By : Oneindia Kannada Video Team
Published : December 19, 2017, 01:31

ಒಂದೇ ಹಡಗಿನಲ್ಲಿ ತೇಲುತ್ತಿರುವ ಬಿಜೆಪಿ ಸಿಎಂ ಅಭ್ಯರ್ಥಿ ಹಾಗು ಕೆಪಿಸಿಸಿ ಅಧ್ಯಕ್ಷ ಡಾ ಜಿ ಪರಮೇಶ್ವರ್

2013ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ, ಬಿಜೆಪಿಯ ಆಡಳಿತ ವಿರೋಧಿ ಅಲೆ, ಆಂತರಿಕ ಕಚ್ಚಾಟ, ಭ್ರಷ್ಟಾಚಾರ ಪ್ರಕರಣಗಳಿಂದ ರೋಸಿ ಹೋಗಿದ್ದ ಮತದಾರ, ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡಿದ್ದ. ಕೆಪಿಸಿಸಿ ಅಧ್ಯಕ್ಷರಾಗಿದ್ದ ಜಿ ಪರಮೇಶ್ವರ್ ಮತ್ತು ಪಕ್ಷದ ಇತರ ಮುಖಂಡರು, ಪಕ್ಷವನ್ನು ದಡಕ್ಕೆ ಸೇರಿಸುವಲ್ಲಿ ಯಶಸ್ವಿಯಾಗಿದ್ದರು. ಆದರೆ, ಖುದ್ದು ಪರಮೇಶ್ವರ್, ಕೊರಟಗೆರೆ ಕ್ಷೇತ್ರದಲ್ಲಿ ಸೋಲುವ ಮೂಲಕ ಅವರ ಸಿಎಂ ಕನಸು ಭಗ್ನವಾಗಿತ್ತು.ಒಂದು ವೇಳೆ ಅಂದು ಪರಮೇಶ್ವರ್ ಸೋಲದೇ ಇರುತ್ತಿದ್ದರೆ, ಇಂದು ಸಿದ್ದರಾಮಯ್ಯ ಮುಖ್ಯಮಂತ್ರಿ ಆಗುತ್ತಿರಲಿಲ್ಲವೇನೋ? ಈಗ ಗುಜರಾತ್ ಮತ್ತು ಹಿಮಾಚಲ ಪ್ರದೇಶದ ಅಸೆಂಬ್ಲಿ ಚುನಾವಣಾ ಫಲಿತಾಂಶ ಹೊರಬಿದ್ದಿದೆ. ಎರಡೂ ರಾಜ್ಯಗಳಲ್ಲಿ ಬಿಜೆಪಿ ಗೆದ್ದಿದೆ.ಇಲ್ಲಿ ಪರಮೇಶ್ವರ್ ಅವರಿಗಾದ ಗತಿ, ಹಿಮಾಚಲ ಪ್ರದೇಶದಲ್ಲಿ ಪಕ್ಷದ ಸಿಎಂ ಅಭ್ಯರ್ಥಿ ಪ್ರೇಮ್ ಕುಮಾರ್ ಧುಮಾಲ್ ಅವರಿಗಾಗಿದೆ. ಧುಮಾಲ್ ಪಕ್ಷದ ಸಿಎಂ ಅಭ್ಯರ್ಥಿ ಎಂದು ಬಿಜೆಪಿ ಘೋಷಿಸಿದ್ದರೂ, ಅವರು ತಾವು ಪ್ರತಿನಿಧಿಸುವ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ಎದುರು ಸೋಲು ಅನುಭವಿಸಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!