By : Oneindia Kannada Video Team
Published : November 24, 2017, 05:51

ಬಿಜೆಪಿ ಪರಿವರ್ತನಾ ಯಾತ್ರೆಗೆ 17 ದಿನ, ಪಕ್ಷಕ್ಕೆ ಆಗುವ ಲಾಭಗಳು

ಬೆಂಗಳೂರು, ನವೆಂಬರ್ 24 : ಕರ್ನಾಟಕ ಬಿಜೆಪಿಯ 'ನವ ಕರ್ನಾಟಕ ನಿರ್ಮಾಣ ಪರಿವರ್ತನಾ ಯಾತ್ರೆ' ಹದಿನೇಳು ದಿನಗಳನ್ನು ಪೂರೈಸಿದೆ. ಮೂರು ದಿನಗಳ ವಿಶ್ರಾಂತಿ ಬಳಿಕ ನಾಯಕರು ನ.27ರಂದು ಯಾತ್ರೆ ಮತ್ತೆ ಆರಂಭಿಸಲಿದ್ದಾರೆ.ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಯಾಗುವ ಮೊದಲೇ ಬಿಜೆಪಿ ಪರಿವರ್ತನಾ ಯಾತ್ರೆ ಮೂಲಕ ಒಂದು ಹಂತದ ಪ್ರಚಾರ ಕಾರ್ಯವನ್ನು ಮುಕ್ತಾಯ ಮಾಡಲಿದೆ. ಜನವರಿಯಲ್ಲಿ ಯಾತ್ರೆಯ ಸಮಾರೋಪ ಸಮಾರಂಭ ನಡೆಯಲಿದೆ.018ರ ಚುನಾವಣೆಯಲ್ಲಿ 150 ಸ್ಥಾನಗಳಲ್ಲಿ ಜಯಗಳಿಸಬೇಕು ಎಂಬ ಗುರಿಯನ್ನು ಕರ್ನಾಟಕ ಬಿಜೆಪಿ ಹೊಂದಿದೆ. ಇದಕ್ಕಾಗಿ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಸಮಾವೇಶಗಳನ್ನು ನಡೆಸುವ ಮೂಲಕ ಪ್ರಚಾರ ನಡೆಸುತ್ತಿದೆ.ರ್ನಾಟಕದ ಆಡಳಿತ ಪಕ್ಷ ಕಾಂಗ್ರೆಸ್ 'ಮನೆ-ಮನೆಗೆ ಕಾಂಗ್ರೆಸ್' ಎಂಬ ಅಭಿಯಾನ ನಡೆಸುತ್ತಿದೆ. ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು 'ಕುಮಾರಪರ್ವ' ಎಂಬ ಹೆಸರಿನಲ್ಲಿ ರಾಜ್ಯ ಪ್ರವಾಸ ಮಾಡುತ್ತಿದ್ದಾರೆ. ಬಿಜೆಪಿಯ ಪರಿವರ್ತನಾ ಯಾತ್ರೆಯಿಂದ ಪಕ್ಷಕ್ಕೆ ಆಗುವ ಲಾಭಗಳೇನು? ಇಲ್ಲಿದೆ ಮಾಹಿತಿ.ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆಯುತ್ತಿರುವ ಯಾತ್ರೆಯಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ದುರಾಡಳಿತವನ್ನು ಜನರ ಮುಂದಿಡಲಾಗುತ್ತಿದೆ. ಈ ಮೂಲಕ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿ ಆಡಳಿತ ವಿರೋಧಿ ಅಲೆ ಎಬ್ಬಿಸುವ ಪ್ರಯತ್ನ ಮಾಡಲಾಗುತ್ತಿದೆ. ಇದು ಪ್ರತಿಪಕ್ಷ ಬಿಜೆಪಿಗೆ ಚುನಾವಣೆಯಲ್ಲಿ ಸಹಾಯಕವಾಗಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!