By : Oneindia Kannada Video Team
Published : January 23, 2018, 12:10

ಕರ್ನಾಟಕ ಬಂದ್ ಗೆಲ್ಲುತ್ತಾ? ಅಮಿತ್ ಶಾ ಸಭೆ ನಿಲ್ಲುತ್ತಾ?

'ನವ ಕರ್ನಾಟಕ ನಿರ್ಮಾಣ'ಕ್ಕಾಗಿ ಪರಿವರ್ತನಾ ಯಾತ್ರೆಯು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆಯುತ್ತಿದ್ದು, ಜನವರಿ 25ರಂದು ಮೈಸೂರಿನಲ್ಲಿ ಬೃಹತ್ ಸಮಾವೇಶ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರಿನಲ್ಲಿ ಭಾರೀ ಶಕ್ತಿ ಪ್ರದರ್ಶನ ನೀಡಲು ಬಿಜೆಪಿ ಭಾರೀ ಸಿದ್ಧತೆ ನಡೆಸಿದೆ.

ಮಹಾರಾಜ ಕಾಲೇಜು ಮೈದಾನದಲ್ಲಿ ಮೈಸೂರು ತಾಲೂಕು ಚಾಮುಂಡೇಶ್ವರಿ ಕ್ಷೇತ್ರ, ನಗರದ ಕೃಷ್ಣರಾಜ, ಚಾಮರಾಜ ಮತ್ತು ನರಸಿಂಹರಾಜ ವಿಧಾನಸಭಾ ಕ್ಷೇತಗಳ ವ್ಯಾಪ್ತಿಯ ಕಾರ್ಯಕರ್ತರ ಮತ್ತು ಬಿಜೆಪಿ ಅಭಿಮಾನಿಗಳ ಸಮಾವೇಶ ನಡೆಯಲಿದ್ದು, 50 ಸಾವಿರ ಮಂದಿ ಭಾಗವಹಿಸಲಿದ್ದಾರೆ ಎಂದು ಅಂದಾಜಿಸಲಾಗಿದೆ.

ಮಹಾರಾಜ ಕಾಲೇಜು ಮೈದಾನದಲ್ಲಿ ವೇದಿಕೆ ನಿರ್ಮಾಣಕ್ಕೆ ಭೂಮಿ ಪೂಜೆ ನಡೆಸಿ, ನಂತರ ಇದೇ ಸ್ಥಳದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಗರಾಧ್ಯಕ್ಷ ಡಾ.ಬಿ.ಎಚ್. ಮಂಜುನಾಥ್, ಜನವರಿ 25ರಂದು ಮಧ್ಯಾಹ್ನ 3ಕ್ಕೆ ಬೃಹತ್ ಪ್ರಮಾಣದಲ್ಲಿ ಸಮಾವೇಶ ನಡೆಯಲಿದ್ದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಭಾಗವಹಿಸುವರು ಎಂದರು.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!