By : Oneindia Kannada Video Team
Published : November 15, 2017, 11:34

ಪರಿವರ್ತನಾ ಯಾತ್ರೆಯಲ್ಲಿ ಅಭ್ಯರ್ಥಿಗಳನ್ನು ಘೋಷಿಸುತ್ತಿಲ್ಲ BSY

ಮಂಗಳವಾರ ಮುರುಡೇಶ್ವರದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, 'ಸಿದ್ದರಾಮಯ್ಯರಿಂದ ಹಲವಾರು ಹಗರಣಗಳು ನಡೆದಿದೆ. ಗಣಪತಿ ಪ್ರಕರಣದಲ್ಲಿ ಜಾರ್ಜ್ ಆರೋಪಿಯಾಗಿದ್ದರೂ ಕೂಡ ಮುಖ್ಯಮಂತ್ರಿಗಳು ಅವರಿಂದ ರಾಜೀನಾಮೆ ಪಡೆಯುತ್ತಿಲ್ಲ' ಎಂದು ಆರೋಪಿಸಿದರು. 'ಪರಿವರ್ತನಾ ಯಾತ್ರೆಯಲ್ಲಿ ನಾವು ಯಾವುದೇ ಅಭ್ಯರ್ಥಿಗಳನ್ನು ಘೋಷಣೆ ಮಾಡುತ್ತಿಲ್ಲ. ಈಗಾಗಲೇ ಭಟ್ಕಳದಲ್ಲಿ ಪರಿವರ್ತನಾ ಯಾತ್ರೆ ಯಶಸ್ವಿಯಾಗಿದೆ. ಜನರಿಂದ ಒಳ್ಳೆಯ ಅಭಿಪ್ರಾಗಳು ಬಂದಿದ್ದು, ಬೆಂಬಲ ಕೂಡ ಸಿಕ್ಕಿದೆ' ಎಂದರು. 'ಸುರ್ವರ್ಣ ವಿಧಾನಸೌಧ ವರ್ಷದಲ್ಲಿ 365 ದಿನವೂ ಚಟುವಟಿಕೆಯಿಂದ ಇರುವಂತೆ ಮಾಡಬೇಕು. ಹೀಗಾದಾಗ ಮಾತ್ರ ಅಧಿವೇಶನದಲ್ಲಿ ಶಾಸಕರು, ಸಚಿವರು ಗೈರಾಗುವುದು ಕಡಿಮೆಯಾಗುತ್ತದೆ' ಎಂದು ಹೇಳಿದರು. ಕುಮಟಾದಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಯಡಿಯೂರಪ್ಪ, 'ನರೇಂದ್ರ ಮೋದಿಯವರ ಸರ್ಕಾರ ಕೋಟ್ಯಾಂತರ ರೂಪಾಯಿ ಅನುದಾನವನ್ನು ನೀಡಿದ್ದರೂ ಅದನ್ನು ಸಮರ್ಪಕವಾಗಿ ಅಭಿವೃದ್ಧಿ ಕಾರ್ಯಗಳಿಗೆ ಬಳಸದೆ ಕಾಂಗ್ರೆಸ್ ಸರ್ಕಾರ ಜನರ ಹಣವನ್ನು ಲೂಟಿ ಮಾಡುತ್ತಿದೆ' ಎಂದು ಆರೋಪಿಸಿದರು.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!