By: Oneindia Kannada Video Team
Published : December 04, 2017, 11:02

'ಜೆಡಿಎಸ್‌ಗೆ ವೋಟು ಕೊಟ್ಟರೆ ಅದು ಕಾಂಗ್ರೆಸ್‌ಗೆ ಹೋಗುತ್ತದೆ'

Subscribe to Oneindia Kannada

ವಿಜಯಪುರ, ಡಿಸೆಂಬರ್ 03 : 'ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದಲ್ಲಿನ ಮಂತ್ರಿಗಳು, ಮಂತ್ರಿಗಳ ಮಕ್ಕಳು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ' ಎಂದು ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆರೋಪಿಸಿದರು.ವಿಜಯಪುರದ ಸಿಂಧಗಿಯಲ್ಲಿ ಭಾನುವಾರ ಬಿಜೆಪಿ ಪರಿವರ್ತನಾ ಯಾತ್ರೆ ನಡೆಯಿತು. ಯಡಿಯೂರಪ್ಪ ಬೃಹತ್ ಸಮಾವೇಶ ಉದ್ದೇಶಿಸಿ ಮಾತನಾಡಿದರು. ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಪರಿವರ್ತನಾ ಯಾತ್ರೆಯ ಸಮಾವೇಶಕ್ಕೂ ಮೊದಲು ಸಿಂಧಗಿ ಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರು ಬೃಹತ್ ಬೈಕ್ ಜಾಥಾ ನಡೆಸಿದರು. ಸುಮಾರು ಎರಡು ಸಾವಿರಕ್ಕೂ ಅಧಿಕ ಕಾರ್ಯಕರ್ತರು ಜಾಥಾದಲ್ಲಿ ಪಾಲ್ಗೊಂಡಿದ್ದರು,ಸಮಾವೇಶಕ್ಕೂ ಮೊದಲು ಮಾತನಾಡಿದ ಬಿ.ಎಸ್.ಯಡಿಯೂರಪ್ಪ ಅವರು, 'ವಿಜಯಪುರದ ಇಂಡಿ ಪಟ್ಟಣದಲ್ಲಿ ದೊಡ್ಡ ಪ್ರಮಾಣದ ಸಮಾವೇಶ ನಡೆದಿದೆ. ಒಬ್ಬರು ಹೆಸರು ಹೇಳಿದಕ್ಕೆ ತಪ್ಪು ತಿಳಿದುಕೊಂಡು ಮೈಕ್ ಕಸಿದುಕೊಂಡರು. ಕಾರ್ಯಕರ್ತರ ಜೊತೆಗೆ ಸಮಾಲೋಚನೆ ಮಾಡಲಾಗಿದೆ. ಎಲ್ಲರು ಒಟ್ಟಾಗಿ ಒಂದಾಗಿ ಹೋಗಬೇಕು, ಅಭ್ಯರ್ಥಿ ಯಾರು ಆಗಬೇಕೆಂದು? ಚರ್ಚೆ ಮಾಡಿ ಆಯ್ಕೆ ಮಾಡಲಾಗುತ್ತದೆ' ಎಂದು ತಿಳಿಸಿದ್ದೇನೆ' ಎಂದು ಸ್ಪಷ್ಟನೆ ನೀಡಿದರು.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!