By: Oneindia Kannada Video Team
Published : December 12, 2017, 02:10

2021ರ ವೇಳೆಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನಮ್ಮ ಮೆಟ್ರೋ

Subscribe to Oneindia Kannada

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನಮ್ಮ ಮೆಟ್ರೋ ಸಂಪರ್ಕ ಕಲ್ಪಿಸುವ ಪ್ರಸ್ತಾವನೆಗೆ ಸಚಿವ ಸಂಪುಟ ಸೋಮವಾರ ಅನುಮೋದನೆ ನೀಡಿದೆ.ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನಮ್ಮ ಮೆಟ್ರೋ ವನ್ನು ಅಂಪರ್ಕಿಸುವ 5,950 ಕೋಟಿ ರೂ. ಪ್ರಸ್ತಾವನೆಯ ಯೋಜನೆಯನ್ನು ಸಂಪುಟದ ಮುಂದೆ ಇರಿಸಲಾಗಿತ್ತು. ನಮ್ಮ ಮೆಟ್ರೋ ಮೊದಲ ಹಂತದ ಕಾಮಗಾರಿ ನಡೆಯುತ್ತಿರುವಾಗಲೇ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೂ ಮೆಟ್ರೋ ಸಂಪರ್ಕ ಕಲ್ಪಿಸುವಂತೆ ಸಾರ್ವಜನಿಕರು ಮನವಿ ಮಾಡಿದ್ದರು. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವರೆಗೂ ಮೆಟ್ರೋ ರೈಲು ಸಂಪರ್ಕ ಕಲ್ಪಿಸುವಂತೆ ಸಾರ್ವಜನಿಕ ವಲಯದಲ್ಲಿ ಭಾರಿ ಒತ್ತಡವಿದೆ. ಇದಕ್ಕೆ ರಾಜ್ಯ ಸರ್ಕಾರ ಸ್ಪಂದಿಸಿದೆ. ಕೇಂದ್ರ ಸರ್ಕಾರ ನೆರವು ಬಿಐಎಎಲ್ ಸಹಭಾಗಿತ್ವ ಹಾಗೂ ಸಾಲ ಸೌಲಭ್ಯದೊಂದಿಗೆ ಈ ಯೋಜನೆ ಕೈಗೆತ್ತಿಕೊಳ್ಳಲು ತೀರ್ಮಾನಿಸಲಾಗಿದೆ. 2021ಕ್ಕೆ ಕಾಮಗಾರಿ ಪೂರ್ಣಗೊಳ್ಳಬೇಕು ಎನ್ನುವುದು ಸರ್ಕಾರದ ಗುರಿಯಾಗಿದೆ .

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!