By : Oneindia Kannada Video Team
Published : November 02, 2017, 06:33

ಅಮಿತ್ ಶಾ ಸಮ್ಮುಖದಲ್ಲಿ ಅಧಿಕೃತವಾಗಿ ಬಿಜೆಪಿ ಸೇರಿದ ಸಿ ಪಿ ಯೋಗೇಶ್ವರ್

ಕರ್ನಾಟಕ ಬಿಜೆಪಿ 2018ರ ವಿಧಾನಸಭೆ ಚುನಾವಣೆ ಪ್ರಚಾರಕ್ಕೆ ಅಧಿಕೃತವಾಗಿ ಗುರುವಾರ ಚಾಲನೆ ನೀಡಿದೆ. ನವ ಕರ್ನಾಟಕ ನಿರ್ಮಾಣ ಪರಿವರ್ತನಾ ಯಾತ್ರೆಯಲ್ಲಿ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿದರು..ಕರ್ನಾಟಕ ಬಿಜೆಪಿ 'ನವ ಕರ್ನಾಟಕ ನಿರ್ಮಾಣ ಪರಿವರ್ತನಾ ಯಾತ್ರೆ'ಯನ್ನು ಬೆಂಗಳೂರು ಹೊರವಲಯದ ಅಂತರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದ ಆವರಣದಲ್ಲಿ ಆಯೋಜಿಸಲಾಗಿದೆ. ಗುರುವಾರ ಮಧ್ಯಾಹ್ನ ಈ ಯಾತ್ರೆಗೆ ಅಮಿತ್ ಶಾ ಚಾಲನೆ ನೀಡಿದರು...ಯಡಿಯೂರಪ್ಪ ನವ ಕರ್ನಾಟಕ ನಿರ್ಮಾಣ ಪರಿವರ್ತನಾ ಯಾತ್ರೆ ಆರಂಭಿಸಿದ್ದಾರೆ. ಜೋರಾಗಿ ಭಾರತ್ ಮಾತಾಕೀ ಜೈ ಎನ್ನಿ ಎಂದು ಅಮಿತ್ ಶಾ ಭಾಷಣ ಆರಂಭಿಸಿದರು. * ಈ ರಾಜ್ಯದ ಮುಂದಿನ ಮುಖ್ಯಮಂತ್ರಿ ಯಡಿಯೂರಪ್ಪ ಯಾತ್ರೆ ಮೂಲಕ ರಾಜ್ಯದ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಆಗಮಿಸಲಿದ್ದಾರೆ. ಸಿದ್ದರಾಮಯ್ಯ ಸರ್ಕಾರ ಕಿತ್ತೊಗೆಯಲು ಈ ಯಾತ್ರೆ ಆರಂಭಿಸಲಾಗಿದೆ ಎಂದು ಅಮಿತ್ ಶಾ ವಾಗ್ದಾಳಿ ನಡೆಸಿದ್ರು..

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!