ಮೈಸೂರು ಅರಮನೆ ಆವರಣದೊಳಗಿನ ದೇಗುಲಗಳ ದರ್ಶನಕ್ಕೆ ಅವಕಾಶ: ಇಲ್ಲಿದೆ ಸಂಪೂರ್ಣ ಮಾಹಿತಿ
ಮೈಸೂರಿನ ವಿಶ್ವಪ್ರಸಿದ್ಧ ಪ್ರವಾಸಿ ತಾಣ ಅರಮನೆ ಆವರಣದಲ್ಲಿ ಅನೇಕ ದೇವಾಲಯಗಳಿದ್ದು, ಅನೇಕ ಪ್ರವಾಸಿಗರಿಗೆ ಈ ಬಗ್ಗೆ ಮಾಹಿತಿ ಇಲ್ಲ. ಇದೀಗ ಈ ದೇವಾಲಯಗಳಿಗೆ ಭಕ್ತರು ತೆರಳಲು ಅರಮನೆ ಮಂಡಳಿ ಭಕ್ತರಿಗೆ ಅವಕಾಶ ಮಾಡಿಕೊಟ್ಟಿದೆ. ಈ ಬಗ್ಗೆ ಮಾಹಿತಿ ಇಲ್ಲಿದೆ.
ಮೈಸೂರು, ಫೆಬ್ರವರಿ 9: ಮೈಸೂರಿನ ವಿಶ್ವಪ್ರಸಿದ್ಧ ಪ್ರವಾಸಿ ತಾಣವಾದ ಅಂಬಾವಿಲಾಸ ಅರಮನೆ ಆವರಣದಲ್ಲಿ ಹಲವಾರು ದೇಗುಲಗಳಿದ್ದು ಈ ದೇಗುಲಗಳಿಗೆ ಬೆಳಿಗ್ಗೆ ಮತ್ತು ಸಂಜೆ ನಿಗದಿತ ಸಮಯದಲ್ಲಿ ತೆರಳಿ ದೇವರ ದರ್ಶನ ಪಡೆಯಲು ಅರಮನೆ ಮಂಡಳಿ ಭಕ್ತರಿಗೆ ಅವಕಾಶ ಮಾಡಿಕೊಟ್ಟಿದೆ.
ಪ್ರತಿದಿನವೂ ಸಾವಿರಾರು ಪ್ರವಾಸಿಗರು ಬರುತ್ತಿರುತ್ತಾರೆ. ಹೀಗೆ ಬರುವ ಪ್ರವಾಸಿಗರು ಅರಮನೆಯನ್ನು ನೋಡಿಕೊಂಡು ಹಿಂತಿರುಗುತ್ತಾರೆ. ಆದರೆ ಹೆಚ್ಚಿನವರಿಗೆ ಅರಮನೆ ಆವರಣದಲ್ಲಿರುವ ದೇಗುಲಗಳ ಬಗ್ಗೆ ಗೊತ್ತೇ ಆಗುವುದಿಲ್ಲ. ಜೊತೆಗೆ ಸ್ಥಳೀಯರಿಗೆ ಇಲ್ಲಿರುವ ದೇಗುಲಗಳಿಗೆ ತೆರಳಿ ದೇವರ ದರ್ಶನ ಮಾಡಲು ಅವಕಾಶವೇ ಸಿಗುತ್ತಿರಲಿಲ್ಲ. ಇದೀಗ ಇಲ್ಲಿರುವ ದೇಗುಲಗಳಿಗೆ ತೆರಳಿ ದರ್ಶನ ಪಡೆಯಲು ಅವಕಾಶ ಮಾಡಿಕೊಟ್ಟಿರುವುದರಿಂದ ಭಕ್ತರು ಖುಷಿಪಡುವಂತಾಗಿದೆ.
ಅರಮನೆ ಆವರಣದಲ್ಲಿ ಶ್ರೀ ಪ್ರಸನ್ನ ಕೃಷ್ಣಸ್ವಾಮಿ ದೇವಸ್ಥಾನ, ಶ್ರೀ ಖಿಲ್ಲೆ ವೆಂಕಟರಮಣಸ್ವಾಮಿ ದೇವಸ್ಥಾನ, ಶ್ರೀ ಲಕ್ಷ್ಮಿರಮಣಸ್ವಾಮಿ ದೇವಸ್ಥಾನ, ಶ್ರೀ ಶ್ವೇತವರಾಹಸ್ವಾಮಿ ದೇವಸ್ಥಾನ, ಶ್ರೀ ಗಾಯತ್ರಿದೇವಿ ದೇವಸ್ಥಾನ, ಶ್ರೀ ತ್ರಿನಯನೇಶ್ವರಸ್ವಾಮಿ ದೇವಸ್ಥಾನ, ಶ್ರೀ ಕೋಡಿ ಸೋಮೇಶ್ವರಸ್ವಾಮಿ ದೇವಸ್ಥಾನ, ಶ್ರೀ ಕೋಡಿ ಕಾಲಭೈರವೇಶ್ವರ ದೇವಸ್ಥಾನ, ಶ್ರೀ ಭುವನೇಶ್ವರಿ ದೇವಸ್ಥಾನ, ಕೋಟೆ ಆಂಜನೇಯಸ್ವಾಮಿ ಮೊದಲಾದ ದೇಗುಲಗಳಿವೆ. ಇಲ್ಲಿರುವ ಪ್ರತಿಯೊಂದು ದೇಗುಲವೂ ತನ್ನದೇ ಆದ ಮಹಿಮೆ ಮತ್ತು ಇತಿಹಾಸವನ್ನು ಹೊಂದಿವೆ.

ಅರಮನೆ ದೇವಸ್ಥಾನಗಳ ಬಗ್ಗೆ ಆಡಳಿತ ಮಂಡಳಿಯಿಂದ ಮಾಹಿತಿ
ಈ ದೇಗುಲಗಳಿಗೆ ಭಕ್ತರು ಬೆಳಗ್ಗೆ 6.30 ರಿಂದ 10 ಗಂಟೆ ಹಾಗೂ ಸಂಜೆ 6 ರಿಂದ 8.30 ರವರೆಗೆ ತೆರಳಿ ದೇವರ ದರ್ಶನ ಪಡೆದುಕೊಂಡು ಬರಬಹುದಾಗಿದ್ದು, ಅರಮನೆ ಆವರಣದಲ್ಲಿರುವ ಯಾವ ದೇಗುಲಕ್ಕೆ ಯಾವ ದ್ವಾರದಿಂದ ಹೋಗಬೇಕು ಮತ್ತು ವಾಹನಗಳನ್ನು ಎಲ್ಲಿ ಪಾರ್ಕಿಂಗ್ ಮಾಡಬೇಕು ಎಂಬುದರ ಬಗ್ಗೆ ಅರಮನೆ ಮಂಡಳಿ ಮಾಹಿತಿ ನೀಡಿದೆ. ಅದರಂತೆ ಅರಮನೆ ಆವರಣದಲ್ಲಿರುವ ದೇವಸ್ಥಾನಗಳಿಗೆ ವಾಹನಗಳ ಮೂಲಕ ಬರುವ ಭಕ್ತಾಧಿಗಳು ಪ್ರವೇಶಿಸುವ ದ್ವಾರದ ಹತ್ತಿರವಿರುವ ವಾಹನ ನಿಲ್ದಾಣದಲ್ಲಿ ತಮ್ಮ ವಾಹನಗಳನ್ನು ನಿಲ್ಲಿಸಿ ಪ್ರಮುಖ ದ್ವಾರದ ಮುಖಾಂತರ ದೇವಸ್ಥಾನಕ್ಕೆ ಭದ್ರತಾ ತಪಾಸಣೆಗೊಳಪಟ್ಟ ನಂತರ ತೆರಳ ಬಹುದಾಗಿದೆ. ಶ್ರೀ ಪ್ರಸನ್ನ ಕೃಷ್ಣಸ್ವಾಮಿ ದೇವಸ್ಥಾನ, ಶ್ರೀ ಖಿಲ್ಲೆ ವೆಂಕಟರಮಣಸ್ವಾಮಿ ದೇವಸ್ಥಾನ, ಶ್ರೀ ಲಕ್ಷ್ಮಿರಮಣಸ್ವಾಮಿ ದೇವಸ್ಥಾನಗಳಿಗೆ ಅರಮನೆಯ ಕರಿಕಲ್ಲು ತೊಟ್ಟಿ ದ್ವಾರದ ಮೂಲಕ ಪ್ರವೇಶವನ್ನು ಕಲ್ಪಿಸಲಾಗಿದ್ದು, ಕರಿಕಲ್ಲು ತೊಟ್ಟಿ ದ್ವಾರದ ಎಡಭಾಗದಲ್ಲಿರುವ ವಾಹನ ನಿಲ್ದಾಣದಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ.

ಪ್ರವಾಸಿಗರ ವಾಹನ ನಿಲುಗಡೆಗೆ ವ್ಯವಸ್ಥೆ ಎಲ್ಲೆಲ್ಲಿ..?
ಶ್ರೀ ಶ್ವೇತವರಾಹಸ್ವಾಮಿ ದೇವಸ್ಥಾನಕ್ಕೆ ವರಾಹ ದ್ವಾರದ ಮೂಲಕ ಪ್ರವೇಶವನ್ನು ಕಲ್ಪಿಸಲಾಗಿದ್ದು, ವರಾಹ ದ್ವಾರದ ವಾಹನ ನಿಲ್ದಾಣದಲ್ಲಿ ಪಾರ್ಕಿಂಗ್ ಕಲ್ಪಿಸಲಾಗಿದೆ. ಶ್ರೀ ಗಾಯತ್ರಿದೇವಿ ದೇವಸ್ಥಾನ, ಶ್ರೀ ತ್ರಿನಯನೇಶ್ವರಸ್ವಾಮಿ ದೇವಸ್ಥಾನ, ಶ್ರೀ ಕೋಡಿ ಸೋಮೇಶ್ವರಸ್ವಾಮಿ ದೇವಸ್ಥಾನ, ಶ್ರೀ ಕೋಡಿ ಕಾಲಭೈರವೇಶ್ವರ ದೇವಸ್ಥಾನಗಳಿಗೆ ಜಯ ಮಾರ್ತಾಂಡ ದ್ವಾರದ ಮೂಲಕ ಪ್ರವೇಶವನ್ನು ಕಲ್ಪಿಸಲಾಗಿದ್ದು, ದೊಡ್ಡಕೆರೆ ಮೈದಾನದಲ್ಲಿನ ವಾಹನ ನಿಲ್ದಾಣದಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ.

ಪಾರ್ಕಿಂಗ್ ವ್ಯವಸ್ಥೆ ಎಲ್ಲೆಲ್ಲಿ..?
ಶ್ರೀಭುವನೇಶ್ವರಿ ದೇವಸ್ಥಾನಕ್ಕೆ ಜಯರಾಮ-ಬಲರಾಮ ದ್ವಾರದ ಮೂಲಕ ಪ್ರವೇಶವನ್ನು ಕಲ್ಪಿಸಿದ್ದು ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಹತ್ತಿರವಿರುವ ವಾಹನ ನಿಲ್ದಾಣದಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿರುತ್ತದೆ. ಹಿರಿಯ ನಾಗರೀಕರು, ವಿಶೇಷ ಚೇತನರು ಹಾಗೂ ಅನಾರೋಗ್ಯಪೀಡಿತ ವ್ಯಕ್ತಿಗಳು ತಪಾಸಣೆಗೊಳಪಟ್ಟು ಸೂಚಿಸಿರುವ ಪ್ರಮುಖ ದ್ವಾರಗಳ ಮೂಲಕ ದೇವಸ್ಥಾನಕ್ಕೆ ವಾಹನಗಳಲ್ಲಿ ಪ್ರವೇಶಿಸಲು ಅವಕಾಶ ಕಲ್ಪಿಸಲಾಗಿದೆ.

ದೇಗುಲಗಳ ಪ್ರವೇಶದ ಬಗ್ಗೆ ಮಾಹಿತಿ
ಶ್ರೀ ಪ್ರಸನ್ನ ಕೃಷ್ಣಸ್ವಾಮಿ ದೇವಸ್ಥಾನ, ಶ್ರೀ ಖಿಲ್ಲೆ ವೆಂಕಟರಮಣಸ್ವಾಮಿ ದೇವಸ್ಥಾನ, ಶ್ರೀ ಲಕ್ಷ್ಮೀರಮಣಸ್ವಾಮಿ ದೇವಸ್ಥಾನಗಳಿಗೆ ಕರಿಕಲ್ಲು ತೊಟ್ಟಿ ದ್ವಾರಗಳ ಮೂಲಕ, ಶ್ರೀ ಶ್ವೇತವರಾಹಸ್ವಾಮಿ ದೇವಸ್ಥಾನಕ್ಕೆ ವರಾಹ ದ್ವಾರದ ಮೂಲಕ ಹಾಗೂ ಶ್ರೀ ಗಾಯತ್ರಿದೇವಿ ದೇವಸ್ಥಾನ, ಶ್ರೀ ತ್ರಿನಯನೇಶ್ವರಸ್ವಾಮಿ ದೇವಸ್ಥಾನ, ಶ್ರೀ ಕೋಡಿ ಸೋಮೇಶ್ವರಸ್ವಾಮಿ ದೇವಸ್ಥಾನ, ಶ್ರೀ ಕೋಡಿ ಕಾಲಭೈರವೇಶ್ವರ ದೇವಸ್ಥಾನ ಹಾಗೂ ಶ್ರೀ ಭುವನೇಶ್ವರಿ ದೇವಸ್ಥಾನಗಳಿಗೆ ಕರಿಕಲ್ಲು ತೊಟ್ಟಿ ದ್ವಾರದ ಮೂಲಕ ಪ್ರವೇಶಿಸಿ ಲಕ್ಷ್ಮೀರಮಣಸ್ವಾಮಿ ದೇವಸ್ಥಾನದ ಎಡಭಾಗದಲ್ಲಿರುವ ಮಾರ್ಗದ ಮೂಲಕ ಪ್ರವೇಶಿಸಲು ಅವಕಾಶ ಕಲ್ಪಿಸಲಾಗಿದೆ.
-
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ












Click it and Unblock the Notifications