ಯಶವಂತಪುರ-ಬೀದರ್ ರೈಲು ಪುನಃ ಆರಂಭ: ವೇಳಾಪಟ್ಟಿ
ಬೆಂಗಳೂರು, ಏಪ್ರಿಲ್ 09: ರಾಜಧಾನಿ ಬೆಂಗಳೂರು ಮತ್ತು ಕಲ್ಯಾಣ ಕರ್ನಾಟಕಕ್ಕೆ ಸಂಚಾರ ನಡೆಸುವ ಜನರಿಗೆ ರೈಲ್ವೆ ಇಲಾಖೆ ಸಿಹಿಸುದ್ದಿ ನೀಡಿದೆ. ಯಶವಂತಪುರ-ಬೀದರ್ ರೈಲು ಸೇವೆಯನ್ನು ಪುನಃ ಆರಂಭಿಸಲಾಗಿದೆ. ಈ ರೈಲು ಸೇವೆ ಆರಂಭಿಸಲು ಬೀದರ್ ಸಂಸದ ಸಾಗರ್ ಖಂಡ್ರೆ ಕೇಂದ್ರ ರೈಲ್ವೆ ಸಚಿವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು.
ಈ ಕುರಿತು ಸಾಗರ್ ಖಂಡ್ರೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಾರೆ. 'ನಮ್ಮ ಬೀದರ್ ಲೋಕಸಭಾ ಕ್ಷೇತ್ರದ ನಾಗರಿಕರು, ವಿದ್ಯಾರ್ಥಿಗಳು, ಉದ್ಯೋಗಿಗಳು ಮತ್ತು ಪ್ರಯಾಣಿಕರ ಅನುಕೂಲಕ್ಕಾಗಿ ನಾನು ಡಿಸೆಂಬರ್ ತಿಂಗಳಲ್ಲಿ ಕೇಂದ್ರ ರೈಲ್ವೆ ಸಚಿವರನ್ನು ಭೇಟಿ ಮಾಡಿ, ಸ್ಥಗಿತಗೊಂಡಿದ್ದ ಯಶವಂತಪುರ-ಬೀದರ್ (16577/ 78) ರೈಲು ಸೇವೆಯನ್ನು ಮರುಪ್ರಾರಂಭಿಸುವಂತೆ ಮನವಿ ಮಾಡಿದ್ದೆ' ಎಂದು ಹೇಳಿದ್ದಾರೆ.

'ಮನವಿಗೆ ಸ್ಪಂದನೆ ದೊರೆತಿದ್ದು, ಈ ರೈಲು ಸೇವೆ ಇದೀಗ ಮತ್ತೆ ಪ್ರಾರಂಭವಾಗಿದ್ದು ಖುಷಿಯ ಸಂಗತಿ' ಎಂದು ಸಂಸದರು ಪೋಸ್ಟ್ ಹಾಕಿದ್ದಾರೆ. ಈ ರೈಲು ವಾರದಲ್ಲಿ ಎರಡು ದಿನಗಳ ಕಾಲ ಯಶವಂತಪುರ-ಬೀದರ್ ನಡುವೆ ಸಂಚಾರವನ್ನು ನಡೆಸಲಿದೆ.
ಯಶವಂತಪುರ-ಬೀದರ್ ರೈಲು ಸೇವೆ ಪುನಃ ಆರಂಭವಾಗಿದ್ದು, ಮುಂಗಡ ಟಿಕೆಟ್ ಕಾಯ್ದಿರಿಸಲು ಮತ್ತು ವೇಳಾಪಟ್ಟಿಗಾಗಿ ರೈಲ್ವೆ ಇಲಾಖೆ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬಹುದಾಗಿದೆ.
ರೈಲು ಸೇವೆಯಲ್ಲಿ ಬದಲಾವಣೆ: ಮೈಸೂರು ವಿಭಾಗದ ಹಬನಘಟ್ಟ ಮತ್ತು ಅರಸೀಕೆರೆ ನಿಲ್ದಾಣಗಳ ನಡುವೆ ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತದ ಕಾಲುವೆ ದಾಟುವ ಕಾಮಗಾರಿ ಕೈಗೊಳ್ಳುತ್ತಿರುವುದರಿಂದ, ರೈಲು ಸಂಚಾರದಲ್ಲಿ ಕೆಲ ಬದಲಾವಣೆಗಳನ್ನು ಮಾಡಲಾಗುತ್ತಿದೆ ಎಂದು ನೈಋತ್ಯ ರೈಲ್ವೆ ಹೇಳಿದೆ.
* ರೈಲುಗಳ ಸಂಚಾರ ರದ್ದು. ಏಪ್ರಿಲ್ 8, 10, 12, 14, 29, ಮೇ 3, 10 ಮತ್ತು ಜೂನ್ 10, 2025ರಂದು ರೈಲು ಸಂಖ್ಯೆ 56267 ಅರಸೀಕೆರೆ-ಮೈಸೂರು ಡೈಲಿ ಪ್ಯಾಸೆಂಜರ್ ರೈಲು ರದ್ದಾಗಲಿದೆ.
* ಜೂನ್ 10, 2025 ರಂದು ರೈಲು ಸಂಖ್ಯೆ 16206 ಮೈಸೂರು-ತಾಳಗುಪ್ಪ ಡೈಲಿ ಎಕ್ಸ್ ಪ್ರೆಸ್ ಮತ್ತು ರೈಲು ಸಂಖ್ಯೆ 16205 ತಾಳಗುಪ್ಪ-ಮೈಸೂರು ಡೈಲಿ ಎಕ್ಸ್ ಪ್ರೆಸ್ ರೈಲುಗಳು ರದ್ದಾಗಲಿವೆ.
* ರೈಲುಗಳ ಸಂಚಾರ ಭಾಗಶಃ ರದ್ದು. ಏಪ್ರಿಲ್ 8, 10, 12, 14, 29, ಮೇ 3, 10 ಮತ್ತು ಜೂನ್ 10, 2025 ರಂದು ರೈಲು ಸಂಖ್ಯೆ 16225 ಮೈಸೂರು-ಶಿವಮೊಗ್ಗ ಟೌನ್ ಡೈಲಿ ಎಕ್ಸ್ ಪ್ರೆಸ್ ರೈಲು ಮೈಸೂರು-ಅರಸೀಕೆರೆ ನಿಲ್ದಾಣಗಳ ನಡುವೆ ಭಾಗಶಃ ರದ್ದಾಗಲಿದೆ. ಈ ರೈಲು ಮೈಸೂರಿನ ಬದಲು ಅರಸೀಕೆರೆಯಿಂದ ತನ್ನ ನಿಗದಿತ ಸಮಯಕ್ಕೆ ಹೊರಡಲಿದೆ.
* ರೈಲುಗಳ ನಿಯಂತ್ರಣ/ ತಡವಾಗಿ ಪ್ರಾರಂಭ. ಜೂನ್ 10, 2025ರಂದು ರೈಲು ಸಂಖ್ಯೆ 56266 ಮೈಸೂರು-ಅರಸೀಕೆರೆ ಡೈಲಿ ಪ್ಯಾಸೆಂಜರ್ ರೈಲು ಮಾರ್ಗ ಮಧ್ಯದಲ್ಲಿ60 ನಿಮಿಷ ನಿಯಂತ್ರಿಸಲಾಗುತ್ತದೆ.
* ಜೂನ್ 10, 2025ರಂದು ರೈಲು ಸಂಖ್ಯೆ 56265 ಅರಸೀಕೆರೆ-ಮೈಸೂರು ಡೈಲಿ ಪ್ಯಾಸೆಂಜರ್ ಮತ್ತು ರೈಲು ಸಂಖ್ಯೆ 06269 ಮೈಸೂರು-ಎಸ್‌ಎಂಐಟಿ ಬೆಂಗಳೂರು ಡೈಲಿ ಪ್ಯಾಸೆಂಜರ್ ರೈಲುಗಳು ತಮ್ಮ ಮೂಲ ನಿಲ್ದಾಣದಿಂದ 60 ನಿಮಿಷ ತಡವಾಗಿ ಹೊರಡಲಿವೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
Opinion - Kalyana Karnataka Train: ಕೇಂದ್ರ ಸಚಿವ ವಿ ಸೋಮಣ್ಣ ಅವರೇ ಕನ್ನಡಿಗರ ಸಂಕಷ್ಟ ಸ್ವಲ್ಪ ನೋಡಿ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Railway Food: ರೈಲು ಪ್ರಯಾಣಿಕರ ಬಳಿ ಬರುತ್ತೆ ಆಹಾರ: ರೈಲ್ವೆ ಇಲಾಖೆಗೆ ಕಂಪನಿಗಳ ಸಾಥ್ -
New Railway Line: 6000 ಕಿಮೀ ರೈಲ್ವೆ ಜಾಲ ವಿಸ್ತರಣೆ, 100 ಯೋಜನೆಗಳ ಜಾರಿಗೆ ₹1.53 ಲಕ್ಷ ಕೋಟಿ ಹೂಡಿಕೆ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ












Click it and Unblock the Notifications