By : Oneindia Kannada Video Team
Published : November 09, 2017, 02:54

ಬಿಜೆಪಿ ಪರಿವರ್ತನಾ ಯಾತ್ರೆ ಬಿ ಸ್ ಯಡಿಯೂರಪ್ಪನವರ ಜೊತೆ ಈ ನಾಯಕರು ಇರಲಿಲ್ಲ

ಬಿಜೆಪಿ ಪರಿವರ್ತನಾ ಯಾತ್ರೆ, ಬಿಎಸ್‌ವೈ ಆಪ್ತರಾದ ನಾಯಕರು ಎಲ್ಲಿ? ಕರ್ನಾಟಕ ಬಿಜೆಪಿಯ ನವ ಕರ್ನಾಟಕ ನಿರ್ಮಾಣ ಪರಿವರ್ತನಾ ಯಾತ್ರೆ 6 ದಿನಗಳನ್ನು ಪೂರೈಸಿದೆ. ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆಯುತ್ತಿರುವ ಯಾತ್ರೆಗೆ ಜನ ಬೆಂಬಲವೂ ಸಿಗುತ್ತಿದೆ. ಆದರೆ, ಯಾತ್ರೆಯಲ್ಲಿ ಯಡಿಯೂರಪ್ಪ ಆಪ್ತರು ಹೆಚ್ಚಾಗಿ ಕಾಣಿಸುತ್ತಿಲ್ಲ. 2018ರ ವಿಧಾನಸಭೆ ಚುನಾವಣೆಗೆ ಬಿಜೆಪಿ ನಾಯಕರು ಪ್ರಚಾರ ಆರಂಭಿಸಿದ್ದಾರೆ. ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಯಡಿಯೂರಪ್ಪ ನೇತೃತ್ವದಲ್ಲಿ 75 ದಿನಗಳ ರಾಜ್ಯ ಪ್ರವಾಸ ನಡೆಸಲಾಗುತ್ತಿದೆ. ಬುಧವಾರ ಮಡಿಕೇರಿಯಲ್ಲಿ ಯಾತ್ರೆ ಅಂತ್ಯಗೊಂಡಿದ್ದು, ಇಂದು ನಾಯಕರು ವಿಶ್ರಾಂತಿ ಪಡೆಯಲಿದ್ದಾರೆ.ನವೆಂಬರ್ 2ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಬೆಂಗಳೂರಿನಲ್ಲಿ ಯಾತ್ರೆಗೆ ಚಾಲನೆ ನೀಡಿದ್ದರು. ತುಮಕೂರು, ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳ ವಿಧಾನಸಭಾ ಕ್ಷೇತ್ರಗಳಲ್ಲಿ ಯಾತ್ರೆ ಪೂರ್ಣಗೊಂಡಿದೆ. ನ.10ರಿಂದ ಮಂಗಳೂರಿನಿಂದ ಯಾತ್ರೆ ಪುನಃ ಆರಂಭವಾಗಲಿದೆ.ಬಿ.ಎಸ್.ಯಡಿಯೂರಪ್ಪ ಜೊತೆಗೆ ಜಗದೀಶ್ ಶೆಟ್ಟರ್, ಕೆ.ಎಸ್.ಈಶ್ವರಪ್ಪ, ಶೋಭಾ ಕರಂದ್ಲಾಜೆ, ಸಿ.ಟಿ.ರವಿ, ಶ್ರೀರಾಮುಲು ಸೇರಿದಂತೆ ಹಲವು ನಾಯಕರು ಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!