Vijayapura Mangaluru Express: ಮಂಗಳೂರು ವಿಜಯಪುರ ರೈಲು ಪ್ರಯಾಣಿಕರಿಗೆ ಮಾಹಿತಿ
ಬೆಂಗಳೂರು, ಏಪ್ರಿಲ್. 16: ನೈರುತ್ಯ ರೈಲ್ವೆಯು ಮೂರು ರೈಲುಗಳ ತಾತ್ಕಾಲಿಕ ನಿಲುಗಡೆ ಮುಂದುವರಿಕೆ ಮಾಡಿ ಆದೇಶ ನೀಡಿದೆ. ಅದರಲ್ಲಿ ವಿಜಯಪುರ - ಮಂಗಳೂರು ಜಂಕ್ಷನ್ ನಡುವೆ ಹೋಗುವ ಎಕ್ಸ್‌ಕ್ರೆಸ್ ರೈಲು ಕೂಡ ಒಂದು. ಇತ್ತೀಚೆಗಷ್ಟೇ ಈ ರೈಲಿನ ವೇಳಾಪಟ್ಟಿಯನ್ನು ಪರಿಷ್ಕರಿಸಿ ಸೇವೆಯನ್ನು ಮುಂದುವರೆಸಲಾಗಿತ್ತು.
ವಿಜಯಪುರ - ಮಂಗಳೂರು ಜಂಕ್ಷನ್ ನಿಲ್ದಾಣಗಳ ನಡುವೆ ಪ್ರತಿನಿತ್ಯ ಸಂಚರಿಸುವ (ರೈಲು ಸಂಖ್ಯೆ 07377 / 07378) ಎಕ್ಸ್ ಪ್ರೆಸ್ ರೈಲುಗಳಿಗೆ ಬೀರೂರು ನಿಲ್ದಾಣದಲ್ಲಿ ಎರಡು ನಿಮಿಷ ತಾತ್ಕಾಲಿಕ ನಿಲುಗಡೆ ನೀಡಲಾಗುತ್ತಿದೆ. ಏಪ್ರಿಲ್ 17 ರಿಂದ ಅಕ್ಟೋಬರ್ 16, 2024 ರವರೆಗೆ ರವರೆಗೆ ಅಂದರೆ ಬರೋಬ್ಬರಿ ಆರು ತಿಂಗಳ ಕಾಲ ಈ ತಾತ್ಕಾಲಿಕ ನಿಲುಗಡೆ ಮುಂದುವರಿಸಲಾಗುತ್ತಿದೆ.

ವಿಜಯಪುರ ಮಂಗಳೂರು ಎಕ್ಸ್‌ಪ್ರೆಸ್ ರೈಲಿನ ತಾತ್ಕಾಲಿಕ ನಿಲುಗಡೆಗಾಗಿ ಪ್ರಯಾಣಿಕರು ಹಲವು ದಿನಗಳಿಂದ ಬೇಡಿಕೆ ಇಟ್ಟಿದ್ದರು. ಈ ರೈಲು ಬೀರೂರು ಜಂಕ್ಷನ್‌ನಲ್ಲಿ ಎರಡು ನಿಮಿಷಗಳ ತಾತ್ಕಾಲಿಕ ಸ್ಟಾಪ್ ನೀಡುವ ಮೂಲಕ ರೈಲು ಪ್ರಯಾಣಿಕರ ಬೇಡಿಕೆ ಈಡೇರಿದೆ. ಶಿವಮೊಗ್ಗ ಮತ್ತು ದಾವಣಗೆರೆ ಭಾಗಗಳಿಗೆ ತೆರಳುವ ರೈಲು ಪ್ರಯಾಣಿಕರಿಗೆ ಈ ನಿಲುಗಡೆ ಹೆಚ್ಚು ಉಪಯೋಗವಾಗಲಿದೆ.
ಇತ್ತೀಚೆಗಷ್ಟೇ ರೈಲು ಸಂಖ್ಯೆ 07377 ವಿಜಯಪುರ - ಮಂಗಳೂರು ಜಂಕ್ಷನ್ ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆಯನ್ನು ಏಪ್ರಿಲ್ 1 ರಿಂದ ಸೆಪ್ಟೆಂಬರ್ 30, 2024 ರವರೆಗೆ ವಿಸ್ತರಣೆ ಮಾಡಲಾಗುತ್ತಿದೆ. ಈ ಮೊದಲು ಮಾರ್ಚ್ ತಿಂಗಳ 31 ರವರೆಗೆ ಸೂಚಿಸಲಾಗಿತ್ತು.

ಇನ್ನು, ರೈಲು ಸಂಖ್ಯೆ 07378 ಮಂಗಳೂರು ಜಂಕ್ಷನ್ - ವಿಜಯಪುರ ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆಯನ್ನು ಏಪ್ರಿಲ್ 2 ರಿಂದ ಅಕ್ಟೋಬರ್ 1, 2024 ರವರೆಗೆ ವಿಸ್ತರಣೆ ಮಾಡಲಾಗುತ್ತಿದೆ. ಈ ಮೊದಲು ಏಪ್ರಿಲ್ 1, 2024 ರವರೆಗೆ ವಿಸ್ತರಣೆಗೆ ಸೂಚಿಸಲಾಗಿತ್ತು. ಈಗ ತಾತ್ಕಾಲಿಕ ನಿಲುಗಡೆಯನ್ನೂ ಮುಂದುವರೆಸಿದ್ದು, ರೈಲು ಪ್ರಯಾಣಿಕರ ಸಂತಸಕ್ಕೆ ಕಾರಣವಾಗಿದೆ.
ಹತ್ತು ವಿಶೇಷ ರೈಲುಗಳ ಸಂಚಾರ ಮುಂದುವರಿಕೆ
ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ತೆರವುಗೊಳಿಸುವ ಸಲುವಾಗಿ ಬೆಂಗಳೂರಿನ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ದಾನಾಪುರ ನಿಲ್ದಾಣಗಳ ನಡುವೆ ಚಲಿಸುವ ಹತ್ತು ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವೆಯನ್ನು ಅಸ್ತಿತ್ವದಲ್ಲಿರುವ ಮಾರ್ಗ, ನಿಲುಗಡೆ ಮತ್ತು ಸಮಯದೊಂದಿಗೆ ಜುಲೈ 2024 ರವರೆಗೆ ಮುಂದುವರಿಸಲು ಪೂರ್ವ ಮಧ್ಯ ರೈಲ್ವೆ ವಲಯವು ಸೂಚಿಸಿದೆ. ಅವುಗಳ ವಿವರ ಈ ಕೆಳಗಿನಂತಿವೆ.
1. ರೈಲು ಸಂಖ್ಯೆ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು-ದಾನಾಪುರ 03245 ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲನ್ನು 31.07.) ರವರೆಗೆ ಸಂಚರಿಸಲಿದೆ 2024 (14 ಟ್ರಿಪ್).
2. ರೈಲು ಸಂಖ್ಯೆ 03246 ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು-ದಾನಾಪುರ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲು 02.08.2024 ರವರೆಗೆ ಸಂಚರಿಸಲಿದೆ (14 ಟ್ರಿಪ್).
3. ರೈಲು ಸಂಖ್ಯೆ 03251 ದಾನಾಪುರ-ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ದ್ವಿ-ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲು 29.07.2024 ರವರೆಗೆ ಸಂಚರಿಸಲಿದೆ (26 ಟ್ರಿಪ್).
4. ರೈಲು ಸಂಖ್ಯೆ 03252 ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು-ದಾನಾಪುರ ದ್ವಿ-ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲು 31.07.2024 ರವರೆಗೆ ಸಂಚರಿಸಲಿದೆ (26 ಟ್ರಿಪ್).
5. ರೈಲು ಸಂಖ್ಯೆ 03259 ದಾನಾಪುರ-ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲು 30.07.2024 ರವರೆಗೆ ಸಂಚರಿಸಲಿದೆ (13 ಟ್ರಿಪ್).
6. ರೈಲು ಸಂಖ್ಯೆ 03260 ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು-ದಾನಾಪುರ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲು 01.07.2024 ರವರೆಗೆ ಸಂಚರಿಸಲಿದೆ (13 ಟ್ರಿಪ್).
7. ರೈಲು ಸಂಖ್ಯೆ 03247 ದಾನಾಪುರ-ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲು 25.07.2024 ರವರೆಗೆ ಸಂಚರಿಸಲಿದೆ (13 ಟ್ರಿಪ್).
8. ರೈಲು ಸಂಖ್ಯೆ 03248 ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು-ದಾನಾಪುರ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲು 27.07.2024 ರವರೆಗೆ ಸಂಚರಿಸಲಿದೆ (13 ಟ್ರಿಪ್).
9. ರೈಲು ಸಂಖ್ಯೆ 03241 ದಾನಾಪುರ-ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲು 26.07.2024 ರವರೆಗೆ ಸಂಚರಿಸಲಿದೆ (13 ಟ್ರಿಪ್).
10. ರೈಲು ಸಂಖ್ಯೆ 03242 ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು-ದಾನಾಪುರ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲು 28.07.2024 ರವರೆಗೆ ಸಂಚರಿಸಲಿದೆ (13 ಟ್ರಿಪ್).
-
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ












Click it and Unblock the Notifications