By : Oneindia Kannada Video Team
Published : November 01, 2017, 04:48

ಕನ್ನಡ ರಾಜ್ಯೋತ್ಸವ 2017 : ಇತಿಹಾಸ ಹಾಗು ಆಚರಣೆಯ ಹಿನ್ನೆಲೆ

62ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದೊಂದಿಗೆ ಆಚರಿಸಲು ಸಕಲ ಸಿದ್ದತೆಗಳು ನಡೆದಿವೆ. ಕನ್ನಡಿಗರ ಸ್ವಾಭಿಮಾನದ ಸಂಕೇತವಾದ ರಾಜ್ಯೋತ್ಸವ ಮತ್ತು ಕನ್ನಡ ಬಾವುಟದ ಹಿಂದಿನ ಕತೆ ಮಾತ್ರ ರೋಚಕ.
ಕನ್ನಡ ರಾಜ್ಯೋತ್ಸವ ಇತಿಹಾಸ
ಅಲ್ಲಲ್ಲಿ ಚದುರಿದ್ದ ಕನ್ನಡವನ್ನೆಲ್ಲ ಒಂದು ಗೂಡಿಸಿ ಅದಕ್ಕೆ ಕರ್ನಾಟಕ ಎಂದು ನಾಮಕರಣ ಮಾಡಿದ ದಿನ. ಇಂದಿನ ಕರ್ನಾಟಕ ಮೊದಲಿಗೆ ಮೈಸೂರು ಹೆಸರಿನಿಂದ ಗುರುತಿಸಿಕೊಂಡಿತ್ತು.ಸ್ವಾತಂತ್ರದ ನಂತರ, ಒಡೆಯರ್ ಮಹಾರಾಜ ಭಾರತದ ಭಾಗವಾಗಲು ಸಮ್ಮತಿಸಿದರು. 1950ರಲ್ಲಿ , ಮೈಸೂರು ಭಾರತದ ರಾಜ್ಯವಾಯಿತು, ಹಾಗು ಪೂರ್ವ ಮಹಾರಾಜ 1957ರ ವರಗೆ ರಾಜ್ಯಪಾಲರಾದರು. ''ಏಕೀಕರಣ'' ಚಳುವಳಿ 19ನೆಯ ಶತಮಾನಡ ಎರಡನೇ ಭಾಗದಲ್ಲಿ ಪ್ರಾರಂಭವಾಗಿ 1956 ರಾಜ್ಯ ಪುನಸ್ಸಂಘಟನೆ ಕಾಯಿದೆ ಯೊಂದಿಗೆ ಮುಕ್ತಾಯವಾಯಿತು, ಇದರಿಂದ ಕೂರ್ಗ್, ಮದ್ರಾಸ್, ಹೈದರಾಬಾದ್, ಹಾಗು ಬಾಂಬೆ ರಾಜ್ಯದ ಭಾಗಗಳನ್ನು ಮೈಸೂರು ರಾಜ್ಯಕ್ಕೆ ಸೇರ್ಪಡಿಸಲಾಯಿತು. ಮೈಸೂರು ರಾಜ್ಯವನ್ನು ಕರ್ನಾಟಕ ಎಂದು ಪುನರ್ನಾಮಕರಣ ಮಾಡಲಾಯಿತು.ಕರ್ನಾಟಕ ರಾಜ್ಯ ರೂಪುಗೊಂಡಾಗ ಒಟ್ಟು 19 ಜಿಲ್ಲೆಗಳನ್ನು ಒಳಗೊಂಡಿತ್ತು. ಅಂದಿನಿಂದ ನವೆಂಬರ್ 1 ನ್ನು ಕನ್ನಡ ರಾಜ್ಯೋತ್ಸವ / ಕರ್ನಾಟಕ ರಾಜ್ಯೋತ್ಸವವಾಗಿ ಆಚರಿಸಲಾಗುತ್ತದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!