಸರ್ಗದ ನಡುವೆ ಪ್ರಶಾಂತ ವಾತಾವರಣದಲ್ಲಿ ಒಂದಷ್ಟು ಹೊತ್ತು ಇರಬೇಕೆಂದು ಬಯಸುವವರು ಸದಾ ಇತ್ತ ಕಡೆ ಮುಖ ಮಾಡುತ್ತಿರುತ್ತಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications