By : Oneindia Kannada Video Team
Published : December 05, 2017, 04:44

ಯಡಿಯೂರಪ್ಪನವರು ಮುಂಬರುವ ಚುನಾವಣೆಗೆ ಭಾಲ್ಕಿಯಿಂದ ಬಿಜೆಪಿ ಅಭ್ಯರ್ಥಿ ಘೋಷಣೆ

'ಭಾಲ್ಕಿ ವಿಧಾನಸಭಾ ಕ್ಷೇತ್ರಕ್ಕೆ 2018ರ ವಿಧಾನಸಭೆ ಚುನಾವಣೆಗೆ ಪ್ರಕಾಶ ಖಂಡ್ರೆ ಅಭ್ಯರ್ಥಿ' ಎಂದು ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಕರ್ನಾಟಕ ಬಿಜೆಪಿಯ 'ನವ ಕರ್ನಾಟಕ ಪರಿವರ್ತನಾ ಯಾತ್ರೆ'ಯ 24ನೇ ದಿನ ಬೀದರ್ ಜಿಲ್ಲೆಯ ಭಾಲ್ಕಿಯಲ್ಲಿ ಬೃಹತ್ ಸಮಾವೇಶ ನಡೆಯಿತು. ಸಮಾವೇಶ ಉದ್ದೇಶಿಸಿ ಮಾತನಾಡಿದ ಯಡಿಯೂರಪ್ಪ ಅಭ್ಯರ್ಥಿಯ ಹೆಸರು ಘೋಷಣೆ ಮಾಡಿದರು.ಯಡಿಯೂರಪ್ಪ ಪ್ರಕಾಶ ಖಂಡ್ರೆ ಹೆಸರು ಘೋಷಣೆ ಮಾಡುತ್ತಿದ್ದಂತೆಯೇ ಡಿ.ಕೆ.ಸಿದ್ರಾಮ ಕಣ್ಣೀರು ಹಾಕಿದರು. ಸಿದ್ರಾಮ ಅವರು ಸಹ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು. 2013ರ ಚುನಾವಣೆಯಲ್ಲಿ ಕ್ಷೇತ್ರದಿಂದ ಕೆಜೆಪಿ ಅಭ್ಯರ್ಥಿಯಾಗಿ ಸಿದ್ರಾಮ ಅವರು ಸ್ಪರ್ಧಿಸಿದ್ದರು.ಭಾಲ್ಕಿ ಕ್ಷೇತ್ರ ಸದ್ಯ ಕಾಂಗ್ರೆಸ್ ವಶದಲ್ಲಿದೆ. ಸಿದ್ದರಾಮಯ್ಯ ಸಂಪುಟದಲ್ಲಿ ಪೌರಾಡಳಿತ ಮತ್ತು ಸಾರ್ವಜನಿಕ ಉದ್ದಿಮೆಗಳ ಖಾತೆ ಸಚಿವರಾಗಿರುವ ಈಶ್ವರ ಖಂಡ್ರೆ ಅವರು ಕ್ಷೇತ್ರದ ಶಾಸಕರು. 2018ರ ಚುನಾವಣೆಯಲ್ಲಿ ಕ್ಷೇತ್ರದಲ್ಲಿ ಗೆಲುವು ಸಾಧಿಸಲು ಬಿಜೆಪಿ ತಂತ್ರ ರೂಪಿಸಿದೆ...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!