By : Oneindia Kannada Video Team
Published : December 07, 2017, 12:09

ಮಂಗಳೂರಿನಲ್ಲಿ ಖಾಸಗಿ ಸಿಟಿ ಬಸ್ ಕಂಟೈನರ್ ಟ್ರಕ್ ಮುಖಾಮುಖಿ ಡಿಕ್ಕಿ

ಖಾಸಗಿ ಸಿಟಿ ಬಸ್- ಕಂಟೈನರ್ ಟ್ರಕ್ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಮಹಿಳೆ ಯೊಬ್ಬರು ಮೃತಪಟ್ಟಿದ್ದು , 17 ಮಂದಿ ಗಾಯಗೊಂಡ ಘಟನೆ ನಡೆದಿದೆ. ಮಂಗಳೂರಿನ ನಂತೂರು ಜಂಕ್ಷನ್ ಬಳಿ ಈ ದುರ್ಘಟನೆ ನಡೆದಿದ್ದು ಘಟನೆಯಲ್ಲಿ ಮೃತಪಟ್ಟವರನ್ನು ಗುರುಪುರ‌ ಕೈಕಂಬದ ಕವಿತಾ (50) ಎಂದು ಗುರುತಿಸಲಾಗಿದೆ. ವೆನ್ ಲಾಕ್ ಸರಕಾರಿ ಆಸ್ಪತ್ರೆ ಯಲ್ಲಿ ಕೆಲಸ ಮಾಡುತ್ತಿದ್ದ ಕವಿತಾ , ಬಸ್ ನ ಮುಂಭಾಗ ಕುಳಿತಿದ್ದರು ಎನ್ನಲಾಗಿದೆ. ಈ ದುರ್ಘಟನೆ ಸಿ ಸಿ ಟಿ ವಿ ಕ್ಯಾಮೆರಾ ದಲ್ಲಿ ಸೆರೆಯಾಗಿದ್ದು . ಘಟನೆಯಲ್ಲಿ ಗಂಭೀರ ಗಾಯಗೊಂಡ ಕವಿತಾ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಯಿತು. ಆದರೆ ಚಿಕಿತ್ಸೆ ಫಲಕಾರಿ ಯಾಗದೆ ಅವರು ಕೊನೆಯುಸಿರೆಳೆದರು ಎಂದು ಹೇಳಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಕದ್ರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!