By: Oneindia Kannada Video Team
Published : November 09, 2017, 06:00

ಡಿ ಕೆ ಶಿವಕುಮಾರ್ ಬಿಜೆಪಿ ಸೇರುವ ಬಗ್ಗೆ ಯಾರು ಏನು ಹೇಳಿದರು?

Subscribe to Oneindia Kannada

ಡಿಕೆಶಿ ಬಿಜೆಪಿಗೆ : ಸುಳ್ಳು, ಹಾಸ್ಯಾಸ್ಪದ ಎಂದ ಬಿಜೆಪಿ. 'ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಂದಲೇ ಬಿಜೆಪಿ ಸೇರುವಂತೆ ಡಿ.ಕೆ.ಶಿವಕುಮಾರ್ ಮೇಲೆ ಒತ್ತಡ ಹಾಕಲಾಗಿದೆ' ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ. ಬೆಂಗಳೂರಿನಲ್ಲಿ ಬುಧವಾರ ನೋಟು ನಿಷೇಧ ದಿನದ ಅಂಗವಾಗಿ ಆಯೋಜಿಸಲಾಗಿದ್ದ ಕರಾಳ ದಿನಾಚರಣೆ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಪಾಲ್ಗೊಂಡಿದ್ದರು. 'ಅಧಿಕಾರಿಗಳಿಂದಲೇ ಬಿಜೆಪಿ ಸೇರುವಂತೆ ಆಹ್ವಾನವನ್ನೂ ನೀಡಲಾಗಿದೆ. ಬಿಜೆಪಿ ಯಾವ ಮಟ್ಟಕ್ಕೆ ಕೇಸರೀಕರಣ ಮಾಡುತ್ತಿದೆ ಎಂಬುದು ಈ ಮೂಲಕ ಗೊತ್ತಾಗುತ್ತಿದೆ' ಎಂದು ಹೇಳಿದ್ದರು.ವಿವಿಧ ಬಿಜೆಪಿ ನಾಯಕರು ಸಿದ್ದರಾಮಯ್ಯ ಅವರ ಈ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದಾರೆ. 'ಇದು ಸಿದ್ದರಾಮಯ್ಯ ಅವರ ರಾಜಕೀಯ ಡೊಂಬರಾಟದ ಭಾಗ. ರಾಜಕೀಯ ಗೊಂದಲಗಳನ್ನು ಸೃಷ್ಟಿ ಮಾಡಲು ಈ ಹೇಳಿಕೆ ನೀಡಿದ್ದಾರೆ' ಎಂದು ಬಿ.ಎಸ್.ಯಡಿಯೂರಪ್ಪ ಟೀಕಿಸಿದ್ದಾರೆ.'ಮೋದಿ ಸರ್ಕಾರ ಆದಾಯ ತೆರಿಗೆ ಇಲಾಖೆ ಮತ್ತು ಜಾರಿ ನಿರ್ದೇಶನಾಲಯಗಳನ್ನು ದುರ್ಬಳಕೆ ಮಾಡಿಕೊಂಡು ತಮಗೆ ಆಗದವರ ವಿರುದ್ಧ ದಾಳಿ ನಡೆಸಲಾಗುತ್ತಿದೆ. ಡಿ.ಕೆ.ಶಿವಕುಮಾರ್ ಮನೆಗೆ ಬಂದ ಅಧಿಕಾರಿಗಳೇ ಬಿಜೆಪಿ ಸೇರುವಂತೆ ಅವರಿಗೆ ಒತ್ತಡ ಹಾಕಿದ್ದರು' ಎಂದು ಸಿದ್ದರಾಮಯ್ಯ ಆರೋಪ ಮಾಡಿದ್ದರು.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!