ಉಡುಪಿ; ನದಿ, ಜಲಪಾತ, ಬೀಚ್‌ಗೆ ಪ್ರವಾಸಿಗರ ಭೇಟಿಗೆ ನಿಷೇಧ

ಉಡುಪಿ, ಜುಲೈ 25; ಕರ್ನಾಟಕದ ಕರಾವಳಿ ಭಾಗದ ಜಿಲ್ಲೆಯಾದ ಉಡುಪಿಯಲ್ಲಿ ಭಾರೀ ಮಳೆಯಾಗುತ್ತಿದೆ. ಹವಾಮಾನ ಇಲಾಖೆಯ ರೆಡ್ ಅಲರ್ಟ್‌ ಸೂಚನೆ ಹಿನ್ನಲೆಯಲ್ಲಿ ಮಂಗಳವಾರ ಅಂಗನವಾಡಿ ಯಿಂದ ಪದವಿ ಪೂರ್ವ ಕಾಲೇಜುಗಳ ತನಕ ವಿದ್ಯಾರ್ಥಿಗಳಿಗೆ ರಜೆಯನ್ನು ಸಹ ಘೋಷಣೆ ಮಾಡಲಾಗಿದೆ.

ಸೋಮವಾರ ಕೊಲ್ಲೂರಿನ ಬಳಿಯ ಅರಿಶಿಣ ಗುಂಡಿ ಜಲಪಾತವನ್ನು ನೋಡಲು ಹೋಗಿದ್ದ ಭದ್ರಾವತಿ ಮೂಲದ ಯುವಕ ಶರತ್ ಕುಮಾರ್ ಕಾಲುಜಾರಿ ಬಿದ್ದು ಸಾವನ್ನಪ್ಪಿದ್ದಾರೆ. ಶವಕ್ಕಾಗಿ ಇನ್ನೂ ಹುಡುಕಾಟ ನಡೆಯುತ್ತಿದೆ.

Udupi District Administration Banned Visiting River Side Falls And Beach

ಮಂಗಳವಾರ ಉಡುಪಿ ಜಿಲ್ಲಾಡಳಿತ ಆದೇಶವೊಂದನ್ನು ಹೊರಡಿಸಿದೆ. ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗಿದ್ದು, ನದಿಗಳು, ಹಳ್ಳಗಳು, ತೋಡುಗಳು ತುಂಬಿ ಹರಿಯುತ್ತಿರುವ ಕಾರಣ ಮುನ್ನೆಚ್ಚರಿಕಾ ಕ್ರಮವನ್ನು ಪ್ರಕಟಿಸಿದೆ.

ಪ್ರವಾಸಿಗರ ಭೇಟಿಗೆ ನಿಷೇಧ; ಉಡುಪಿ ಜಿಲ್ಲೆಯ ಯುವಜನರು, ಸಾರ್ವಜನಿಕರು ಮತ್ತು ಜಿಲ್ಲೆಗೆ ಆಗಮಿಸುವ ಪ್ರವಾಸಿಗರು, ಬೀಚ್‌ಗಳು, ನದಿಗಳು ಹಾಗೂ ಜಲಪಾತಗಳ ಬಳಿ ತೆರಳದಂತೆ ಹಾಗೂ ಫೋಟೋ ಮತ್ತು ವಿಡಿಯೋ ಚಿತ್ರೀಕರಣ ಮಾಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಿಲ್ಲಾಡಳಿತ ಮತ್ತೊಂದು ಪ್ರಕಟಣೆಯಲ್ಲಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು ದಿನಾಂಕ 24/07/2023ರ ಹವಾಮಾನ ಇಲಾಖೆಯ ರೆಡ್ ಅಲರ್ಟ್ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದಿನಾಂಕ 25/07/2023ರಂದು ಉಡುಪಿ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಲಾಗಿರುತ್ತದೆ ಎಂದು ಹೇಳಿದೆ.

ಉಳಿದಂತೆ ಎಲ್ಲಾ ಪದವಿ, ಸ್ನಾತಕೊತ್ತರ ಪದವಿ, ಡಿಪ್ಲೊಮಾ, ಇಂಜಿನಿಯರಿಂಗ್, ಐಟಿಐಗಳಿಗೆ ರಜೆ ಘೋಷಿಸಿರುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಕಾಲೇಜುಗಳಲ್ಲಿ ಪಾಠ ಪ್ರವಚನಗಳನ್ನು ನಡೆಸುವಾಗ ಈ ಅಂಶಗಳನ್ನು ಪರಿಗಣಿಸುವಂತೆ ಕಾಲೇಜುಗಳ ಮುಖ್ಯಸ್ಥರಿಗೆ ಹಾಗೂ ಸಂಬಂಧ ಪಟ್ಟವರಿಗೆ ಸಾಮಾನ್ಯ ಸೂಚನೆಯನ್ನು ನೀಡಲಾಗಿದೆ.

* ವಿದ್ಯಾರ್ಥಿಗಳ ಹಾಜರಾತಿಯನ್ನು ಕಡ್ಡಾಯ ಮಾಡುವಂತಿಲ್ಲ.

* ಕಾಲೇಜು ಮುಖ್ಯಸ್ಥರು ವಿದ್ಯಾರ್ಥಿಗಳು ಕಾಲೇಜಿಗೆ ಆಗಮಿಸುವಾಗ ಹಾಗೂ ಮನೆಗೆ ತೆರಳುವ ಸಂದರ್ಭದಲ್ಲಿ ಯಾವುದೇ ಅಪಾಯವಿಲ್ಲದೇ ಸುರಕ್ಷಿತವಾಗಿ ತಲುಪುವ ಬಗ್ಗೆ ಗಮನವಹಿಸುವುದು.

* ಕಠಿಣವಾದ ದಾರಿ ಎಂದರೆ ತೋಡು ಹಳ್ಳಗಳನ್ನು ದಾಟಿ ಬರುವ ಸಂದರ್ಭಗಳು ಇರುವಂತಹ ವಿದ್ಯಾರ್ಥಿಗಳಿಗೆ ಮನೆಯಲ್ಲಿಯೇ ಸುರಕ್ಷಿತವಾಗಿ ಇರುವಂತೆ ಸೂಚಿಸಲು ತಿಳಿಸಿದೆ.

* ದುರ್ಬಲ/ ಶಿಥಿಲ ಕಟ್ಟಡಗಳು ಇದ್ದಲ್ಲಿ ಅಂತಹ ಕಟ್ಟಡಗಳನ್ನು ಪಾಠ ಪ್ರವಚನಗಳಿಗೆ ಬಳಸುವಂತಿಲ್ಲ. ಈ ನಿಟ್ಟಿನಲ್ಲಿ ಕಾಲೇಜುಗಳ ಮುಖ್ಯಸ್ಥರು ಕಾಲೇಜು ಕಟ್ಟಡಗಳ ಸುಸ್ಥಿತಿಯ ಬಗ್ಗೆ ಗಮನಹರಿಸುವುದು ಹಾಗೂ ಯಾವುದೇ ಅವಘಡಗಳು ಉಂಟಾಗದಂತೆ ಸೂಕ್ತ ಕ್ರಮವಹಿಸುವುದು.

* ಈಗ ಮಳೆಗಾಗಿ, ಮಂಜಾಗರೂಕತಾ ಕ್ರಮವಾಗಿ ರಜೆಯನ್ನು ನೀಡಿ ಉಂಟಾಗಿರುವ ಕಲಿಕಾ ಸಮಯವನ್ನು ಶನಿವಾರ ಮಧ್ಯಾಹ್ನ ಅಥವಾ ಭಾನುವಾರಗಳಂದು ಹೆಚ್ಚುವರಿ ತರಗತಿಗಳನ್ನು ನಡೆಸಿ ನಷ್ಟವನ್ನು ಸರಿದೂಗಿಸುವುದು.

* ವಿದ್ಯಾರ್ಥಿಗಳ ಪೋಷಕರು/ ಕಾಲೇಜು ಮುಖ್ಯಸ್ಥರು, ವಿದ್ಯಾರ್ಥಿಗಳು ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ ಸಮುದ್ರ ತೀರಕ್ಕೆ ಹೋಗದಂತೆ ಜಾಗ್ರತೆ ವಹಿಸುವುದು.

* ವಿದ್ಯಾರ್ಥಿಗಳು ಕಾಲೇಜುಗಳಿಗೆ ಹೋಗುವ ವಾಹನಗಳ ಸುರಕ್ಷತೆಯನ್ನು ನೋಡಿಕೊಳ್ಳುವುದು.

* ಕಾಲೇಜುಗಳಲ್ಲಿ ಪ್ರಾಕೃತಿಕ ವಿಕೋಪ ನಿಭಾಯಿಸುವ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡುವುದು.

* ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ಈ ಕೆಳಕಂಡ ದೂರವಾಣಿಯನ್ನು ಸಂಪರ್ಕಿಸುವುದು. 24*7 ಕಂಟ್ರೋಲ್ ರೂಂ 1077/ 0820-2574802.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+