ವಿಜಯಪುರ-ಮಂಗಳೂರು ರೈಲು ವೇಳಾಪಟ್ಟಿ; ಧರ್ಮಸ್ಥಳ ಭಕ್ತರಿಗೆ ಸಿಹಿಸುದ್ದಿ
ವಿಜಯಪುರ, ಮಾರ್ಚ್ 23: ಭಾರತೀಯ ರೈಲ್ವೆ ಧರ್ಮಸ್ಥಳ, ಕುಕ್ಕೆ ಸುಬ್ರಮಣ್ಯದ ಭಕ್ತರಿಗೆ ಸಿಹಿಸುದ್ದಿ ನೀಡಿದೆ. ಕರ್ನಾಟಕದ ಕರಾವಳಿ ಮತ್ತು ಉತ್ತರ ಕರ್ನಾಟಕ ನಡುವೆ ಸಂಪರ್ಕ ಕಲ್ಪಿಸುವ ವಿಜಯಪುರ-ಮಂಗಳೂರು ಜಂಕ್ಷನ್ ನಡುವಿನ ಪ್ರತಿದಿನದ ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆಯನ್ನು ವಿಸ್ತರಣೆ ಮಾಡಿದೆ, ವೇಳಾಪಪಟ್ಟಿಯನ್ನು ಬದಲಾವಣೆ ಮಾಡಿದೆ.
ನೈಋತ್ಯ ರೈಲ್ವೆ ಈ ಕುರಿತು ಆದೇಶವನ್ನು ಹೊರಡಿಸಿದೆ. ರೈಲು ನಂಬರ್ 07377 ವಿಜಯಪುರ (ಬಿಜಾಪುರ)-ಮಂಗಳೂರು ಜಂಕ್ಷನ್ ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆಯನ್ನು 1/4/2024 ರಿಂದ 30/9/2024ರ ತನಕ ವಿಸ್ತರಣೆ ಮಾಡಲಾಗಿದೆ.

ರೈಲು ನಂಬರ್ 07378. ಮಂಗಳೂರು ಜಂಕ್ಷನ್-ವಿಜಯಪುರ (ಬಿಜಾಪುರ) ರೈಲನ್ನು 2/4/2024 ರಿಂದ 1/10/2024ರ ತನಕ ವಿಸ್ತರಣೆ ಮಾಡಲಾಗಿದೆ. ಈಗಿರುವ ನಿಲ್ದಾಣ, ಬೋಗಿಗಳ ಸಂಯೋಜನೆ, ದರಗಳಲ್ಲಿ ಯಾವುದೇ ಬದಲಾವಣೆ ಇಲ್ಲದಂತೆ ರೈಲು ಸೇವೆಯನ್ನು ವಿಸ್ತರಣೆ ಮಾಡಲಾಗಿದೆ.
20223ರ ಡಿಸೆಂಬರ್‌ನಲ್ಲಿ ವಿಜಯಪುರ-ಮಂಗಳೂರು ಜಂಕ್ಷನ್ ರೈಲನ್ನು ವಿಸ್ತರಣೆ ಮಾಡಿ ನೈಋತ್ಯ ರೈಲ್ವೆ ಆದೇಶ ಹೊರಡಿಸಿತ್ತು. ರೈಲು ನಂಬರ್ 07377 1/1/2024 ರಿಂದ 31/3/2024ರ ತನಕ ಮತ್ತು ರೈಲು ನಂಬರ್ 07378 2/1/2024 ರಿಂದ 1/4/2024ರ ತನಕ ವಿಸ್ತರಣೆ ಮಾಡಲಾಗಿತ್ತು. ಈಗ ಪುನಃ ರೈಲು ಸೇವೆ ವಿಸ್ತರಣೆ ಮಾಡಲಾಗಿದೆ.
ವೇಳಾಪಟ್ಟಿ ಬದಲು: ವಿಜಯಪುರ-ಮಂಗಳೂರು ಜಂಕ್ಷನ್ ನಡುವಿನ ಪ್ರತಿದಿನದ ವಿಶೇಷ ಎಕ್ಸ್‌ಪ್ರೆಸ್ ರೈಲು ವೇಳಾಪಟ್ಟಿಯನ್ನು ವಿಜಯಪುರದಿಂದ ಹೊರಡುವಾಗ ಬದಲಾವಣೆ ಮಾಡಲಾಗಿದೆ. ಪರಿಷ್ಕೃತ ವೇಳಾಪಟ್ಟಿ ಏಪ್ರಿಲ್ 1ರಿಂದ ಜಾರಿಗೆ ಬರಲಿದೆ.
ವಿಜಯಪುರಿಂದ ಹೊರಡುವ ರೈಲು ಮಂಗಳೂರಿಗೆ 9.30ಕ್ಕೆ ತಲುಪಲಿದೆ. ಇದರಿಂದಾಗಿ ಕುಕ್ಕೆ ಸುಬ್ರಮಣ್ಯ, ಧರ್ಮಸ್ಥಳ ಸೇರಿದಂತೆ ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡುವವರಿಗೆ, ಆರೋಗ್ಯ ಸೇವೆ ಪಡೆಯಲು ಬರುವವರಿಗೆ ಉಪಯೋಗವಾಗಲಿದೆ.
Train timings of Vijayapur-MANGALURU T no 07377/78 has been revised from 1st April 2024 onwards. Also the train has been extended to run till 30 sep. It will help ppl to reach mangalore by 9-30. Special thanks to our MP Sri Ramesh Jigajinagi sir.@KARailway @dkdistrictrail pic.twitter.com/M6yuB0d183
— Vijayapur Railway Horat Samiti (@horat_samiti) March 23, 2024
ವಿಜಯಪುರ-ಮಂಗಳೂರು ಜಂಕ್ಷನ್ ನಡುವಿನ ಪ್ರತಿದಿನದ ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆಯನ್ನು ಕಾಯಂಗೊಳಿಸಬೇಕು ಎಂಬ ಪ್ರಯಾಣಿಕರು, ಜನಪ್ರತಿನಿಧಿಗಳ ಬೇಡಿಕೆಗೆ ಈ ಬಾರಿಯೂ ಸಹ ರೈಲ್ವೆ ಇಲಾಖೆ ಮನ್ನಣೆ ನೀಡದಿರುವುದು ಬೇಸರದ ಸಂಗತಿಯಾಗಿದೆ.
ಪ್ರತಿದಿನ ಸಂಚಾರ ನಡೆಸುವ ಈ ವಿಶೇಷ ಎಕ್ಸ್‌ಪ್ರೆಸ್ ರೈಲು ಕರಾವಳಿ ಮತ್ತು ಉತ್ತರ ಕರ್ನಾಟಕವನ್ನು ಸಂಪರ್ಕಿಸುತ್ತದೆ. ಈ ರೈಲು ಸೇವೆಯಿಂದ ದಕ್ಷಿಣ ಕನ್ನಡದ ದೇವಾಲಯಗಳು, ಆಸ್ಪತ್ರೆಗಳು, ಕಾಲೇಜುಗಳಿಗೆ ಬರುವ ಜನರಿಗೆ ಅನುಕೂಲವಾಗಿದೆ. ಆದ್ದರಿಂದ ಈ ರೈಲನ್ನು ಕಾಯಂಗೊಳಿಸಬೇಕು ಎಂಬ ಬೇಡಿಕೆ ಇತ್ತು. ಆದರೆ ಈಗ ಮತ್ತೆ ರೈಲು ಸೇವೆ ವಿಸ್ತರಣೆಯಾಗಿದ್ದು, ಕಾಯಂಗೊಳಿಸಿಲ್ಲ.
ವಿಜಯಪುರ-ಮಂಗಳೂರು ಜಂಕ್ಷನ್ ರೈಲು ಸದ್ಯ ತತ್ಕಾಲ್ ಮಾದರಿಯಲ್ಲಿ ಸಂಚಾರವನ್ನು ನಡೆಸುತ್ತಿದೆ. ಆದ್ದರಿಂದ ವಿಶೇಷ ಎಕ್ಸ್‌ಪ್ರೆಸ್ ರೈಲಿನ ದರವಿದೆ. ಈ ರೈಲು ಸೇವೆಯನ್ನು ಕಾಯಂಗೊಳಿಸಿದರೆ ಸಾಮಾನ್ಯ ರೈಲಿನ ದರವನ್ನು ನಿಗದಿ ಮಾಡಲಾಗುತ್ತದೆ. ಆಗ ಹೆಚ್ಚು ಜನರು ಸಂಚಾರ ನಡೆಸಲು ಸಹಾಯಕವಾಗುತ್ತದೆ. ಆದ್ದರಿಂದ ಕಾಯಂಗೊಳಿಸಬೇಕು ಎಂಬ ಬೇಡಿಕೆ ಇದೆ.
ಈ ಕುರಿತು ವಿಜಯಪುರದ ಸಂಸದ ರಮೇಶ್ ಜಿಗಜಿಣಗಿ, ರೈಲು ಪ್ರಯಾಣಿಕರ ವೇದಿಕೆಗಳು ನೈಋತ್ಯ ರೈಲ್ವೆಗೆ ಪತ್ರವನ್ನು ಬರೆದಿದ್ದರು. ಆದರೆ ಈಗ ರೈಲು ಸೇವೆ ವಿಸ್ತರಣೆ ಮಾಡಿ ಆದೇಶಿಸಲಾಗಿದೆ. ಕಾಯಂಗೊಳಿಸುವ ಕುರಿತು ಯಾವುದೇ ಪ್ರಸ್ತಾಪವನ್ನು ಇಲಾಖೆ ಮಾಡಿಲ್ಲ.
-
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ












Click it and Unblock the Notifications