B.R Hills: ಬಿಳಿಗಿರಿರಂಗನ ಬೆಟ್ಟಕ್ಕಿದೆ ಇನ್ನಷ್ಟು ಹೆಸರುಗಳು: ಏನಿದರ ವಿಶೇಷ?
ಈ ಸಮಯದಲ್ಲಿ ನಿಸರ್ಗದ ಸುಂದರತೆಯನ್ನು ಸವಿಯುವುದೇ ಒಂಥರಾ ಖುಷಿ ಅದರಲ್ಲೂ ಸುಂದರ ಬೆಟ್ಟ ಶ್ರೇಣಿಯನ್ನು ಹೊಂದಿ ಹಸಿರು ಹಚ್ಚಡವನ್ನು ಹೊದ್ದು ಕುಳಿತಂತೆ ಭಾಸವಾಗುವ ಬಿಳಿಗಿರಿರಂಗನ ಬೆಟ್ಟಕ್ಕೆ ಹೋದವರಿಗೆ ಇಲ್ಲಿನ ನಿಸರ್ಗ ನಿರ್ಮಿತ ನೋಟಗಳು ಮೈಮನ ತಣಿಸದಿರದು.. ಕಣ್ಣು ಹಾಯಿಸಿದುದ್ದಕ್ಕೂ ಕಾಣ ಸಿಗುವ ದೃಶ್ಯಗಳು ನಮ್ಮೆಮ್ಮ ಜಂಜಾಟಕ್ಕೆ ವಿರಾಮದ ಗೆರೆ ಎಳೆದು ಬಿಡುವುದರಲ್ಲಿ ಎರಡು ಮಾತಿಲ್ಲ.
ಬಿಳಿಗಿರಿರಂಗನ ಬೆಟ್ಟವು ಚಾಮರಾಜನಗರ ಜಿಲ್ಲೆಯ ಪ್ರವಾಸಿ ತಾಣಗಳಲ್ಲೊಂದಾಗಿದೆ. ಸಮುದ್ರಮಟ್ಟದಿಂದ ಸುಮಾರು 1552 ಮೀಟರ್ ಎತ್ತರದಲ್ಲಿರುವ ಈ ಬೆಟ್ಟವನ್ನು ಬಿಳಿಗಿರಿ ಬೆಟ್ಟ, ಬಿಳಿಕಲ್ಲ ಬೆಟ್ಟ, ಶ್ವೇತಾದ್ರಿ ಎಂಬ ಹೆಸರುಗಳಿರುವುದು ಮತ್ತು ದೈವಿಕ ಮಹತ್ವಹೊಂದಿ ಶ್ರೀಬಿಳಿಗಿರಿರಂಗನಾಥನ ನೆಲೆಯಾಗಿರುವುದು ವಿಶೇಷವಾಗಿದೆ.

ಸುಮಾರು 540ಚದರ ಕಿ.ಮೀ. ವಿಸ್ತಾರವನ್ನು ಹೊಂದಿರುವ ಬಿಳಿಗಿರಿರಂಗನಬೆಟ್ಟವು ಸದಾ ಹಸಿರು ಹಚ್ಚಡದಿಂದ ಕೂಡಿ ಪ್ರವಾಸಿಗರನ್ನು ತನ್ನತ್ತ ಸೆಳೆಯುತ್ತದೆ. ಬಿಳಿಗಿರಿರಂಗನಬೆಟ್ಟವನ್ನು ಪ್ರವೇಶಿಸುತ್ತಿದ್ದಂತೆಯೇ ಮೇಲಿಂದ ಮೇಲೆ ಬೀಸಿ ಬರುವ ತಂಗಾಳಿಯಿಂದಾಗಿ ನಡುಬೇಸಿಗೆಯೂ ಕೂಡ ಬೆಳದಿಂಗಳೆನೋ ಎಂಬಂತೆ ಭಾಸವಾಗುತ್ತದೆ.
ಶ್ರೀಗಂಧ, ಹೊನ್ನೆ, ಮತ್ತಿ, ಬೀಟೆ, ಬನ್ನಿ ಮೊದಲಾದ ಅಮೂಲ್ಯ ಮರಗಳ ಅರಣ್ಯ ಸಂಪತ್ತು ಹೊಂದಿದ್ದು, ಹುಲಿ, ಚಿರತೆ, ಕರಡಿ, ಆನೆ, ಕಾಡೆಮ್ಮೆ, ಜಿಂಕೆ ಸೇರಿದಂತೆ ವನ್ಯಪ್ರಾಣಿಗಳು... ಕಾಡಿನ ನಡುವೆ ಅಲ್ಲಲ್ಲಿ ಸೋಲಿಗರ ಜೋಪಡಿಗಳು.. ಕಾಫಿ, ಕಿತ್ತಳೆ, ಬಾಳೆ, ಹಿಪ್ಪನೇರಳೆ ಬೆಳೆಯ ತೋಟಗಳು... ಅದರಾಚೆಗಿನ ಕಾಡಿನ ನಡುವಿನ ಅಂಕುಡೊಂಕಿನ ರಸ್ತೆಗಳಲ್ಲಿ ತಲೆ ಮೇಲೆ ಅರಣ್ಯ ಉತ್ಪನ್ನಗಳನ್ನು ಹೊತ್ತು ಸಾಗುವ ಸೋಲಿಗರು... ಅರಣ್ಯದ ನಡುವಿನಿಂದ ಛಂಗನೆ ನೆಗೆದು ಓಡುವ ಜಿಂಕೆಗಳು... ಘೀಳಿಡುವ ಆನೆಗಳು... ಹೀಗೆ ಒಂದು, ಎರಡಲ್ಲ ಹತ್ತಾರು ವಿಸ್ಮಯ ನೋಟಗಳು ಕಣ್ಮುಂದೆ ಹಾದು ಹೋಗುತ್ತವೆ.

ಪೂರ್ವ ಮತ್ತು ಪಶ್ಚಿಮ ಘಟ್ಟಗಳ ಕೊಂಡಿ
ಬಿಳಿಗಿರಿರಂಗನಬೆಟ್ಟ ವನ್ಯಧಾಮವಾಗಿದ್ದು, ಪೂರ್ವ ಮತ್ತು ಪಶ್ಚಿಮ ಘಟ್ಟಗಳ ಕೊಂಡಿ ಎಂದರೆ ತಪ್ಪಾಗುವುದಿಲ್ಲ. ಏಷ್ಯಾದ ಆನೆಗಳು, ಬಿಳಿಪಟ್ಟೆಗಳ ಹುಲಿಗಳ ವಾಸಕ್ಕೆ ಯೋಗ್ಯವಾಗಿರುವ ಈ ತಾಣದಲ್ಲಿ ಸುಮಾರು 700ಕ್ಕೂ ಹೆಚ್ಚು ವೈವಿಧ್ಯಮಯ ಸಸ್ಯ ಪ್ರಭೇದಗಳಿವೆ. ಇಷ್ಟು ಮಾತ್ರವಲ್ಲದೆ ಚಿರತೆ, ಜಿಂಕೆ, ಸೀಳುನಾಯಿ ಮುಂತಾದ ಪ್ರಾಣಿಗಳು 200ಕ್ಕೂ ಅಧಿಕ ಪಕ್ಷಿ ಸಂಕುಲಗಳು ಇಲ್ಲಿವೆ. ಈ ಅರಣ್ಯದಲ್ಲಿ ಬಹಳ ಹಿಂದಿನಿಂದಲೂ ಸೋಲಿಗರು ವಾಸ ಮಾಡುತ್ತಾ ಬಂದಿದ್ದು, ಇಲ್ಲಿ ಸಿಗುವ ಅರಣ್ಯ ಉತ್ಪನ್ನವೇ ಅವರ ಬದುಕಿಗೆ ಆಸರೆಯಾಗಿದೆ.
ಬೆಟ್ಟದ ಮೇಲ್ಭಾಗದಲ್ಲಿ ಶ್ರೀ ಬಿಳಿಗಿರಿರಂಗನಾಥ ಸ್ವಾಮಿ ದೇವಾಲಯವಿದ್ದು, ಇದನ್ನು ಅಭಿವೃದ್ಧಿಗೊಳಿಸಲಾಗಿದೆ. ಇಲ್ಲಿನ ಆಧಿದೇವತೆ ಶ್ರೀ ಬಿಳಿಗಿರಿರಂಗನಾಥ ಹಾಗೂ ಶ್ರೀರಂಗಪಟ್ಟಣದ ರಂಗನಾಥ, ಶಿವನಸಮುದ್ರದ ಹಾಗೂ ತಿರುಚನಾಪಳ್ಳಿಯ ಶ್ರೀರಂಗ, ವೆಂಕಟೇಶ ಅಣ್ಣತಮ್ಮಂದಿರು ಎಂಬ ನಂಬಿಕೆ ಇಲ್ಲಿನವರದ್ದಾಗಿದೆ. ದೇವಾಲಯದ ಅಧಿದೇವರಾದ ಬಿಳಿಗಿರಿ ರಂಗಸ್ವಾಮಿ (ಶ್ರೀನಿವಾಸ)ಯ ಲೋಹ ನಿರ್ಮಿತ ಮೂರ್ತಿಗಳು ನವರಂಗದ ಬಲಭಾಗದ ಮೂರು ಗೂಡುಗಳಲ್ಲಿದ್ದು, ಇಲ್ಲಿಯೇ ಹನುಮಂತ ಮಣವಾಳ ಮಹಾಮುನಿಗಳ ಮೂರ್ತಿಗಳಿವೆ. ಬಲ ಭಾಗದಲ್ಲಿ ಅಲಮೇಲು ಮಂಗೈ ಅಮ್ಮನವರ ಸನ್ನಿಧಿಯಿದೆ.
ಇದು ಬ್ರಹ್ಮಾಂಡಪುರಾಣದ ದಕ್ಷಿಣ ತಿರುಪತಿ
ನವರಂಗದ ಎಡಭಾಗದ ಗೂಡುಗಳಲ್ಲಿ ನಮ್ಮಾಳ್ವಾರ್ ಮತ್ತು ರಾಮಾನುಜರ ವಿಗ್ರಹಗಳಿವೆ. ದ್ವಾರದ ಬಲಗಡೆಯಲ್ಲಿರುವ ಇನ್ನೊಂದು ಗೂಡಿನಲ್ಲಿ ವೇದಾಂತಚಾರ್ಯರ ವಿಗ್ರಹವನ್ನು ನಾವು ಕಾಣಬಹುದು. ಮೂಲದೇವರಾದ ಬಿಳಿಗಿರಿ ರಂಗಸ್ವಾಮಿ ಮೂರ್ತಿಯನ್ನು ವಸಿಷ್ಠರು ಪ್ರತಿಷ್ಠಾಪಿಸಿದರೆಂದು ಹೇಳಲಾಗುತ್ತದೆ. ಇಲ್ಲಿರುವ ತಾಮ್ರಶಾಸನದ ಪ್ರಕಾರ ಬಿಳಿಕಲ್ಲು ತಿರುವೆಂಕಟನಾಥನಿಗೆ ಹದಿನಾಡಿನ ಮುದ್ದರಾಜ 1667ರಲ್ಲಿ ದತ್ತಿ ಬಿಟ್ಟಿದ್ದನಂತೆ. ಇನ್ನು ದಿವಾನ್ ಪೂರ್ಣಯ್ಯ ಈ ದೇವಾಲಯದ ಸೇವೆಗಾಗಿ 2 ಗ್ರಾಮಗಳನ್ನು ದತ್ತಿ ಬಿಟ್ಟರು ಎಂದು ಕೂಡ ಹೇಳಲಾಗುತ್ತಿದೆ.
ಬ್ರಹ್ಮಾಂಡಪುರಾಣದಲ್ಲಿ ಬಿಳಿಗಿರಿರಂಗಬೆಟ್ಟವನ್ನು ದಕ್ಷಿಣ ತಿರುಪತಿ ಎಂದು ಕರೆಯಲಾಗಿದೆ. ಬೆಟ್ಟದ ಮೇಲೆ ಗಂಗಾಧರೇಶ್ವರನ ಗುಡಿ ಇದೆ. ದೇವಸ್ಥಾನದಿಂದ 16ಕಿಮೀ ದೂರದಲ್ಲಿ ಭಾರ್ಗವೀ ನದಿ ಹರಿಯುತ್ತದೆ. ಬಿಳಿಗಿರಿರಂಗಸ್ವಾಮಿಯ ದೇವಸ್ಥಾನದಿಂದ ಸುಮಾರು 19ಕಿಮೀ ದೂರದಲ್ಲಿ ಶಿವಸಮುದ್ರದ ಗಂಗರಾಜ ತನ್ನ ಅಳಿಯನಾಗಿ ಕುಂಚುಕೋಟೆಯನ್ನು ನಿರ್ಮಿಸಿದುದಾಗಿ ತಿಳಿಯುತ್ತದೆ. ಈಗಲೂ ಆ ಕೋಟೆಯ ಅವಶೇಷಗಳನ್ನು ನೋಡಬಹುದಾಗಿದೆ. ಬೆಟ್ಟದ ಬುಡದಲ್ಲಿ ಬೃಂದಾವನವೆಂಬ ತುಳಸಮ್ಮನ ಗುಡಿ ಇದೆ. ಮಧ್ಯಭಾಗದಲ್ಲಿ ಕನಕದಾಸರದೆಂದು ಹೇಳಲಾಗುವ ಗುಹೆ ಇದೆ. ಇನ್ನು ಇಲ್ಲಿನ ದೊಡ್ಡಸಂಪಿಗೆ ಮರಕ್ಕೆ ಪುರಾಣದ ಇತಿಹಾಸವಿದೆ.
ಇಷ್ಟಾರ್ಥ ನೆರವೇರಿಸುವ ಪಾದುಕೆ ಆಶೀರ್ವಾದ
ಬಿಳಿಗಿರಿ ರಂಗನಾಥಸ್ವಾಮಿಯ ಮತ್ತೊಂದು ವಿಶೇಷತೆ ಏನೆಂದರೆ ಪ್ರತಿ ವರ್ಷ ಉತ್ಸವದ ವೇಳೆಯಲ್ಲಿ ಒಂದು ಜೊತೆ ಚಪ್ಪಲಿಯನ್ನು ಸೇವಾರೂಪದಲ್ಲಿ ಅರ್ಪಿಸಲಾಗುತ್ತದೆ. ಈ ಪಾದರಕ್ಷೆ ನಿರ್ಮಾಣವನ್ನು ವಂಶ ಪಾರಂಪರ್ಯವಾಗಿ ಬೇರೆ ಬೇರೆ ಊರುಗಳ ಎರಡು ಕುಟುಂಬಗಳು ತಲಾ ಒಂದೊಂದು ಚಪ್ಪಲಿಯಂತೆ ತಯಾರಿಸುತ್ತಾರೆ.
ಆದರೆ ಪೂಜೆಗೆ ತಂದಾಗ ಅವುಗಳ ವಿನ್ಯಾಸ, ಚಿತ್ತಾರದ ಕಲೆ, ಅಳತೆಯಲ್ಲಿ ವ್ಯತ್ಯಾಸವಾಗದೆ ಒಂದೇ ರೀತಿಯಲ್ಲಿರುವುದು ವಿಶೇಷವಾಗಿದೆ. ಅಷ್ಟೇ ಅಲ್ಲ ದೇವಾಲಯದ ಪೆಟ್ಟಿಗೆಯಲ್ಲಿಟ್ಟ ಚಪ್ಪಲಿ ಕೂಡ ಮುಂದಿನ ಜಾತ್ರೆಯ ಹೊತ್ತಿಗೆ ಸವಿಯುತ್ತದೆ. ಈ ಪಾದುಕೆಯಿಂದ ಆಶೀರ್ವಾದ ಪಡೆದರೆ ಇಷ್ಟಾರ್ಥಗಳು ನೆರವೇರುತ್ತವೆ ಎಂಬುವುದು ಪ್ರತೀತಿ.
ಮೈಸೂರಿನಿಂದ ಸುಮಾರು ತೊಂಬತ್ತು ಕಿ.ಮೀ. ಹಾಗೂ ಚಾಮರಾಜನಗರ ಜಿಲ್ಲೆಯ ಯಳಂದೂರಿನಿಂದ ಸುಮಾರು 15ಕಿಮೀ ದೂರದಲ್ಲಿದೆ. ಪವಿತ್ರ ಕ್ಷೇತ್ರ ಮಾತ್ರವಲ್ಲದೆ, ಪ್ರವಾಸಿಗರ ಸೆಳೆಯುವ ಸುಂದರ ಪ್ರವಾಸಿ ತಾಣವೂ ಆಗಿರುವುದರಿಂದ ಇಲ್ಲಿಗೆ ವರ್ಷಪೂರ್ತಿ ಪ್ರವಾಸಿಗರು ಬರುತ್ತಿರುತ್ತಾರೆ. ಕೆಲವರು ಚಾರಣಿಗರಾಗಿ ಬಂದರೆ ಇನ್ನು ಕೆಲವರು ಭಕ್ತರಾಗಿ ಬಂದು ಸ್ವಾಮಿಯ ದರ್ಶನ ಪಡೆದು ಹಿಂತಿರುಗುತ್ತಾರೆ..
-
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್












Click it and Unblock the Notifications