By : Oneindia Kannada Video Team
Published : November 14, 2017, 01:37

Karnataka Assembly Elections 2018 : ತುರುವೇಕೆರೆ ಕ್ಷೇತ್ರದಲ್ಲಿ ಪಕ್ಷಗಳಿಗೆ ಬಂಡಾಯದ ಬಿಸಿ

ತುರುವೇಕೆರೆ ಕ್ಷೇತ್ರದಲ್ಲಿ ಪಕ್ಷಗಳಿಗೆ ಬಂಡಾಯದ ಬಿಸಿ! ಬಿಜೆಪಿ ಪರಿವರ್ತನಾ ಯಾತ್ರೆಗೆ ತೆಂಗಿನಕಾಯಿ ಎಸೆಯುವ ಮೂಲಕ ತುರುವೇಕೆರೆ ಕ್ಷೇತ್ರ ರಾಜಕೀಯವಾಗಿ ಮತ್ತೆ ಚರ್ಚೆಗೆ ಬಂದಿದೆ. ಜೆಡಿಎಸ್ ಭದ್ರಕೋಟೆಯಾಗಿರುವ ಕ್ಷೇತ್ರದಲ್ಲಿ ಎಲ್ಲಾ ಪಕ್ಷಗಳಿಗೂ ಬಂಡಾಯದ ಬಿಸಿ ತಟ್ಟುತ್ತಿದೆ. ಸದ್ಯ, ತುರುವೇಕೆರೆ ಕ್ಷೇತ್ರದ ಶಾಸಕರು ಜೆಡಿಎಸ್‌ನ ಎಂ.ಟಿ.ಕೃಷ್ಣಪ್ಪ. ಮೂರು ಬಾರಿ ಶಾಸಕರಾಗಿರುವ ಇವರಿಗೆ ಈ ಬಾರಿ ಬಂಡಾಯದ ಬಿಸಿ ತಟ್ಟಿದೆ. ನಾರಾಯಣ ಗೌಡ ಅವರು ಟಿಕೆಟ್ ಪಡೆಯುವ ಉತ್ಸಾಹದಲ್ಲಿ ಪ್ರಚಾರ ಆರಂಭಿಸಿದ್ದಾರೆ.ನೆಲಮಂಗಲದಲ್ಲಿ ರಾಜಕೀಯ ನೆಲೆ ಕಂಡುಕೊಂಡಿದ್ದ ನಾರಾಯಣ ಗೌಡ ಅವರು ತುರುವೇಕೆರೆಗೆ ಬಂದಿದ್ದು ಹೊಸ ಲೆಕ್ಕಾಚಾರಕ್ಕೆ ಕಾರಣವಾಗಿದೆ. ಶಾಸಕ ಕೃಷ್ಣಪ್ಪ ವಿರುದ್ಧ ಪಕ್ಷದ ನಾಯಕರೇ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.ಬಿಜೆಪಿಯಲ್ಲಿ ಮಸಾಲೆ ಜಯರಾಮ್ ಅವರಿಗೆ ಟಿಕೆಟ್ ಕೊಡುವುದಕ್ಕೆ ವಿರೋಧವಿದೆ. ಪರಿವರ್ತನಾ ಯಾತ್ರೆಯ ಸಂದರ್ಭದಲ್ಲಿ ಬಿಜೆಪಿಯ ರಥಕ್ಕೆ ತೆಂಗಿನಕಾಯಿ ತೂರಿ ಆಕ್ರೋಶ ಹೊರಹಾಕಲಾಗಿದೆ. ಮೂಲ ಮತ್ತು ವಲಸಿಗರು ಎಂದು ಪಕ್ಷ ಕವಲು ದಾರಿಯಲ್ಲಿ ಸಾಗುತ್ತಿದೆ...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!