By : Oneindia Kannada Video Team
Published : March 01, 2018, 02:28

ಚಿಕ್ಕಮಗಳೂರಿನ ಚಾರ್ಮಡಿ ಘಾಟ್ ನಲ್ಲಿ ಕಾಡ್ಗಿಚ್ಚು

ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ನಲ್ಲಿ ಕಾಡ್ಗಿಚ್ಚಿಗೆ ಶೋಲಾ ಅರಣ್ಯ ಆಹುತಿಯಾಗುತ್ತಿದೆ. ಕಳೆದ ಹಲವು ದಿನಗಳಿಂದ ಕಾಡಿನ ಬೆಂಕಿ ನಂದಿಸಲು ಹರಸಾಹಸ ಪಡಲಾಗುತ್ತಿದೆ. ಅರಣ್ಯ ಪ್ರದೇಶದಲ್ಲಿ ಹತೋಟಿಗೆ ಬಾರದ ಕಾಡ್ಗಿಚ್ಚು, ವ್ಯಾಪಿಸುತ್ತಲೇ ಇದೆ. ಅರಣ್ಯ ಇಲಾಖೆಯ ನೂರಾರು ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಈಗಾಗಲೇ ನೂರಾರು ಎಕರೆ ಅರಣ್ಯ ಪ್ರದೇಶದ ಸಂಪೂರ್ಣ ಭಸ್ಮವಾಗಿದೆ. ಕಾಡ್ಗಿಚ್ಚಿನ ದಟ್ಟವಾದ ಹೊಗೆ ಆವರಿಸಿದ್ದು, ಪ್ರವಾಸಿಗರು ಮತ್ತು ಸ್ಥಳೀಯರು ಪರದಾಡುತ್ತಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!