By : Oneindia Kannada Video Team
Published : January 11, 2018, 05:37

ಬಿ ಎಸ್ ಯಡಿಯೂರಪ್ಪನವರ ಪರಿವರ್ತನಾ ಯಾತ್ರೆ ತುಮಕೂರಿನ ಶಿರಾದಲ್ಲಿ

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆಯುತ್ತಿರುವ ಪರಿವರ್ತನಾ ಯಾತ್ರೆ ತುಮಕೂರಿನ ಶಿರಾದಲ್ಲಿ ನಡೆದಿದೆ.ಮುಂದಿನ ವಿಧಾನಸಭೆಗೆ ಭರ್ಜರಿ ತಯಾರಿ ನಡೆಸಿರುವ ಬಿಜೆಪಿ ರಾಜ್ಯದ್ಯಾಂತ ಪರಿವರ್ತನಾ ಯಾತ್ರೆಯಲ್ಲಿ ಹಮ್ಮಿಕೊಂಡಿದೆ. ಈ ಯಾತ್ರೆ ತುಮಕೂರಿನ ಶಿರಾಗೆ ಹೋಗಿತ್ತು. ತುಮಕೂರು ನಗರ ವಿಧಾನಸಭಾ ಕ್ಷೇತ್ರದಿಂದ ಸತತವಾಗಿ ನಾಲ್ಕು ಬಾರಿ ಜಯಗಳಿಸಿದ್ದ ಮಾಜಿ ಸಚಿವ ಸೊಗಡು ಶಿವಣ್ಣ ಅವರಿಗೆ 2018ರ ವಿಧಾನಸಭೆ ಟಿಕೆಟ್ ಕೈತಪ್ಪಲಿದೆ. ಶಿವಣ್ಣ ಬದಲಿಗೆ ತುಮಕೂರು ಬಿಜೆಪಿಯ ಜಿಲ್ಲಾಧ್ಯಕ್ಷ ಜ್ಯೋತಿ ಗಣೇಶ್ ಹೆಸರನ್ನು ಬಿಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಇದರಿಂದ ಶಿವಣ್ಣಗೆ ಭಾರೀ ಹಿನ್ನಡೆಯಾಗಿದೆ. ಬೃಹತ್ ಸಮಾವೇಶ ಉದ್ದೇಶಿಸಿ ಮಾತನಾಡಿದ ಬಿ.ಎಸ್.ಯಡಿಯೂರಪ್ಪ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಇನ್ನು ಶಿರಾದಲ್ಲಿ ಯಾದಿತುರಪ್ಪನವರು ಭಾಷಣ ಮಾಡಿದ್ದು ಏನೆಲ್ಲಾ ಹೇಳಿದ್ದಾರೆ ಎಂದು ತಿಳಿಯಲು ಈ ವಿಡಿಯೋ ನೋಡಿ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!