By : Oneindia Kannada Video Team
Published : March 02, 2018, 03:18

ಆಮ್ ಆದ್ಮಿ ಪಕ್ಷದ ನಾಯಕ ಪೃಥ್ವಿ ರೆಡ್ಡಿ ಸಂದರ್ಶನ

'ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ವಿರುದ್ಧ ಚುನಾವಣೆಗೆ ಸ್ಪರ್ಧಿಸುತ್ತಿರುವುದು ಸವಾಲು ಎನಿಸುವುದಿಲ್ಲ. ಅವರದ್ದು ಹಣ ಬಲ, ನಮ್ಮದು ಜನ ಬಲ' ಎಂದು ಆಮ್ ಆದ್ಮಿ ಪಕ್ಷದ ನಾಯಕ ಪೃಥ್ವಿ ರೆಡ್ಡಿ ಹೇಳಿದರು. ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಕಾರ್ಯಕಾರಣಿ ಸದಸ್ಯ, ಪಕ್ಷದ ಕರ್ನಾಟಕ ಘಟಕದ ಸಂಚಾಲಕ ಪೃಥ್ವಿ ರೆಡ್ಡಿ ಅವರು ಬೆಂಗಳೂರಿನ ಸರ್ವಜ್ಞ ನಗರ ಕ್ಷೇತ್ರದಿಂದ 2018ರ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ಸರ್ವಜ್ಞ ನಗರ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಅವರು ಕ್ಷೇತ್ರ. ಆಮ್ ಆದ್ಮಿ ಪಕ್ಷದ ಚುನಾವಣಾ ಸಿದ್ಧತೆ, ಪ್ರಣಾಳಿಕೆ, ಅಭ್ಯರ್ಥಿಗಳ ಆಯ್ಕೆ, ಕರ್ನಾಟಕ ಸರ್ಕಾರದ ಆಡಳಿತ ಮುಂತಾದ ವಿಚಾರಗಳ ಕುರಿತು ಪೃಥ್ವಿ ರೆಡ್ಡಿ ಒನ್ ಇಂಡಿಯಾ ಕನ್ನಡದ ಜೊತೆ ಮಾತನಾಡಿದರು.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!