By: Oneindia Kannada Video Team
Published : December 06, 2017, 04:14

ಯಡಿಯೂರಪ್ಪನವರು ಮುಂಬರುವ ಚುನಾವಣೆಗೆ ಸಾಗರದಿಂದ ಬಿಜೆಪಿ ಅಭ್ಯರ್ಥಿ ಘೋಷಣೆ

Subscribe to Oneindia Kannada

ಶಿವಮೊಗ್ಗ ಜಿಲ್ಲೆಯ ರಾಜಕಾರಣದಲ್ಲಿ ಹೊಸ ಸುದ್ದಿಯೊಂದು ಹಬ್ಬಿದ್ದು ತೀವ್ರ ಚರ್ಚೆಗೆ ಗ್ರಾಸವಾಗಿದೆ. ಸಾಗರ ಕ್ಷೇತ್ರದಲ್ಲಿ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಅವರಿಗೆ ಬಿಜೆಪಿ ಟಿಕೆಟ್ ಕೈ ತಪ್ಪುವ ಸಾಧ್ಯತೆ ಇದೆ. ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ತವರು ಜಿಲ್ಲೆ ಶಿವಮೊಗ್ಗ. 2018ರ ವಿಧಾನಸಭೆ ಚುನಾವಣೆಗೆ ಅವರು ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ. ತವರು ಜಿಲ್ಲೆಯ ಎಲ್ಲಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲು ಅವರು ತಂತ್ರ ರೂಪಿಸಿದ್ದಾರೆ. ಅದಕ್ಕಾಗಿ ಸಾಗರದ ಅಭ್ಯರ್ಥಿ ಬದಲಾವಣೆ ಮಾಡಲಿದ್ದಾರೆ.ಸಾಗರ ಕ್ಷೇತ್ರದಲ್ಲಿ ಬೇಳೂರು ಗೋಪಾಲಕೃಷ್ಣ ಅವರ ಬದಲಿಗೆ ಮಾಜಿ ಸಚಿವ ಹರತಾಳು ಹಾಲಪ್ಪ ಅವರಿಗೆ ಟಿಕೆಟ್ ನೀಡಲಾಗುತ್ತದೆ ಎಂಬ ಸುದ್ದಿ ಹಬ್ಬಿದೆ. ಸಾಗರದಲ್ಲಿ ನಡೆಯುವ ಪರಿವರ್ತನಾ ಯಾತ್ರೆಯ ಉಸ್ತುವಾರಿಯನ್ನು ಹಾಲಪ್ಪ ಅವರಿಗೆ ವಹಿಸುವಂತೆ ಶಿವಮೊಗ್ಗ ಜಿಲ್ಲಾ ಬಿಜೆಪಿ ಅಧ್ಯಕ್ಷ ರುದ್ರೇಗೌಡ ಅವರಿಗೆ ಯಡಿಯೂರಪ್ಪ ಸೂಚಿಸಿದ್ದಾರೆ.

Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!