Weekend Travel: ಅರಣ್ಯದ ನಡುವಿನ ಬೇಲದಕುಪ್ಪೆಯಲ್ಲಿ ಜಾತ್ರೆ ಶುರು..ಏನಿದರ ವಿಶೇಷ?
ಮೈಸೂರು, ನವೆಂಬರ್ 22: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ಅರಣ್ಯ ವ್ಯಾಪ್ತಿಯ ಬೇಲದಕುಪ್ಪೆ ಶ್ರೀ ಮಹದೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಕಡೆ ಕಾರ್ತಿಕ ಮಾಸದ ಹಿನ್ನಲೆಯಲ್ಲಿ ನ.23 ರಿಂದ 26ರವರೆಗೆ ನಾಲ್ಕು ದಿನಗಳ ಕಾಲ ವಿಶೇಷ ಪೂಜೆ, ಜಾತ್ರಾ ಮಹೋತ್ಸವಕ್ಕೆ ಸಿದ್ಧತೆಗಳು ಸಮಾರೋಪಾದಿಯಲ್ಲಿ ಸಾಗುತ್ತಿದ್ದು, ಭಕ್ತರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಇನ್ನೊಂದೆಡೆ ಭಕ್ತರು ದೇವರ ದರ್ಶನಕ್ಕಾಗಿ ಕಾತರದಿಂದ ಕಾಯುತ್ತಿದ್ದಾರೆ.
ಪ್ರತಿವರ್ಷದಂತೆ ಶ್ರೀ ಕ್ಷೇತ್ರ ಬೇಲದಕುಪ್ಪೆ ಶ್ರೀ ಮಹದೇಶ್ವರ ಸ್ವಾಮಿ ದೇವಸ್ಥಾನದಲ್ಲಿ ನಡೆಯುವ ಜಾತ್ರಾ ಮಹೋತ್ಸವ ಕಾರ್ತಿಕ ಮಾಸದಲ್ಲಿ ನಡೆಯುತ್ತಿದ್ದ ಜಾತ್ರೆ ಪ್ರಯುಕ್ತ ಧಾರ್ಮಿಕ ಕಾರ್ಯಕ್ರಮಗಳ ತಯಾರಿ ಶುರುವಾಗಿದ್ದು, ಭಕ್ತರು, ಕಾಡು ಪ್ರಾಣಿಗಳು, ಅರಣ್ಯಕ್ಕೆ ಕಿಂಚಿತ್ತು ತೊಂದರೆಯಾಗದಂತೆ ಜಾತ್ರಾ ಮಹೋತ್ಸವವನ್ನು ನಡೆಸಲು ಕೆಲ ನಿರ್ಬಂಧಗಳೊಂದಿಗೆ ಜಿಲ್ಲಾಡಳಿತ ಸಿದ್ಧತೆಯನ್ನು ಕಳೆದೊಂದು ವಾರದಿಂದ ಮಾಡುತ್ತಾ ಬರುತ್ತಿದೆ.

ಈಗಾಗಲೇ ದೇವಸ್ಥಾನ ಸಮಿತಿಯು ಜಾತ್ರಾ ಮಹೋತ್ಸವ ಅಂಗವಾಗಿ ದೇವಸ್ಥಾನದ ಆವರಣ ಸ್ವಚ್ಛಗೊಳಿಸಿ ಸುಣ್ಣ-ಬಣ್ಣ ಬಳಿದು ತಳಿರು ತೋರಣ ಹಾಗೂ ವಿದ್ಯುತ್ ದೀಪಗಳಿಂದ ಅಲಂಕರಿಸಿದ್ದು, ಕೊಂಡೋತ್ಸವ ನಡೆಯುವ ಸ್ಥಳದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಸೂಕ್ತ ವ್ಯವಸ್ಥೆ ಮಾಡಲಾಗಿದೆ. ರಥೋತ್ಸವ ದಿನ ಆಗಮಿಸುವ ಭಕ್ತಾಧಿಗಳಿಗೆ ಯಾವುದೇ ತೊಂದರೆಯಾಗದಂತೆ ಅನ್ನಸಂತರ್ಪಣೆ ನಡೆಸಲು ಹಾಗೂ ಕೊಂಡೋತ್ಸವವನ್ನು ಭಕ್ತರು ಕಣ್ತುಂಬಿಕೊಳ್ಳಲು ಸಕಲ ವ್ಯವಸ್ಥೆ ಕಲ್ಪಿಸಲಾಗಿದೆ. ಇದಲ್ಲದೆ, ಭಕ್ತರಿಗೆ ದೇವರ ದರ್ಶನಕ್ಕೂ ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿದೆ. ಒಟ್ಟಾರೆ ಜಾತ್ರಾ ಮಹೋತ್ಸವ ಸುಸೂತ್ರವಾಗಿ ನಡೆಯಲು ಜಿಲ್ಲಾಡಳಿತ ಸಿದ್ಧತೆ ಕೈಗೊಂಡಿದೆ.
ಜಾತ್ರಾ ಪ್ರಯುಕ್ತ ವಿವಿಧ ಕಾರ್ಯಕ್ರಮ
ಶ್ರೀಕ್ಷೇತ್ರ ಬೇಲದಕುಪ್ಪೆ ಶ್ರೀ ಮಹದೇಶ್ವರಸ್ವಾಮಿ ದೇವಾಲಯದ ವಿಮಾನ ಗೋಪುರ, ಕಳಶ ಪ್ರತಿಷ್ಠಾಪನೆ, ಕುಂಭಾಭಿಷೇಕ ಮತ್ತು ಜಾತ್ರಾ ಮಹೋತ್ಸವದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿದ್ದು, ನ.23ರಂದು ಆಲಯ ಪ್ರವೇಶ, ಗಣಪತಿ ಪೂಜೆ, ಹೋಮ-ಹವನ, ರುದ್ರಾಭಿಷೇಕ ಪಾರಾಯಣ, ನೈವೇದ್ಯ ಮಹಾಮಂಗಳಾರತಿ ಇರಲಿದೆ. ನ.24ರಂದು ಬ್ರಾಹ್ಮಿ ಮುಹೂರ್ತದಲ್ಲಿ ನವರತ್ನನ್ಯಾಸ ವಿಮಾನಕಳಸಸ್ಥಾಪನೆ, ಪ್ರಾಣಪ್ರತಿಷ್ಠೆ, ಪೂರ್ಣಾಹುತಿ ನಂತರ ಮಕರ ಲಗ್ನದಲ್ಲಿ ಮಧ್ಯಾಹ್ನ 12ಕ್ಕೆ ಕುಂಭಾಭಿಷೇಕ, ಮಹಾಮಂಗಳಾರತಿ, ರಾಜೋಪಚಾರ, ತೀರ್ಥ ಪ್ರಸಾದ ವಿನಿಯೋಗ ನಡೆಯಲಿದೆ.
ನ.25ಕ್ಕೆ ಸ್ವಾಮಿ ಅವರಿಗೆ ದೇವಸ್ಥಾನ ಸಮೀಪವಿರುವ ಕೆರೆಯಿಂದ ವಿವಿಧ ಪೂಜೆಗಳನ್ನು ಸಲ್ಲಿಸಿ, ಹಾಲು ಹರವಿ ಸೇವೆ ತೆಗೆದುಕೊಂಡು ದೇವರನ್ನು ದೇವಾಲಯದವರೆಗೂ ಉದ್ಭವಸ್ಥಾನಕ್ಕೆ ಕರೆದೊಯ್ಯಲಾಗುವುದು. ರಾತ್ರಿ ಎಣ್ಣೆಮಜ್ಜನ ಮತ್ತು ಪ್ರಸಾದ ವಿನಯೋಗ ಇರಲಿದೆ. ವೀರಗಾಸೆ ನೃತ್ಯ, ಪೂಜಾ ಕುಣಿತ, ಕೋಲಾಟ, ಕಂಸಾಳೆ ರಸ್ತೆಯ ಮೂಲಕ ನೃತ್ಯ ಪ್ರದರ್ಶನ ನಡೆಯಲಿದೆ. ನಂತರ ಕೊಂಡೋತ್ಸವ ಇರಲಿದೆ. 26ಕ್ಕೆ ರುದ್ರಾಕ್ಷಿ ಮಂಟಪ, ಹುಲಿ ವಾಹನ, ನಂದಿಧ್ವಜದೊಂದಿಗೆ ರಥೋತ್ಸವ ಇರಲಿದೆ. ಜಾತ್ರೆಯ ಆರಂಭದ ದಿನವಾದ ನ.23ರಂದು ಪಾನಕ ಪೂಜೆ ಹಾಗೂ ಸಂಜೆ 5ಕ್ಕೆ ವಿವಿಧ ಕಲಾತಂಡಗಳೊಂದಿಗೆ ದೇವರ ಮೆರವಣಿಗೆ ಜರುಗಲಿದೆ.

ಬಿಗಿಪೊಲೀಸ್ ಬಂದೋಬಸ್ತ್ ವ್ಯವಸ್ಥೆ
ಜಾತ್ರಾ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಸರಗೂರು ಪೊಲೀಸ್ ವೃತ್ತ ನಿರೀಕ್ಷಕ ಎಂ.ಲಕ್ಷ್ಮಿಕಾಂತ್, ಉಪ ನಿರೀಕ್ಷಕ ನಂದೀಶ್ ಕುಮಾರ್ ನೇತೃತ್ವದಲ್ಲಿ ಭದ್ರತೆಯಿಂದಾಗಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಿದೆ. ನಂಜನಗೂಡು ತಾಲೂಕಿನ ಹೆಡಿಯಾಲದಿಂದ ಹಾದನೂರು ಮಾರ್ಗವಾಗಿ ದೇವಾಲಯದವರೆಗೆ ಹಾಗೂ ದೇವಸ್ಥಾನ ಆವರಣದ ಸುತ್ತ ಬ್ಯಾರಿಕೇಡ್ ಗಳನ್ನು ಇರಿಸಿ ವಾಹನ ಹಾಗೂ ಸಾರ್ವಜನಿಕರ ಸುಗಮ ಓಡಾಟಕ್ಕೆ ಅಗತ್ಯ ಕ್ರಮ ಕೈಗೊಂಡಿದ್ದಾರೆ.
ಇದಲ್ಲದೆ ಭಕ್ತರು ದೇವಸ್ಥಾನಕ್ಕೆ ಹೋಗಿ ಬರಲು ಕೆಎಸ್ ಆರ್ ಟಿಸಿಯಿಂದ ಸೂಕ್ತ ಬಸ್ ವ್ಯವಸ್ಥೆ ಕಲ್ಪಿಸಿದೆ. ದ್ವಿಚಕ್ರ ವಾಹನಗಳು, ಖಾಸಗಿ ವಾಹನಗಳಿಗೆ ಪ್ರವೇಶ ನಿರ್ಬಂಧಿಸಿದ ಹಿನ್ನೆಲೆಯಲ್ಲಿ 80ಕ್ಕೂ ಹೆಚ್ಚು ಬಸ್ಗಳನ್ನು ನಿಯೋಜಿಸಲಾಗಿದೆ. ನಂಜನಗೂಡು, ಎಚ್.ಡಿ.ಕೋಟೆ, ಸರಗೂರು, ಗುಂಡ್ಲುಪೇಟೆ ತಾಲೂಕಿನಿಂದ ಭಕ್ತರು ಬಸ್ ನಲ್ಲಿ ಬರಬಹುದು. ಇದರೊಂದಿಗೆ ಅರಣ್ಯ ಪ್ರವೇಶದ್ವಾರದ ಸಮೀಪದಲ್ಲಿರುವ ಅರಳಹಳ್ಳಿ ಗ್ರಾಮದ ಜಮೀನಿನಲ್ಲಿ 8ಎಕರೆ ಜಾಗದಲ್ಲಿ ದ್ವಿಚಕ್ರ, ಖಾಸಗಿ ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ. ಇದಲ್ಲದೆ ತಿಂಡಿ ಅಂಗಡಿಗಳಿಗೂ ವ್ಯವಸ್ಥೆ ಮಾಡಲಾಗಿದೆ.
-
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ












Click it and Unblock the Notifications