By : Oneindia Kannada Video Team
Published : January 09, 2018, 05:54

ಹೆಬ್ಬಾಳ ಕಾಂಗ್ರೆಸ್ ಟಿಕೆಟ್ ಗಾಗಿ ಭೈರತಿ ಸುರೇಶ್ ಹಾಗು ರೆಹಮಾನ್ ಷರೀಫ್ ನಡುವೆ ಬಾರಿ ಪೈಪೋಟಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ, ವಿಧಾನಪರಿಷತ್ ಸದಸ್ಯ ಭೈರತಿ ಸುರೇಶ್ ಹೆಬ್ಬಾಳ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ?. ಸಿ.ಕೆ.ಜಾಫರ್ ಷರೀಫ್ ಮೊಮ್ಮಗ ರೆಹಮಾನ್ ಷರೀಫ್ ಅವರು ಸಹ ಕ್ಷೇತ್ರದ ಟಿಕೆಟ್ ಆಕಾಂಕ್ಷಿ 2016ರ ಫೆಬ್ರವರಿಯಲ್ಲಿ ಹೆಬ್ಬಾಳ ಕ್ಷೇತ್ರದಲ್ಲಿ ಉಪ ಚುನಾವಣೆ ನಡೆದಾಗ ಟಿಕೆಟ್‌ಗೆ ಭಾರೀ ಪೈಪೋಟಿ ಎದುರಾಗಿತ್ತು. ಕೊನೆ ಕ್ಷಣದ ತನಕ ಭೈರತಿ ಸುರೇಶ್ ಹೆಸರು ಕೇಳಿ ಬರುತ್ತಿತ್ತು. ಅಂತಿಮವಾಗಿ ರೆಹಮಾನ್ ಷರೀಫ್ ಟಿಕೆಟ್ ಪಡೆದಿದ್ದರು, ಸೋತಿದ್ದರು. ಈ ಬಾರಿಯ ಚುನಾವಣೆಯಲ್ಲಿಯೂ ರೆಹಮಾನ್ ಷರೀಫ್ ಟಿಕೆಟ್ ಆಕಾಂಕ್ಷಿ. ಈಗಾಗಲೇ ಸಿ.ಕೆ.ಜಾಫರ್ ಷರೀಫ್ ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಮೊಮ್ಮಗನಿಗೆ ಟಿಕೆಟ್ ನೀಡಬೇಕು ಎಂದು ಬೇಡಿಕೆ ಇಟ್ಟಿದ್ದಾರೆ. ಜೊತೆಗೆ ಭೈರತಿ ಸುರೇಶ್ ಹೆಸರು ಸಹ ಕೇಳಿಬರುತ್ತಿದೆ. ಭೈರತಿ ಸುರೇಶ್ ಹೆಬ್ಬಾಳ ಕ್ಷೇತ್ರದಲ್ಲಿ ಕಚೇರಿ ತೆರೆದು, ಪ್ರಚಾರ ಕಾರ್ಯ ಆರಂಭಿಸಿದ್ದಾರೆ ಎಂಬುದು ಸ್ಥಳೀಯರು ಹೇಳುವ ಮಾತು.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!