ವಿಜಯಪುರ-ಮಂಗಳೂರು ಸೇರಿ ಹಲವು ರೈಲು ಸೇವೆ ವಿಸ್ತರಣೆ, ಪಟ್ಟಿ
ಬೆಂಗಳೂರು, ಜೂನ್ 21; ಪ್ರಯಾಣಿಕರ ಬೇಡಿಕೆ ಹಿನ್ನಲೆಯಲ್ಲಿ ನೈಋತ್ಯ ರೈಲ್ವೆ ಹಲವು ವಿಶೇಷ ರೈಲು ಸೇವೆಯ ಅವಧಿ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ. ಕರಾವಳಿ ಮತ್ತು ಉತ್ತರ ಕರ್ನಾಟಕ ಸಂಪರ್ಕಿಸುವ ವಿಜಯಪುರ-ಮಂಗಳೂರು ಪ್ರತಿದಿನದ ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆಯನ್ನು ವಿಸ್ತರಣೆ ಮಾಡಲಾಗಿದೆ.
ನೈಋತ್ಯ ರೈಲ್ವೆ ಈ ಕುರಿತು ಆದೇಶ ಹೊರಡಿಸಿದೆ. ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸಂಚಾರ ಅವಧಿಯನ್ನು ಕೆಲ ದಿನಗಳ ಕಾಲ ವಿಸ್ತರಣೆ ಮಾಡಲು ನೈರುತ್ಯ ರೈಲ್ವೆ ವಲಯ ನಿರ್ಧರಿಸಿದೆ ಎಂದು ಆದೇಶದಲ್ಲಿ ಹೇಳಿದೆ.

ಕರ್ನಾಟಕದ ವಿವಿಧ ಜಿಲ್ಲೆಗಳ ನಡುವೆ ಸಂಪರ್ಕಿಸುವ ಮತ್ತು ಕರ್ನಾಟಕ ಮತ್ತು ಅಕ್ಕಪಕ್ಕದ ರಾಜ್ಯಗಳಿಗೆ ಸಂಚಾರ ನಡೆಸುವ ರೈಲುಗಳು ಸಹ ಇದರಲ್ಲಿ ಸೇರಿವೆ. ಮುಂದಿನ ಆದೇಶದ ತನಕ ಈ ವಿಶೇಷ ರೈಲುಗಳು ಸಂಚಾರ ನಡೆಸಲಿವೆ ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದೆ.
ವಿಸ್ತರಣೆಯಾಗಿರುವ ರೈಲುಗಳು
* ರೈಲು ಸಂಖ್ಯೆ 07355 ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ ಮತ್ತು ರಾಮೇಶ್ವರಂ ನಿಲ್ದಾಣಗಳ ನಡುವೆ ಪ್ರತಿ ಶನಿವಾರ ಸಂಚರಿಸುವ ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆಯನ್ನು ಜುಲೈ 1 ರಿಂದ ಸೆಪ್ಟೆಂಬರ್ 30ರ ತನಕ ವಿಸ್ತರಣೆ ಮಾಡಲಾಗಿದೆ. ಈ ಮೊದಲು ಜೂನ್ 24ರ ತನಕ ಈ ರೈಲು ಓಡಿಸಲು ಸೂಚಿಸಲಾಗಿತ್ತು.
* ರೈಲು ಸಂಖ್ಯೆ 07356 ರಾಮೇಶ್ವರಂ ಮತ್ತು ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ ನಿಲ್ದಾಣಗಳ ನಡುವೆ ಪ್ರತಿ ಭಾನುವಾರ ಸಂಚರಿಸುವ ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆಯನ್ನು ಜುಲೈ 2ರಿಂದ ಅಕ್ಟೋಬರ್ 1ರ ತನಕ ವಿಸ್ತರಿಸಲಾಗಿದೆ. ಈ ಮೊದಲು ಜೂನ್ 25 ರವರೆಗೆ ಓಡಿಸಲು ಆದೇಶಿಸಲಾಗಿತ್ತು.
* ರೈಲು ಸಂಖ್ಯೆ 07377 ವಿಜಯಪುರ ಮತ್ತು ಮಂಗಳೂರು ಜಂಕ್ಷನ್ ನಿಲ್ದಾಣಗಳ ನಡುವೆ ಪ್ರತಿದಿನ ಸಂಚರಿಸುವ ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆಯನ್ನು ಜುಲೈ 1ರಿಂದ ಆಗಸ್ಟ್ 31 ರವರೆಗೆ ವಿಸ್ತರಿಸಲಾಗುತ್ತಿದೆ. ಈ ಮೊದಲು ಜೂನ್ 30 ರವರೆಗೆ ಓಡಿಸಲು ಸೂಚಿಸಲಾಗಿತ್ತು.
* ರೈಲು ಸಂಖ್ಯೆ 07378ಮಂಗಳೂರು ಜಂಕ್ಷನ್ ಮತ್ತು ವಿಜಯಪುರ ನಿಲ್ದಾಣಗಳ ನಡುವೆ ಪ್ರತಿದಿನ ಸಂಚರಿಸುವ ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆಯನ್ನು ಜುಲೈ 2ರಿಂದ ಸೆಪ್ಟೆಂಬರ್ 1 ರವರೆಗೆ ವಿಸ್ತರಿಸಲಾಗುತ್ತಿದೆ. ಈ ಮೊದಲು ಜುಲೈ 1 ರವರೆಗೆ ಓಡಿಸಲು ಆದೇಶ ನೀಡಲಾಗಿತ್ತು.
* ರೈಲು ಸಂಖ್ಯೆ 07325 ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ ಮತ್ತು ತಂಜಾವೂರು ನಿಲ್ದಾಣಗಳ ನಡುವೆ ಪ್ರತಿ ಸೋಮವಾರ ಸಂಚರಿಸುವ ಎಕ್ಸ್‌ಪ್ರೆಸ್ ರೈಲು ಸೇವೆಯನ್ನು ಜುಲೈ 3 ರಿಂದ 31 ರವರೆಗೆ ವಿಸ್ತರಿಸಲಾಗುತ್ತಿದೆ. ಈ ಮೊದಲು ಜೂನ್ 26 ರವರೆಗೆ ಓಡಿಸಲು ಸೂಚಿಸಲಾಗಿತ್ತು.
* ರೈಲು ಸಂಖ್ಯೆ 07326 ತಂಜಾವೂರು ಮತ್ತು ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ ನಿಲ್ದಾಣಗಳ ನಡುವೆ ಪ್ರತಿ ಮಂಗಳವಾರ ಸಂಚರಿಸುವ ಎಕ್ಸ್‌ಪ್ರೆಸ್ ರೈಲು ಸೇವೆಯನ್ನು ಜುಲೈ 4 ರಿಂದ ಆಗಸ್ಟ್ 1 ರವರೆಗೆ ವಿಸ್ತರಿಸಲಾಗುತ್ತಿದೆ. ಈ ಮೊದಲು ಜೂನ್ 27 ರವರೆಗೆ ಓಡಿಸಲು ಆದೇಶಿಸಲಾಗಿತ್ತು.
* ರೈಲು ಸಂಖ್ಯೆ 06545 ಯಶವಂತಪುರ ಮತ್ತು ವಿಜಯಪುರ ನಿಲ್ದಾಣಗಳ ನಡುವೆ ಪ್ರತಿದಿನ ಸಂಚರಿಸುವ ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆಯ ಅವಧಿಯನ್ನು ಸೆಪ್ಟೆಂಬರ್ 29 ರವರೆಗೆ ವಿಸ್ತರಿಸಲಾಗುತ್ತಿದೆ. ಈ ಮೊದಲು ಜೂನ್ 30 ರವರೆಗೆ ಓಡಿಸಲು ಸೂಚಿಸಲಾಗಿತ್ತು.
* ರೈಲು ಸಂಖ್ಯೆ 06546 ವಿಜಯಪುರ ಮತ್ತು ಯಶವಂತಪುರ ನಿಲ್ದಾಣಗಳ ನಡುವೆ ಪ್ರತಿದಿನ ಸಂಚರಿಸುವ ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆಯ ಅವಧಿಯನ್ನು ಸೆಪ್ಟೆಂಬರ್ 30 ರವರೆಗೆ ವಿಸ್ತರಿಸಲಾಗುತ್ತಿದೆ. ಈ ಮೊದಲು ಜುಲೈ 1 ರವರೆಗೆ ಓಡಿಸಲು ಆದೇಶಿಸಲಾಗಿತ್ತು.












Click it and Unblock the Notifications