By : Oneindia Kannada Video Team
Published : December 11, 2017, 04:42

ಉತ್ತರ ಕನ್ನಡ ಜಿಲ್ಲೆಯ ಪ್ರತಿಭಟನೆ ಬಗ್ಗೆ ಮಾತನಾಡಿದ ಬಿ ಎಸ್ ಯಡಿಯೂರಪ್ಪ

ಹಿಂದೂ ಕಾರ್ಯಕರ್ತ ಪರೇಶ್ ಮೇಸ್ತ ಅವರ ಹತ್ಯೆಗೈದ ಆರೋಪಿಗಳನ್ನು ಬಂಧಿಸಬೇಕೆಂದು ಒತ್ತಾಯಿಸಿ ಬಿಜೆಪಿ ಹಾಗೂ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ರಾಷ್ಟ್ರೀಯ ಹೆದ್ದಾರಿ 66 ತಡೆದು ಬೃಹತ್ ಪ್ರತಿಭಟನೆ ಮಾಡುತ್ತಿದ್ದಾರೆ. ಳೆದ ಬುಧವಾರ ಕಾಣೆಯಾಗಿದ್ದ ಹಿಂದೂ ಕಾರ್ಯಕರ್ತ ಪರೇಶ್ ಮೇಸ್ತ ಹೊನ್ನಾವರ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದ. ಪರೇಶ್ ಮೇಸ್ತ ಕೊಲೆ ವಿಷಯ ಹರಡುತ್ತಿದ್ದಂತೆ ಕಾರವಾರದಲ್ಲಿ ಉದ್ವಿಗ್ನ ಸ್ಥಿತಿ ಉಂಟಾಗಿತ್ತು. ಕುಮಟಾದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಪೊಲೀಸರ ಲಾಠಿ ಚಾಜ್೯ ಪ್ರಕರಣ. ಘಟನೆಗೆ ಸಂಬಂಧಿಸಿದಂತೆ ಕಲಬುರಗಿ ಜಿಲ್ಲೆ ಜೇವರ್ಗಿ ಪಟ್ಟಣದಲ್ಲಿ ಬಿಜೆಪಿ ರಾಜ್ಯಾದ್ಯಕ್ಷ ಯಡಿಯೂರಪ್ಪ ಪ್ರತಿಕ್ರಿಯೆ. ಸರ್ಕಾರವೇ ಬಿಜೆಪಿಯವರ ಮೇಲೆ ಗುಂಡಾಗಿರಿ‌ ಮಾಡುತ್ತಿದೆ, ಹೋರಾಟಗಳನ್ನ ಹತ್ತಿಕ್ಕೂವ ಕೆಲಸ ಮಾಡುತ್ತಿದೆ. ಶಾಂತಿಯೂತ ಪ್ರತಿಭಟನೆ ಮಾಡುವವರ ಮೇಲೆ ಪೊಲೀಸರು ಲಾಠಿ ಚಾಜ್೯ ಮಾಡುವಂತಹದ್ದು ಏನಿತ್ತು . ಲಾಠಿ ಚಾಜ್೯ ಖಂಡಿಸಿ ನಾಳೆ ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಕುಮಟಾದಲ್ಲಿ ಪ್ರತಿಭಟನೆ ಮಾಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪನವರು ತಿಳಿಸಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!