By : Oneindia Kannada Video Team
Published : March 30, 2018, 11:59

ಕಾಂಗ್ರೆಸ್ ನಿಂದ ಅಫ್ಜಲ್ಪುರ ಕ್ಷೇತ್ರದ ಎಂ ಎಲ್ ಎ ಮಾಲಿಕಯ್ಯ ಗುತ್ತೇದಾರ್ ಉಚ್ಚಾಟನೆ

ಅಫ್ಜಲ್‌ಪುರ ಕ್ಷೇತ್ರದ ಶಾಸಕ ಮಾಲೀಕಯ್ಯ ಗುತ್ತೇದಾರ್ ಅವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. ಕಾಂಗ್ರೆಸ್ ತೊರೆದು ಬಿಜೆಪಿ ಸೇರುವುದಾಗಿ ಗುರುವಾರ ಅವರು ಘೋಷಣೆ ಮಾಡಿದ್ದರು. ಗುರುವಾರ ಸಂಜೆ ಕೆಪಿಸಿಸಿ ಅಧ್ಯಕ್ಷ ಡಾ.ಪರಮೇಶ್ವರ ಅವರು ಮಾಲೀಕಯ್ಯ ಗುತ್ತೇದಾರ್ ಅವರನ್ನು 6 ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟನೆ ಮಾಡಿ ಆದೇಶ ಹೊರಡಿಸಿದ್ದಾರೆ. ಇದರಿಂದಾಗಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುವ ಮೊದಲೇ ಅವರು ಉಚ್ಚಾಟನೆಗೊಂಡಂತಾಗಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!