ಚನ್ನಗಿರಿ-ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ ಪೂರ್ಣ ಯಾವಾಗ.?-ಇಲ್ಲಿದೆ ಮಾಹಿತಿ
ಚನ್ನಗಿರಿ, ಸೆಪ್ಟೆಂಬರ್, 12: ರಾಜ್ಯದ ಹಲವೆಡೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳು ನಡೆಯುತ್ತಿವೆ. ಕೆಲವು ಪ್ರಗತಿಯಲ್ಲಿದ್ದರೆ, ಇನ್ನೂ ಕೆಲವು ಮುಕ್ತಾಯದ ಹಂತಕ್ಕೆ ತಲುಪಿವೆ. ಹಾಗೆಯೇ ಚನ್ನಗಿರಿ-ಶಿವಮೊಗ್ಗ ಮಾರ್ಗದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಹುತೇಕ ಮುಗಿಯುವ ಹಂತ ತಲುಪಿದೆ. ಹಾಗಾದರೆ ಇದು ಯಾವಾಗ ವಾಹನ ಸಂಚಾರಕ್ಕೆ ಮುಕ್ತವಾಗಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ಚನ್ನಗಿರಿ-ಶಿವಮೊಗ್ಗ ಮಾರ್ಗದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಸಮಸ್ಯೆಗಳನ್ನು ಅಧಿಕಾರಿಗಳ ಸಭೆ ಕರೆದು ಸ್ಥಳ ಪರಿಶೀಲನೆ ನಡೆಸಿ, ಬಗೆಹರಿಸಲಾಗಿದ್ದು, 45 ದಿನಗಳಲ್ಲಿ ವಾಹನಗಳ ಸಂಚಾರಕ್ಕೆ ಮುಕ್ತವಾಗಲಿದೆ ಎಂದು ಡಿಸಿ ಜಿಎಂ ಗಂಗಾಧರಸ್ವಾಮಿ ಅವರು ತಿಳಿಸಿದರು. ಪಟ್ಟಣದ ಎಪಿಎಂಸಿ ಆವರಣದಲ್ಲಿ ಕರೆದಿದ್ದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಈ ಬಗ್ಗೆ ಪ್ರತಿಕ್ರಿಯಿಸಿದರು.

ರಾಷ್ಟ್ರೀಯ ಹೆದ್ದಾರಿ ಕಾಮಗಾರು ಮುಕ್ತಾಯದ ಹಂತಕ್ಕೆ ಬಂದಿದ್ದು, ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಬೇಕಿತ್ತು. ಆದರೆ, ರಸ್ತೆ ನಿರ್ಮಾಣದ ಕೆಲ ಸಮಸ್ಯೆಳನ್ನು ಅಧಿಕಾರಿಗಳ ಜೊತೆ ಸಭೆ ನಡೆಸಿ ಸರಿಪಡಿಸಲಾಗಿದೆ. ಚನ್ನಗಿರಿ ಬಳಿಯ ರಸ್ತೆಯಲ್ಲಿ ನಿರ್ಮಾಣ ಮಾಡಿರುವ ಎರಡು ಜಂಕ್ಷನ್ ಸರಿ ಮಾಡುವಂತೆಯೂ ಸೂಚನೆ ನೀಡಿಲಾಗಿದೆ. ಈ ಎಲ್ಲಾ ಸಮಸ್ಯೆಗಳನ್ನು ಸರಿಪಡಿಸಿ ಶೀಘ್ರವೇ ವಾಹನ ಸಂಚಾರಕ್ಕೆ ಮುಕ್ತವಾಗಲಿದೆ ಎನ್ನುವ ಮಾಹಿತಿಯನ್ನು ನೀಡಿದ್ದಾರೆ.
ತಾಲ್ಲೂಕಿನ ಹೆಚ್ಚಿನ ಸಂಖ್ಯೆಯಲ್ಲಿ ಅಡಿಕೆ ಬೆಳೆಗಾರರಿದ್ದಾರೆ. ಅಡಿಕೆ ಬೆಳೆ ಸೀಸನ್ ಇದೀಗ ಆರಂಭವಾಗಿದ್ದು, ಅಡಿಕೆ ಸುಲಿದು ಸಿಪ್ಪೆಯನ್ನ ರಸ್ತೆ ಬದಿಗಳಲ್ಲಿ ಸುರಿದು, ಬೆಂಕಿ ಹಚ್ಚಲಾಗುತ್ತಿದೆ. ಇದರಿಂದ ಪರಿಸರಕ್ಕೆ ಹಾನಿಯಾಗುತ್ತದೆ. ಅಪಘಾತಗಳು ಕೂಡ ಸಂಭವಿಸುತ್ತಿವೆ. ಎಲ್ಲೆಂದರಲ್ಲೇ ಸಿಪ್ಪೆ ಸುರಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಆದ್ದರಿಂದ ಬೆಳೆಗಾರರು ಎಸ್ತೆ ಬದಿ ಬದಲು ತೋಟ, ಜಮೀನುಗಳಲ್ಲಿ ಗುಂಡಿ ತೆಗೆದು ಗೊಬ್ಬರ ತಯಾರಿ ಮಾಡಿಕೊಳ್ಳಬಹುದು. ಇದಕ್ಕೆ ಕೃಷಿ ಇಲಾಖೆ ಸಬ್ಸಿಡಿ ನೀಡುತ್ತದೆ ಎಂದರು.
ಪಟ್ಣಣದಲ್ಲಿ ಯುಜಿಡಿ ಕಾಮಗಾರಿಗಾಗಿ ಎಲ್ಲಾ ರಸ್ತೆಗಳಲ್ಲಿ ಪೈಪ್‌ಲೈನ್ ಅಳವಡಿಕೆ ಮಾಡಿಕೊಂಡಿರುವ ಹಿನ್ನೆಲೆ ಸಂಚಾರಕ್ಕೆ ಸಮಸ್ಯೆಯಾಗಿದೆ. ಅಧಿಕಾರಿಗಳ ಸಭೆ ಕರೆದು ತುರ್ತಾಗಿ ಕಾಮಗಾರಿ ಮುಗಿಸಲು ಆದೇಶಿಸಿದ್ದೇನೆ. ಪ್ರತಿ ತಿಂಗಳು ಚನ್ನಗಿರಿಗೆ ಭೇಟಿ ನೀಡಿ, ಜನರ ಸಮಸ್ಯೆ ಆಲಿಸಿ ಹಂತ ಹಂತವಾಗಿ ಬಗೆಹರಿಸುವ ಕೆಸಲ ಮಾಡುತ್ತೇನೆ ಎಂದರು.
ಜಿಲ್ಲಾ ಪರಿಸರ ಅಧಿಕಾರಿ ರಾಜಶೇಖರ ಪುರಾಣಿಕ್ ಮಾತನಾಡಿ, ಬಯೋಮಾಸ್ ಇರುವ ವಸ್ತು ರಸ್ತೆಯಲ್ಲಿ ಹಾಕಿ ಸುಡುವುದು ಅಪರಾಧ. ಇದರಿಂದ ಪರಿಸರ ಮತ್ತು ಜನರು ಆರೋಗ್ಯದ ಮೇಲೂ ದುಷ್ಪರಿಣಾಮ ಬೀರುತ್ತದೆ ಎಂದು ತಿಳಿಸಿದರು. ಇನ್ನು ರೈತರು ಅಡಿಕೆ ಸಿಪ್ಪೆ ಸುಲಿದು ರಸ್ತೆ ಪಕ್ಕ ಬಿಸಾಡಬೇಡಿ. ಒಂದು ವೇಳೆ ಇದನ್ನು ಮೀರಿದರೆ, ಅಂತಹವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಆಗಲಿದೆ ಎಂದು ಎಚ್ಚರಿಕೆ ಸಂದೇಶ ನೀಡಿದ್ದಾರೆ.












Click it and Unblock the Notifications