By : Oneindia Kannada Video Team
Published : November 03, 2017, 11:52

ಇಂದಿನಿಂದ ಹಂಪಿ ಉತ್ಸವ , ಈ ಬಾರಿ ವಿಶೇಷತೆ ಏನು ?

ಗಡಿನಾಡು ಬಳ್ಳಾರಿ 2017ನೇ ಸಾಲಿನ ಹಂಪಿ ಉತ್ಸವಕ್ಕೆ ಸಜ್ಜಾಗಿದೆ. ನವೆಂಬರ್ 3ರಂದು ಮೂರು ದಿನಗಳ ಉತ್ಸವಕ್ಕೆ ಚಾಲನೆ ಸಿಗಲಿದ್ದು, ಸುಮಾರು 5 ಲಕ್ಷ ಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ. ನವೆಂಬರ್ 3ರಿಂದ ಮೂರು ದಿನಗಳ ಕಾಲ ಹಂಪಿ ಉತ್ಸವ ನಡೆಯಲಿದೆ. ಶುಕ್ರವಾರ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಂಪಿ ಉತ್ಸವವನ್ನು ಉದ್ಘಾಟಿಸಲಿದ್ದಾರೆ. ಉತ್ಸವಕ್ಕಾಗಿ 11 ವೇದಿಕೆಗಳನ್ನು ನಿರ್ಮಾಣ ಮಾಡಲಾಗಿದ್ದು, 405 ಕಾರ್ಯಕ್ರಮಗಳು ನಡೆಯಲಿವೆ..ಸ್ಥಳೀಯ ಕಲಾವಿದರು, ಕಲಾ ತಂಡಗಳಿಗೆ ಈ ಬಾರಿ ಹೆಚ್ಚಿನ ಆದ್ಯತೆ ನೀಡಲಾಗಿದೆ. ಬಾಲಿವುಡ್, ಹಾಲಿವುಡ್ ಗಾಯಕರು ಉತ್ಸವದಲ್ಲಿ ಸಂಗೀತ ಕಾರ್ಯಕ್ರಮಗಳನ್ನು ನಡೆಸಿಕೊಡಲಿದ್ದಾರೆ. 9 ವೇದಿಕೆಗಳಲ್ಲಿ ಸಾಂಸ್ಕೃತಿ ಕಾರ್ಯಕ್ರಮ, ಒಂದು ವೇದಿಕೆಯಲ್ಲಿ ಧ್ವನಿ ಮತ್ತು ಬೆಳಕು, ಇನ್ನೊಂದು ವೇದಿಕೆಯಲ್ಲಿ ರಾಯಲ್ ಶೋ ನಡೆಯಲಿದೆ. ಉತ್ಸವಕ್ಕೆ ಜನರನ್ನು ಕರೆತರಲು ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಹೊಸಪೇಟೆ, ಕಂಪ್ಲಿ ಹಾಗೂ ಪಾಪಿನಾಯಕನಹಳ್ಳಿಯಲ್ಲಿ ಮೂರು ಪಿಕಪ್ ಪಾಯಿಂಟ್ ಮಾಡಲಾಗಿದೆ. ಮೂರು ದಿನಗಳ ಕಾಲ ಒಟ್ಟು 80 ಬಸ್ಸುಗಳು ಸಂಚಾರ ನಡೆಸಲಿವೆ. ಈ ಸಾರಿಗೆ ವ್ಯವಸ್ಥೆ ಸಂಪೂರ್ಣ ಉಚಿತವಾಗಿದೆ...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more