By: Oneindia Kannada Video Team
Published : November 17, 2017, 04:17

ನ.19ರಿಂದ ಬೆಂಗಳೂರುಮೈಸೂರು ಜೋಡಿ ಮಾರ್ಗದ ರೈಲು ಸಂಚಾರ

Subscribe to Oneindia Kannada

ಬಹುನಿರೀಕ್ಷಿತ ಬೆಂಗಳೂರು-ಮೈಸೂರು ದ್ವಿಪಥ ರೈಲು ಯೋಜನೆ ಕಾಮಗಾರಿ ಪೂರ್ಣಗೊಂಡಿದೆ. ನ.19ರಿಂದ ಮಾರ್ಗದಲ್ಲಿ ರೈಲುಗಳ ಸಂಚಾರ ಆರಂಭವಾಗಲಿದೆ. ರೈಲ್ವೆ ಸುರಕ್ಷತಾ ಆಯುಕ್ತರು ಮಾರ್ಗದಲ್ಲಿನ ಕಾಮಗಾರಿಗಳನ್ನು ಪರಿಶೀಲನೆ ನಡೆಸಿ ರೈಲುಗಳ ಸಂಚಾರಕ್ಕೆ ಒಪ್ಪಿಗೆ ನೀಡಿದ್ದಾರೆ. 2011ರಲ್ಲಿ ಪೂರ್ಣಗೊಳ್ಳಬೇಕಿದ್ದ ಕಾಮಗಾರಿ ಮುಕ್ತಾಯಗೊಂಡು, ಕೊನೆಗೂ ರೈಲು ಸಂಚಾರಕ್ಕೆ ಅನುಮತಿ ಸಿಕ್ಕಿದೆ. 2008ರಲ್ಲಿ ಬೆಂಗಳೂರು-ಮೈಸೂರು ಜೋಡಿ ರೈಲು ಮಾರ್ಗ ಕಾಮಗಾರಿ ಆರಂಭವಾಗಿತ್ತು. ನಿರೀಕ್ಷೆಯಂತೆ 2011ರಲ್ಲಿ ಕಾಮಗಾರಿ ಪೂರ್ಣಗೊಳ್ಳಬೇಕಿತ್ತು. ಆದರೆ, ಟಿಪ್ಪು ಸುಲ್ತಾನ್ ಕಾಲದ ಶಸ್ತ್ರಾಗಾರ ಸ್ಥಳಾಂತರದ ಕಾರಣ ಕಾಮಗಾರಿ ವಿಳಂಬವಾಗಿತ್ತು. ಅಮೆರಿಕ ವೂಲ್ಫ್ ಹಾಗೂ ನವದೆಹಲಿಯ ಪಿಎಸ್‌ಎಲ್ ಇಂಜಿನಿಯರಿಂಗ್ ಕಂಪನಿಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಸುಮಾರು 1 ಸಾವಿರ ಟನ್ ತೂಕದ ಶಸ್ತ್ರಾಗಾರವನ್ನು ಸ್ಥಳಾಂತರ ಮಾಡಿದ್ದರು. ನಂತರ ಶ್ರೀರಂಗಪಟ್ಟಣದಲ್ಲಿ ಬಾಕಿ ಉಳಿದಿದ್ದ ಕಾಮಗಾರಿಯನ್ನು ಪೂರ್ಣಗೊಳಿಸಿ ರೈಲ್ವೆ ಸಂಚಾರಕ್ಕೆ ಅನುಮತಿ ಪಡೆಯಲಾಗಿದೆ. ನ.1ರಿಂದ ಮಾರ್ಗದಲ್ಲಿ ರೈಲುಗಳ ಸಂಚಾರ ಆರಂಭವಾಗುತ್ತಿದೆ

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!