By: Oneindia Kannada Video Team
Published : December 21, 2017, 05:27

ಕರ್ನಾಟಕ ಚುನಾವಣೆ 2018 : ಆಮ್ ಆದ್ಮಿ ಪಕ್ಷ ಸ್ಪರ್ಧೆಗೆ ಚಿಂತನೆ

Subscribe to Oneindia Kannada

'2018ರ ಕರ್ನಾಟಕ ವಿಧಾನಸಭೆ ಚುನಾವಣೆಗೆ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ. ಈ ಕುರಿತು ಶೀಘ್ರದಲ್ಲಿಯೇ ಅಧಿಕೃತ ಘೋಷಣೆ ಮಾಡಲಾಗುತ್ತದೆ' ಎಂದು ಸಂಜಯ್ ಸಿಂಗ್ ಹೇಳಿದರು. ಬೆಂಗಳೂರಿನಲ್ಲಿ ಗುರುವಾರ ಪಕ್ಷದ ರಾಷ್ಟ್ರೀಯ ಕಾರ್ಯಕಾರಣಿ ಸದಸ್ಯರು ಹಾಗೂ ರಾಜಕೀಯ ಸಮಿತಿ ಸದಸ್ಯರಾದ ಸಂಜಯ್ ಸಿಂಗ್ ಪತ್ರಿಕಾಗೋಷ್ಠಿ ನಡೆಸಿದರು. 'ಆಮ್ ಆದ್ಮಿ ಪಕ್ಷ ದೇಶದಲ್ಲಿ ಹೆಚ್ಚಿನ ಜನಬೆಂಬಲ ಸಿಗುತ್ತಿದೆ' ಎಂದರು.'ಕಳೆದ ಐದು ವರ್ಷಗಳಲ್ಲಿ ದೆಹಲಿಯಲ್ಲಿ ನಾವು ಎರಡು ಬಾರಿ ಸರ್ಕಾರ ಮಾಡಿದ್ದೇವೆ. ವಿಧಾನಸಭೆ ಚುನಾವಣೆಯಲ್ಲಿ ದಾಖಲೆಯ ಸ್ಥಾನಗಳನ್ನು ಪಡೆದು ಜಯಗಳಿಸಿದ್ದೇವೆ' ಎಂದು ಹೇಳಿದರು.'ಗೋವಾದಲ್ಲಿ ಚುನಾವಣೆ ಎದುರಿಸಿದೆವು. ಪಂಜಾಬ್‌ನಲ್ಲಿ ಮೊದಲ ಬಾರಿಗೆ ಚುನಾವಣೆ ಎದುರಿಸಿದೆವು. ಅಲ್ಲಿ ಈಗ ಪ್ರಮುಖ ಪ್ರತಿಪಕ್ಷವಾಗಿದ್ದೇವೆ' ಎಂದು ತಿಳಿಸಿದರು.ಕರ್ನಾಟಕದ ವಿಧಾನಸಭೆ ಚುನಾವಣೆಯಲ್ಲಿ ನಾವು ಸ್ಪರ್ಧಿಸಲಿದ್ದೇವೆ. ರಾಷ್ಟ್ರೀಯ ಕಾರ್ಯದರ್ಶಿಗಳು ಮತ್ತು ರಾಜ್ಯದ ಚುನಾವಣಾ ಉಸ್ತುವಾರಿಗಳಾದ ಪಂಕಜ್ ಗುಪ್ತಾ ಅವರು ವರದಿ ತಯಾರಿಸಿ ರಾಜಕೀಯ ವ್ಯವಹಾರಗಳ ಸಮಿತಿಗೆ ನೀಡಲಿದ್ದಾರೆ. ಸಮಿತಿ ಅಂತಿಮ ತೀರ್ಮಾನ ಕೈಗೊಳ್ಳಲಿದೆ' ಎಂದರು.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!