By: Oneindia Kannada Video Team
Published : November 29, 2017, 01:58

ಡಿಐಜಿ ರೂಪಾರವರು 20 ಕೋಟಿ ಮಾನನಷ್ಟ ಮೊಕದ್ದಮೆ ಬೆನ್ನಿಗೆ ಎಸಿಬಿ ತನಿಖೆಗೆ ಆಗ್ರಹ

Subscribe to Oneindia Kannada

ಮಾನನಷ್ಟ ಮೊಕದ್ದಮೆ ಬೆನ್ನಲ್ಲೇ ಎಸಿಬಿ ತನಿಖೆಗೆ ಡಿ. ರೂಪಾ ಆಗ್ರಹ. : ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನಡೆಯುತ್ತಿದ್ದ ಅಕ್ರಮಗಳನ್ನು ಬಯಲಿಗೆಳೆದಿದ್ದ ಡಿಐಜಿ ಡಿ. ರೂಪಾ ಈ ಸಂಬಂಧ ಎಸಿಬಿ ತನಿಖೆ ನಡೆಯಬೇಕು ಎಂದು ಆಗ್ರಹಿಸಿದ್ದಾರೆ. ಡಿ. ರೂಪಾ ವಿರುದ್ಧ ಬಂಧೀಖಾನೆ ವಿಭಾಗದ ಮುಖ್ಯಸ್ಥರಾಗಿದ್ದು ನಿವೃತ್ತರಾಗಿರುವ ಎಂಎನ್ ಸತ್ಯನಾರಾಯಣ ರಾವ್ 20 ಕೋಟಿ ರೂಪಾಯಿ ಮೊತ್ತದ ಮಾನನಷ್ಟ ಮೊಕದ್ದಮೆ ದಾಖಲಿಸಿದ ಬೆನ್ನಿಗೆ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ.ಜೈಲಿನಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ಎಸಿಬಿ ತನಿಖೆಯಾಗಬೇಕು ಎಂದು ರೂಪಾ ಒತ್ತಾಯಿಸಿದ್ದಾರೆ. "ಜೈಲಿನಲ್ಲಿ ಅಕ್ರಮಗಳು ನಡೆದಿವೆ ಮತ್ತು ಕೆಲವು ಖೈದಿಗಳಿಗೆ ವಿಶೇಷ ಸೌಲಭ್ಯಗಳನ್ನು ನೀಡಲಾಗಿತ್ತು ಎಂಬುದು ವಿನಯ್ ಕುಮಾರ್ ವರದಿಯಲ್ಲಿ ಬಹಿರಂಗವಾಗಿದೆ. ಇದೀಗ ಯಾಕೆ ವಿಶೇಷ ಸಲತ್ತುಗಳನ್ನು ನೀಡಲಾಗಿತ್ತು ಎಂಬುದನ್ನು ಪತ್ತೆ ಹಚ್ಚಬೇಕಾಗಿದೆ ಮತ್ತು ಈ ಕುರಿತು ಎಸಿಬಿ ತನಿಖೆ ನಡೆಯಬೇಕು. ನಾನು ನನ್ನ ಹೇಳಿಕೆಗೆ ಬದ್ಧನಾಗಿದ್ದೇನೆ ಮತ್ತು ಈ ಪ್ರಕರಣದಲ್ಲಿ ಎಸಿಬಿ ತನಿಖೆ ನಡೆಯಬೇಕು ಎಂದು ಆಗ್ರಹಿಸುತ್ತೇನೆ," ಎಂದು ಅವರು ಹೇಳಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!