By : Oneindia Kannada Video Team
Published : November 13, 2017, 01:21

ಡಿ ಕೆ ರವಿಯವರ ತಾಯಿ ಗೌರಮ್ಮ ಕೋಲಾರದಿಂದ 2018ರ ಚುನಾವಣೆಗೆ ಸ್ಪರ್ಧೆ

ಕೋಲಾರದಿಂದ ಚುನಾವಣೆ ಅಖಾಡಕ್ಕೆ ಡಿಕೆ ರವಿ ತಾಯಿ? ದಕ್ಷ ಐಎಎಸ್ ಅಧಿಕಾರಿ ಡಿ.ಕೆ. ರವಿ ಅವರ ಸಾವಿಗೆ ನ್ಯಾಯ ಸಿಕ್ಕಿಲ್ಲ. ಇದಕ್ಕಾಗಿ ಚುನಾವಣಾ ಕಣಕ್ಕಿಳಿದು ಹೋರಾಟ ನಡೆಸಲು ಅಭಿಮಾನಿಗಳು, ಬೆಂಬಲಿಗರು ಮುಂದಾಗಿದ್ದಾರೆ. ಈ ನಿಟ್ಟಿನಲ್ಲಿ ಡಿಕೆ ರವಿ ಅವರ ತಾಯಿ ಗೌರಮ್ಮ ಅವರನ್ನು ಕಣಕ್ಕಿಳಿಸಲು ಒತ್ತಡ ಹೇರಲಾಗುತ್ತಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಡಿಕೆ ರವಿ ಅವರ ತಾಯಿ ಗೌರಮ್ಮ ಅವರು ಕೋಲಾರದಿಂದ ಸ್ಪರ್ಧಿಸ ಲು ರವಿ ಅಭಿಮಾನಿಗಳು ಕೇಳಿಕೊಂಡಿರುವುದು ನಿಜ ಎಂದು ಖಾಸಗಿ ವಾಹಿನಿಯೊಂದಿಗೆ ಮಾತನಾಡುತ್ತಾ ಹೇಳಿದರು. ಆದರೆ, ಯಾವ ಪಕ್ಷದ ಬೆಂಬಲ ಕೋರುತ್ತಾರೆ ಅಥವಾ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಾರೆ ಎಂಬುದರ ಸುಳಿವು ಬಿಟ್ಟುಕೊಡಲಿಲ್ಲ.ಡಿ.ಕೆ. ರವಿ ಅವರ ಸಾವಿನ ಬಗ್ಗೆ ವಿಧಾನಸಭೆಯಲ್ಲಿ ಧ್ವನಿ ಎತ್ತುವ ಮೂಲಕ ಹೋರಾಟ ನಡೆಸಬೇಕಿದೆ ಎಂಬುದು ಅವರ ಬೆಂಬಲಿಗರ ಅನಿಸಿಕೆಯಾಗಿದ್ದು, ಈ ಬಗ್ಗೆ ಸಾಮಾಜಿಕ ಜಾಲ ತಾಣಗಳಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!