ಟಿಎಂಸಿ ಪಕ್ಷದಿಂದ ಮಮತಾ ಬ್ಯಾನರ್ಜಿ ಮತ್ತು ಅಭಿಷೇಕ್ ಬ್ಯಾನರ್ಜಿ ಉಚ್ಛಾಟನೆ! ಎಂಥಾ ಕಾಲ ಬಂತು
ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಸೋಲಿನ ಬಳಿಕ ಮಮತಾ ಬ್ಯಾನರ್ಜಿ ಹಾಗೂ ಟಿಎಂಸಿ ಪಕ್ಷದ ಪರಿಸ್ಥಿತಿ ಶೋಚನೀಯವಾಗಿದೆ. ಮಮತಾ ಬ್ಯಾನರ್ಜಿ ಸ್ಥಾಪಿಸಿದ ತೃಣಮೂಲಕ ಕಾಂಗ್ರೆಸ್ ಪಕ್ಷ ಒಡೆದು ಹೋಳಾಗಿದೆ. ಬಂಡಾಯ ಗುಂಪು ದಿನದಿಂದ ದಿನಕ್ಕೆ ದೊಡ್ಡದಾಗುತ್ತಿದೆ. ಈ ಬಂಡಾಯ ಗುಂಪು ಇದೀಗ ಅಸಲಿ ಟಿಎಂಸಿ ಪಕ್ಷ ಎಂದು ತಮ್ಮನ್ನು ತಾವು ಕರೆದುಕೊಂಡಿದ್ದು ಮಾತ್ರವಲ್ಲ, ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ಕಿತ್ತೆಸೆದು ಶಾಸಕ ಅರೂಪ್ ರಾಯ್‌ಗೆ ಪಟ್ಟ ಕಟ್ಟಿದೆ. ಇಷ್ಟೇ ಅಲ್ಲ ಮಮತಾ ಬ್ಯಾನರ್ಜಿ ಆಪ್ತ ಸಂಬಂಧಿ ಅಭಿಷೇಕ್ ಬ್ಯಾನರ್ಜಿಯನ್ನು ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಅಮಾನತು ಮಾಡಿದೆ.
Video Published On: Tuesday, Jun 23, 2026, 06:04 [IST]


Click it and Unblock the Notifications